ಸಾಮಾಜಿಕ ಜಾಲತಾಣಗಳಲ್ಲಿ ಅಪರಿಚಿತರೊಂದಿಗೆ ಬೆಳೆಸುವ ಸ್ನೇಹ ಕೆಲವೊಮ್ಮೆ ಎಷ್ಟೊಂದು ಅಪಾಯಕಾರಿಯಾಗಬಹುದು ಎಂಬುದಕ್ಕೆ ಹಾವೇರಿಯಲ್ಲಿ ನಡೆದಿರುವ ಈ ಘಟನೆ ಉದಾಹರಣೆಯಾಗಿದೆ. ಫೇಸ್‌ಬುಕ್‌ನಲ್ಲಿ ಆರಂಭವಾದ ಪರಿಚಯವು ಮಹಿಳೆಯೊಬ್ಬಳನ್ನು ಬ್ಲ್ಯಾಕ್‌ಮೇಲ್, ಲೈಂಗಿಕ ಕಿರುಕುಳ ಹಾಗೂ ಜೀವ ಬೆದರಿಕೆಯವರೆಗೆ ಕೊಂಡೊಯ್ದಿದೆ.
ಹಾವೇರಿಯ ಬಸವೇಶ್ವರ ನಗರದ ನಿವಾಸಿ ಹಾಗೂ ಗುತ್ತಿಗೆದಾರ ಸಚಿನ್ ದಾನಪ್ಪನವರ್ ಮತ್ತು ಆತನ ಪತ್ನಿ ಸುಪ್ರಿಯಾ ವಿರುದ್ಧ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಹಾವೇರಿ CEN ಸೈಬರ್ ಕ್ರೈಂ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆಯ ವೇಳೆ ಇಬ್ಬರ ವಿರುದ್ಧ ಐಟಿ ಕಾಯ್ದೆ (IT Act) ಹಾಗೂ ಭಾರತೀಯ ನ್ಯಾಯ ಸಂಹಿತೆ (BNS)ಯ ವಿವಿಧ ಗಂಭೀರ ಕಲಂಗಳಡಿ ಎಫ್‌ಐಆರ್ ದಾಖಲಿಸಿ ಕ್ರಮ ಕೈಗೊಂಡಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಪಕ್ಕದ ಪ್ರದೇಶದ ನಿವಾಸಿಯಾಗಿದ್ದ ಕಾರಣ ಸಂತ್ರಸ್ತೆ ಸಚಿನ್‌ನೊಂದಿಗೆ ಸ್ನೇಹಪೂರ್ವಕವಾಗಿ ಮಾತನಾಡುತ್ತಿದ್ದರು. ಈ ಪರಿಚಯವನ್ನು ದುರುಪಯೋಗಪಡಿಸಿಕೊಂಡ ಆರೋಪಿ, ಮಹಿಳೆಯ ಖಾಸಗಿ ಫೋಟೋ ಮತ್ತು ವಿಡಿಯೊಗಳನ್ನು ಕಪಟವಾಗಿ ತನ್ನ ವಶಕ್ಕೆ ಪಡೆದುಕೊಂಡಿದ್ದಾನೆ ಎನ್ನಲಾಗಿದೆ. ಬಳಿಕ ಅವುಗಳನ್ನು ಆಧಾರವಾಗಿಸಿಕೊಂಡು ತನ್ನ ಲೈಂಗಿಕ ಆಸೆಗೆ ಸಹಕರಿಸುವಂತೆ ಮಹಿಳೆಯ ಮೇಲೆ ಒತ್ತಡ ಹೇರಿದ್ದಾನೆ ಎಂದು ಆರೋಪಿಸಲಾಗಿದೆ.
ಮಹಿಳೆ ಆರೋಪಿಯ ಬೇಡಿಕೆಗೆ ಒಪ್ಪದಿದ್ದಾಗ, ಖಾಸಗಿ ಫೋಟೋಗಳನ್ನು ಆಕೆಯ ಪತಿಗೆ ಕಳುಹಿಸುವುದಾಗಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಜುಲೈ 12ರಂದು PhonePe ಮೂಲಕ ಮಹಿಳೆಯ ಪತಿಗೆ ಖಾಸಗಿ ಫೋಟೋಗಳನ್ನು ಕಳುಹಿಸಿ ಮತ್ತಷ್ಟು ಮಾನಸಿಕ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇದಕ್ಕೂ ಮೀರಿಯಾಗಿ, ಆರೋಪಿ ಸಚಿನ್‌ನ ಪತ್ನಿ ಸುಪ್ರಿಯಾ ಕೂಡ ಮಹಿಳೆಗೆ ಜೀವ ಬೆದರಿಕೆ ಹಾಕಿ, “ಸುಪಾರಿ ನೀಡಿ ಕೊಲೆ ಮಾಡಿಸುತ್ತೇನೆ” ಎಂದು ಬೆದರಿಸಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ನಿರಂತರ ಬ್ಲ್ಯಾಕ್‌ಮೇಲ್ ಮತ್ತು ಬೆದರಿಕೆಯಿಂದ ಆತಂಕಗೊಂಡ ಮಹಿಳೆ ಕೊನೆಗೆ ಹಾವೇರಿ CEN ಸೈಬರ್ ಕ್ರೈಂ ಪೊಲೀಸರನ್ನು ಸಂಪರ್ಕಿಸಿದ್ದು, ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿ ಸಚಿನ್‌ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…
ಸೋನ್‌ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…
ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…
ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…
ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…
ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…