ನವದೆಹಲಿ: ನಕಲಿ ಔಷಧ ತಯಾರಿಕಾ ದಂಧೆಗೆ ಸಂಬಂಧಿಸಿದ ಸಿಬಿಐ ತನಿಖೆಯಲ್ಲಿ ಅನುಕೂಲಕರ ಫಲಿತಾಂಶ ದೊರಕಿಸಿಕೊಡುವ ಭರವಸೆ ನೀಡಿ ₹3 ಕೋಟಿ ಲಂಚ ಪಡೆದ ಆರೋಪದ ಮೇಲೆ ನಾಗರಿಕ ವಾಯುಯಾನ ಭದ್ರತಾ ಸಂಸ್ಥೆ (ಬಿಸಿಎಎಸ್)ಯಲ್ಲಿ ಕೇಂದ್ರ ನಿಯೋಜನೆಯಲ್ಲಿದ್ದ ಹರಿಯಾಣ ಕೇಡರ್‌ನ 2012ರ ಬ್ಯಾಚ್‌ನ ಹಿರಿಯ ಐಪಿಎಸ್ ಅಧಿಕಾರಿ ದೀಪಕ್ ಗಹ್ಲಾವತ್ ಅವರನ್ನು ಸಿಬಿಐ ಬಂಧಿಸಿದೆ.
ಪ್ರಕರಣ ನಡೆದ ಸಮಯದಲ್ಲಿ ದೀಪಕ್ ಗಹ್ಲಾವತ್ ಅವರು ಬಿಸಿಎಎಸ್‌ನ ಪ್ರಾದೇಶಿಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಪುದುಚೇರಿ ಮೂಲದ ಉದ್ಯಮಿಯೊಬ್ಬರಿಗೆ ತಮ್ಮ ಪ್ರಭಾವವನ್ನು ಬಳಸಿಕೊಂಡು ಸಿಬಿಐ ತನಿಖೆಯಲ್ಲಿ ಅನುಕೂಲಕರ ವರದಿ ಸಿಗುವಂತೆ ಮಾಡಲಾಗುವುದು ಎಂದು ಭರವಸೆ ನೀಡಿ ಭಾರಿ ಮೊತ್ತದ ಲಂಚ ಸ್ವೀಕರಿಸಿದ್ದರೆಂದು ಆರೋಪಿಸಲಾಗಿದೆ.
ಬಂಧನದ ಬಳಿಕ ಸಿಬಿಐ ಅಧಿಕಾರಿಗಳು ದೀಪಕ್ ಗಹ್ಲಾವತ್ ಅವರಿಗೆ ಸಂಬಂಧಿಸಿದ ವಿವಿಧ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಹಲವು ಡಿಜಿಟಲ್ ಸಾಧನಗಳು, ಹಾರ್ಡ್ ಡಿಸ್ಕ್‌ಗಳು ಹಾಗೂ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಬಿಐ ವಕ್ತಾರರು ತಿಳಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸ್ ಅಪರಾಧ ವಿಭಾಗದ ಇನ್ಸ್‌ಪೆಕ್ಟರ್ ಪ್ರದೀಪ್ ಸಿಂಗ್, ಮಧ್ಯವರ್ತಿ ರಾಜ್‌ಕುಮಾರ್ ಹಾಗೂ ಉದ್ಯಮಿ ಎನ್. ರಾಜಾ ಸೇರಿದಂತೆ ಹಲವರ ವಿರುದ್ಧ ಜೂನ್ 8ರಂದು ಸಿಬಿಐ ಎಫ್‌ಐಆರ್ ದಾಖಲಿಸಿತ್ತು.
ಈಗಾಗಲೇ ಕಳೆದ ತಿಂಗಳು ಪ್ರದೀಪ್ ಸಿಂಗ್, ರಾಜ್‌ಕುಮಾರ್ ಸೇರಿದಂತೆ ಒಟ್ಟು ಏಳು ಮಂದಿಯನ್ನು ಸಿಬಿಐ ಬಂಧಿಸಿತ್ತು. ಆ ಕಾರ್ಯಾಚರಣೆಯಲ್ಲಿ ₹25 ಲಕ್ಷ ನಗದು ಹಾಗೂ ಮತ್ತೊಂದು ಸ್ಥಳದಿಂದ ₹90 ಲಕ್ಷ ಹಣದ ಜೊತೆಗೆ ಹಲವು ಆಕ್ಷೇಪಾರ್ಹ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಪ್ರಕರಣದ ತನಿಖೆಯನ್ನು ಸಿಬಿಐ ಮುಂದುವರಿಸಿದೆ.
ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…
ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…
ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…
ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…
ತಮಿಳುನಾಡಿನ ಚೆನ್ನೈನಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆಗೈದು, ಆಕೆಯ ದೇಹದ ಭಾಗಗಳನ್ನು ಬಳಸಿ ಬಿರಿಯಾನಿ ತಯಾರಿಸಿರುವ ಆರೋಪ ಕೇಳಿಬಂದಿದ್ದು, ಇಡೀ ಪ್ರಕರಣವೇ…
ಚನ್ನರಾಯಪಟ್ಟಣ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕುಟುಂಬಸ್ಥರು…