Latest

ಅಕ್ರಮ ಸ್ಪಿರಿಟ್ ಸಾಗಾಟಕ್ಕೆ ಅಬಕಾರಿ ದಾಳಿ: ಟ್ಯಾಂಕರ್ ಸಹಿತ ಓರ್ವನ ಬಂಧನ”

ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಅಕ್ರಮ ಮದ್ಯದ ಸಾಗಾಟವನ್ನು ಪತ್ತೆ ಹಚ್ಚಿ, ಓರ್ವನನ್ನು ಬಂಧಿಸಿರುವ ಘಟನೆ ನಡೆದಿದೆ. ಗೋವಾ ಕಡೆಗೆ ಸಾಗಿಸುತ್ತಿದ್ದ 40,000 ಲೀಟರ್ ಸ್ಪಿರಿಟ್‌ನ್ನು ವಶಕ್ಕೆ ಪಡೆಯಲಾಗಿದೆ.

ನಂಬರ್ ಪ್ಲೇಟ್ ಬದಲಿಸಿ ತಪ್ಪಿಸಿಕೊಳ್ಳಲು ಯತ್ನ

ಬಂಧಿತ ಓಂ ಪ್ರಕಾಶ್, ಕಳೆದ ಆರು ತಿಂಗಳಿಂದ ಅಕ್ರಮವಾಗಿ ಟ್ಯಾಂಕರ್ ಮೂಲಕ ಸ್ಪಿರಿಟ್ ಸಾಗಿಸುತ್ತಿದ್ದ ಎನ್ನಲಾಗುತ್ತಿದೆ. ಅಧಿಕಾರಿಗಳಿಗೆ ತಪ್ಪಿಸಿಕೊಳ್ಳಲು ನಂಬರ್ ಪ್ಲೇಟ್ ಬದಲಿಸುವ ತಂತ್ರ ಬಳಕೆ ಮಾಡಿದ್ದರೂ, ಈ ಬಾರಿ ಅದೃಷ್ಟ ಕೈಕೊಟ್ಟಿದೆ. ಮಾಹಿತಿ ಪಡೆದು ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು, 24 ಲಕ್ಷ ಮೌಲ್ಯದ ಸ್ಪಿರಿಟ್ ಮತ್ತು 55 ಲಕ್ಷ ಮೌಲ್ಯದ ಟ್ಯಾಂಕರ್ ಸಮೇತ ಆರೋಪಿಯನ್ನು ಬಂಧಿಸಿದ್ದಾರೆ.

ಮಾಲೀಕರಿಗೂ ಪ್ರಕರಣ

ಈ ಅಕ್ರಮ ವಹಿವಾಟಿಗೆ ಸಂಬಂಧಿಸಿದಂತೆ ಟ್ಯಾಂಕರ್ ಮಾಲೀಕ ಸುಖದೇವ್ ವಿರುದ್ಧವೂ ದೂರು ದಾಖಲಿಸಲಾಗಿದೆ. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಗೊಂಡಿದ್ದು, ಅಕ್ರಮ ಮದ್ಯದ ಸಾಗಾಟದ ಹೆಚ್ಚಿನ ಜಾಲವಿದೆ ಎಂದೇ ಅನುಮಾನ ವ್ಯಕ್ತವಾಗಿದೆ.

ಅಬಕಾರಿ ಇಲಾಖೆ ಮತ್ತಷ್ಟು ತನಿಖೆ ನಡೆಸಿ, ಅಕ್ರಮ ಮದ್ಯ ಮಾರಾಟದ ಕೊಂಡಿಗಳನ್ನು ಪತ್ತೆ ಮಾಡುವ ನಿರೀಕ್ಷೆ ಇದೆ.

nazeer ahamad

Recent Posts

ಬಾಗಲಕೋಟೆ ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…

19 hours ago

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago