Latest

ಪಾರ್ಕ್‌ನಲ್ಲಿ ಪ್ರೇಮಿಗಳನ್ನು ಬೆದರಿಸಿ ಸುಲಿಗೆ ಮಾಡುತ್ತಿದ್ದ ನಕಲಿ ಪೊಲೀಸ್‌ ಬಂಧನ

ಬೆಂಗಳೂರು: ಪಾರ್ಕ್‌ಗಳಲ್ಲಿ ಕುಳಿತಿದ್ದ ಜೋಡಿಗಳನ್ನು ಟಾರ್ಗೆಟ್ ಮಾಡಿ ತಮ್ಮನ್ನು ಪೊಲೀಸ್ ಎಂದು ಪರಿಚಯಿಸಿಕೊಂಡು ಸುಲಿಗೆ ಮಾಡುತ್ತಿದ್ದ ಆರೋಪಿಯನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಅನೀಫ್ ಖಾನ್ ಎಂದು ಗುರುತಿಸಲಾಗಿದೆ.

ಆಸಿಫ್ ಎಂಬಾತ ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದು, ಕಾನೂನು ರಕ್ಷಕರಂತೆ ನಟನೆ ಮಾಡಿ ಯುವಜೋಡಿಗಳಿಗೆ ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದ. ಪಾರ್ಕ್‌ನಲ್ಲಿ ಕುಳಿತಿದ್ದವರ ಬಳಿ ಬಂದು, ಪೊಲೀಸ್ ತನಿಖೆ ಎಂದು ಭಯ ಹುಟ್ಟಿಸಿ ಹಣ ಹಾಗೂ ಆಭರಣ ಪಡೆದು ಪರಾರಿಯಾಗುತ್ತಿದ್ದ.

ಇತ್ತೀಚೆಗೆ, ಆಸಿಫ್ ಇಬ್ಬರು ವ್ಯಕ್ತಿಗಳಿಂದ 12 ಗ್ರಾಂ ಚಿನ್ನದ ಸರ, 5 ಗ್ರಾಂನ ಬೆಳ್ಳಿ ಉಂಗುರ ಹಾಗೂ ₹10,000 ನಗದು ಕಸಿದುಕೊಂಡು ತಪ್ಪಿಸಿಕೊಂಡಿದ್ದ. ಈ ಪ್ರಕರಣದ ತನಿಖೆ ಕೈಗೊಂಡ ಪೊಲೀಸರು, ಆರೋಪಿಯನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಆಸಿಫ್ ಈ ರೀತಿಯ ಹಲವಾರು ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

nazeer ahamad

Recent Posts

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

53 minutes ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

5 hours ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

8 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

13 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

1 day ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago