ಆನೇಕಲ್, ಜುಲೈ 16: ಗುತ್ತಿಗೆಗೆ ಜಮೀನು ನೀಡಲು ಒಪ್ಪದ ರೈತನ ವಿರುದ್ಧ ಪ್ರತೀಕಾರದ ಕ್ರಮವಾಗಿ ಗ್ರೀನ್‌ಹೌಸ್ ಧ್ವಂಸಗೊಳಿಸಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಸಿಂಗಸಂದ್ರ ಗ್ರಾಮದಲ್ಲಿ ನಡೆದಿದೆ.
ಘಟನೆಯು ಸ್ಥಳೀಯ ರೈತ ಕಾರ್ತಿಕ್ ರೆಡ್ಡಿ ಅವರ ಮೇಲೆ ಬೆಳಕಿಗೆ ಬಂದಿದೆ. ಮೂಲಗಳ ಪ್ರಕಾರ, ಕಾರ್ತಿಕ್ ರೆಡ್ಡಿ ಅವರು ಪ್ರಭಾವತಿ ಎಂಬುವರಿಂದ ಜಮೀನು ಖರೀದಿಸಿ ಅದರಲ್ಲಿ ಒಂದು ಎಕರೆ ಗಾತ್ರದ ಗ್ರೀನ್‌ಹೌಸ್ ನಿರ್ಮಿಸಿದ್ದರು. ಈ ಗ್ರೀನ್‌ಹೌಸ್ ಅನ್ನು ಆರೋಪಿಗಳಾದ ಹಾರಗದ್ದೆ ಅಣ್ಣಯಪ್ಪ, ಶ್ರೀಧರ್ ಮತ್ತು ಮುರಳಿ ಗುತ್ತಿಗೆಗೆ ತೆಗೆದುಕೊಳ್ಳಲು ಮುಂದಾಗಿದ್ದು, ಎಷ್ಟು ಬೇಕಾದರೂ ಕಡಿಮೆ ಬಿಲ್ಲು ನೀಡುವುದಾಗಿ ಹೇಳಿದ್ದಾರೆ.
ಆದರೆ, ಅಸಮಂಜಸ ಧರೆಯ ಕಾರಣದಿಂದ ಕಾರ್ತಿಕ್ ರೆಡ್ಡಿ ಈ ಗುತ್ತಿಗೆ ಅವಕಾಶವನ್ನು ನಿರಾಕರಿಸಿದ್ದಾರೆ. ಇದರಿಂದ ಕೋಪಗೊಂಡ ಆರೋಪಿಗಳು ಜಮೀನನ್ನೇ ಮಾರಾಟ ಮಾಡುವಂತೆ ದಪ್ಪ ದಂಡೆ ಹಿಡಿದಂತೆ ಧಮ್ಕಿ ಹಾಕಿದ್ದಾರೆ. ಅಲ್ಲದೆ, ಸ್ಥಳೀಯ ರೌಡಿಶೀಟರ್‌ಗಳನ್ನು ಕರೆಸಿ ಹಲ್ಲೆ ಮಾಡಿಸುವ ಬೆದರಿಕೆ ನೀಡಿದ್ದಾರೆ ಎಂಬ ಆರೋಪ ಕೂಡ ಕೇಳಿಬಂದಿದೆ.
ಹೆಚ್ಚು ಸಮಯದವಲ್ಲದೆ, ಒಂದು ವಾರದೊಳಗೆ ಆರೋಪಿಗಳು ಆ ಬೆದರಿಕೆಯನ್ನು ನಿಜಮಾಡಿದ್ದು, ರೌಡಿಗಳ ಸಹಾಯದಿಂದ ಕಾರ್ತಿಕ್ ರೆಡ್ಡಿಯವರ ಗ್ರೀನ್‌ಹೌಸ್ ಸಂಪೂರ್ಣವಾಗಿ ಧ್ವಂಸಗೊಳಿಸಿದ್ದಾರೆ. ಈ ವೇಳೆ ವಿಚಾರಣೆಗೆ ಹೋದ ಕಾರ್ತಿಕ್ ಕುಟುಂಬದ ಸದಸ್ಯರ ಮೇಲೂ ಹಲ್ಲೆ ನಡೆದಿದೆ.
ಈ ಬಗ್ಗೆ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪ್ರಕರಣದ ಬಗ್ಗೆ ಗಂಭೀರ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ರೈತ ಕುಟುಂಬ ಪೊಲೀಸರು ಮತ್ತು ಸರ್ಕಾರವನ್ನು ಒತ್ತಾಯಿಸಿದೆ.
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…