Latest

ನಕಲಿ ಪ್ರಮಾಣಪತ್ರ ಹಗರಣ: ಡಾ. ಕೆ.ಎನ್. ಶಂಕರ್ ಅಮಾನತು

ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್‌ಐ) ತುರ್ತು ಚಿಕಿತ್ಸಾ ವಿಭಾಗದ ಹಿರಿಯ ವೈದ್ಯಾಧಿಕಾರಿ ಡಾ. ಕೆ.ಎನ್. ಶಂಕರ್ ಅವರನ್ನು ನಕಲಿ ವೈದ್ಯಕೀಯ ಪ್ರಮಾಣಪತ್ರ ನೀಡಿದ ಆರೋಪದ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ. ಈ ಕುರಿತು ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕೃತ ಆದೇಶವನ್ನು ಹೊರಡಿಸಿದೆ.

ಸಂಸ್ಥೆಯ ನಿರ್ದೇಶಕರು ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಲ್ಲಿಸಿದ ವರದಿಯಲ್ಲಿ, ಡಾ. ಶಂಕರ್ ನಕಲಿ ಪ್ರಮಾಣಪತ್ರ ನೀಡಿದದ್ದು ಹಾಗೂ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂಬ ಗಂಭೀರ ಆರೋಪಗಳನ್ನು ದಾಖಲಿಸಿದ್ದಾರೆ. ಸಂಬಂಧಿಸಿದ ತನಿಖಾ ವರದಿ ಮೇರೆಗೆ, ಬೋಧಕೇತರ ಗ್ರೂಪ್ ಎ ಹುದ್ದೆಗಳ ವಿಷಯದಲ್ಲಿ ಇಲಾಖೆ ಪ್ರಧಾನ ಕಾರ್ಯದರ್ಶಿಯವರೇ ಸಕ್ಸಮ ಪ್ರಾಧಿಕಾರರಾಗಿದ್ದು, ಅವರು ಈ ಕುರಿತು ತಕ್ಷಣ ಕ್ರಮ ಕೈಗೊಳ್ಳುವ ಸೂಚನೆ ನೀಡಿದ್ದರು.

ಇದಕ್ಕೆ ಅನುಗುಣವಾಗಿ, ಕರ್ನಾಟಕ ನಾಗರೀಕ ಸೇವಾ ವರ್ಗೀಕರಣ ನಿಯಂತ್ರಣ ಮತ್ತು ಮೇಲ್ಮನವಿ ನಿಯಮಗಳು ಹಾಗೂ ಬಿಎಂಸಿಆರ್‌ಐಯ ನಿಗದಿತ ನಿಯಮಕಾತಿ ಪ್ರಕ್ರಿಯೆಗಳಡಿ ಡಾ. ಶಂಕರ್ ವಿರುದ್ಧ ಶಿಸ್ತಿನ ಕ್ರಮ ಕೈಗೊಂಡು ಅವರನ್ನು ಅಮಾನತು ಮಾಡಲಾಗಿದೆ.

ಆರೋಪಗಳ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ತನಿಖೆಯನ್ನು ಮುಂದುವರೆಸಲಾಗುತ್ತಿದ್ದು, ಆರೋಪ ಸಾಬೀತಾದಲ್ಲಿ ಮುಂದಿನ ಹಂತದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಮೂಲಗಳು ತಿಳಿಸಿವೆ.

nazeer ahamad

Recent Posts

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

4 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

4 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

4 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

5 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

5 hours ago

ಗೌರಿಬಿದನೂರಿನಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ಬಳಕೆ ವಿರುದ್ಧ ದಾಳಿ – 36 ಸಿಲಿಂಡರ್‌ಗಳು ಜಪ್ತಿ

ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…

6 hours ago