ಗೌರಿಬಿದನೂರು: ತೊಂಡೇಭಾವಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ರೈತರ ಹಣ ದುರುಪಯೋಗವಾಗಿರುವ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ಗ್ರಾಮಸ್ಥರು ಹಾಗೂ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗ್ರಾಮದ ಹಾಲು ಡೇರಿ ಆವರಣದಲ್ಲಿ ನಡೆದ ರೈತರ ಸಭೆಯಲ್ಲಿ ಆಡಳಿತ ಮಂಡಳಿ ಹಾಗೂ ಸಂಬಂಧಿತ ಅಧಿಕಾರಿಗಳ ವಿರುದ್ಧ ರೈತರು ಆರೋಪಗಳ ಸುರಿಮಳೆಗೈದರು. ಡೇರಿಯಲ್ಲಿ ಕಳೆದ ಏಳು ವರ್ಷಗಳಿಂದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ ಚಂದ್ರಶೇಖರ್ ರೆಡ್ಡಿ ಅವರು ರೈತರ ಗಮನಕ್ಕೆ ಬಾರದೆ ಡೇರಿಯ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.
ರೈತರ ಪ್ರಕಾರ, ಕಳೆದ ಐದು ತಿಂಗಳ ಅವಧಿಯಲ್ಲಿ ಲಕ್ಷಾಂತರ ರೂಪಾಯಿ ಹಣವನ್ನು ವೈಯಕ್ತಿಕ ಬಳಕೆಗೆ ಬಳಸಲಾಗಿದೆ. ಈ ಕುರಿತು ಸೂಕ್ತ ತನಿಖೆ ನಡೆಸಬೇಕಾದ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಭೆಯಲ್ಲಿ ಅಸಮಾಧಾನ ವ್ಯಕ್ತವಾಯಿತು. ಕಳೆದ ಐದು ತಿಂಗಳಲ್ಲಿ ಇಷ್ಟು ಪ್ರಮಾಣದ ಹಣ ದುರುಪಯೋಗವಾಗಿದ್ದರೆ, ಏಳು ವರ್ಷಗಳ ಅವಧಿಯಲ್ಲಿ ಎಷ್ಟು ಹಣ ದುರುಪಯೋಗವಾಗಿರಬಹುದು ಎಂಬ ಅನುಮಾನವನ್ನೂ ರೈತರು ವ್ಯಕ್ತಪಡಿಸಿದರು.
ಇದೇ ವೇಳೆ, ಡೇರಿಯಲ್ಲಿ ರೈತರ ಮಕ್ಕಳಿಗೆ ನೀಡಬೇಕಾದ ಪ್ರೋತ್ಸಾಹಧನವನ್ನು ಕೆಲವೇ ಸಮುದಾಯದವರಿಗೆ ಸೀಮಿತಗೊಳಿಸಲಾಗುತ್ತಿದೆ ಹಾಗೂ ಉದ್ಯೋಗ ನೇಮಕಾತಿಯಲ್ಲೂ ಒಂದೇ ಕುಟುಂಬದವರಿಗೆ ಆದ್ಯತೆ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂತು. ಎಲ್ಲ ಸಮುದಾಯದ ಅರ್ಹ ಮಕ್ಕಳಿಗೂ ಪ್ರೋತ್ಸಾಹಧನ ನೀಡಬೇಕು ಹಾಗೂ ಉದ್ಯೋಗಾವಕಾಶಗಳಲ್ಲಿ ಸಮಾನತೆ ಇರಬೇಕು ಎಂದು ಗ್ರಾಮಸ್ಥ ಯತೀಶ್ ಒತ್ತಾಯಿಸಿದರು.
ಸಭೆಗೆ ಆಗಮಿಸಿದ ಕಾರ್ಯದರ್ಶಿ ಚಂದ್ರಶೇಖರ್ ರೆಡ್ಡಿ, ಕಳೆದ ಐದು ತಿಂಗಳ ಅವಧಿಯಲ್ಲಿ ₹2,33,696 ಹಣವನ್ನು ತಮ್ಮ ವೈಯಕ್ತಿಕ ಅಗತ್ಯಗಳಿಗೆ ಬಳಸಿಕೊಂಡಿರುವುದಾಗಿ ಒಪ್ಪಿಕೊಂಡರು. ಹಣವನ್ನು ಹಿಂತಿರುಗಿಸಲು ಕಾಲಾವಕಾಶ ನೀಡುವಂತೆ ಅವರು ಮನವಿ ಮಾಡಿದರು.
ಡೇರಿ ಅಧ್ಯಕ್ಷ ಹಾಗೂ ಚಿಮುಲ್ ನಿರ್ದೇಶಕ ಕಾಂತರಾಜು ಮಾತನಾಡಿ, ಕಾರ್ಯದರ್ಶಿ ಹಣ ದುರುಪಯೋಗ ಮಾಡಿಕೊಂಡಿರುವುದನ್ನು ಸಭೆಯಲ್ಲಿ ಒಪ್ಪಿಕೊಂಡಿದ್ದಾರೆ. ಅವರು 15 ದಿನಗಳೊಳಗೆ ಸಂಪೂರ್ಣ ಹಣವನ್ನು ಡೇರಿಗೆ ಮರುಪಾವತಿಸಬೇಕು. ನಂತರ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಉಪ ವ್ಯವಸ್ಥಾಪಕ ನರೇಂದ್ರ, ಸೂಪರ್‌ವೈಸರ್ ಮಂಜುನಾಥ್, ಡೇರಿ ನಿರ್ದೇಶಕರು, ರೈತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ: ಅವಿನಾಶ್
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…