Categories: CrimeLatest

ಫೇಕ್ ಅಟ್ರಾಸಿಟಿ ಕೇಸ್ ಆರೋಪ: ಮನನೊಂದು ವಿಷ ಸೇವಿಸಿದ ವ್ಯಾಪಾರಿ ಸಾವು, ಹಲವು ಮಂದಿ ಪೊಲೀಸರ ವಶಕ್ಕೆ

ಬೆಂಗಳೂರು ಹೊರವಲಯದ ಕಾಡುಗೋಡಿ ಸಮೀಪದ ಚನ್ನಸಂದ್ರದ ಎಕೆಜಿ ಕಾಲೋನಿಯಲ್ಲಿ ಫೇಕ್ ಅಟ್ರಾಸಿಟಿ ಕೇಸ್‌ನಿಂದ ಮನನೊಂದು ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಪಾಪಣ್ಣ (42) ಮೃತ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಸಾವಿಗೆ ಮುನ್ನ ವಿಡಿಯೋ ಸಂದೇಶ ದಾಖಲಿಸಿ ಕೆಲವು ಮಂದಿಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಜೋಗಿ ಸೀನಾ, ಪ್ರಶಾಂತ್, ಸಂತೋಷ, ರಾಧಾ ಹಾಗೂ ಲಲಿತ್ ಕುಮಾರ್ ಸೇರಿದಂತೆ ಅವರ ಕುಟುಂಬದವರೇ ನನ್ನ ಸಾವಿಗೆ ಕಾರಣ ಎಂದು ಪಾಪಣ್ಣ ವಿಡಿಯೋದಲ್ಲಿ ಆರೋಪಿಸಿದ್ದಾರೆ.

ಈ ಹಿಂದೆ 2021ರಲ್ಲಿ ಅಟ್ರಾಸಿಟಿ ಪ್ರಕರಣ ದಾಖಲಿಸಿ ಬಳಿಕ ಕೇಸ್ ವಾಪಸ್ ಪಡೆಯಲು ಲಕ್ಷಾಂತರ ರೂಪಾಯಿ ಹಣ ಪಡೆದಿದ್ದರು. ಇದೀಗ ಮತ್ತೊಮ್ಮೆ ಸುಳ್ಳು ಪ್ರಕರಣ ದಾಖಲಿಸಿ ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂದು ಪಾಪಣ್ಣ ದೂರಿದ್ದಾರೆ. “ನಾನು ಬಡ ವ್ಯಾಪಾರಿ. ಸುಳ್ಳು ಕೇಸ್‌ಗಳ ಮೂಲಕ ಹಣ ಮಾಡುವ ಕೆಲಸ ನಡೆಯುತ್ತಿದೆ. ನನ್ನ ಕುಟುಂಬ ಹಾಗೂ ತಂಗಿಯನ್ನು ಕಾಪಾಡಿ” ಎಂದು ವಿಡಿಯೋದಲ್ಲಿ ಮನವಿ ಮಾಡಿದ್ದಾರೆ.

ನಿನ್ನೆ ರಾತ್ರಿ ಸುಮಾರು 10:05ರ ವೇಳೆಗೆ ವಿಡಿಯೋ ಕಳುಹಿಸಿದ್ದ ಪಾಪಣ್ಣ, ಬಳಿಕ ವಿಷ ಸೇವಿಸಿರುವುದಾಗಿ ತಿಳಿದುಬಂದಿದೆ. ಘಟನೆ ಮಾಹಿತಿ ತಿಳಿದ ತಕ್ಷಣ ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತನ ತಂಗಿ ಹಾಗೂ ಸಾಮಾಜಿಕ ಹೋರಾಟಗಾರ್ತಿ ಭಾಗ್ಯಶ್ರೀ ನೀಡಿದ ದೂರಿನ ಮೇರೆಗೆ, ವಿಡಿಯೋ ಆಧಾರವಾಗಿ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆಯೇ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

39 minutes ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

6 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

21 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago