ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕು ಉಪ್ಪೋಣಿಯ ಬಳಿ ಮಂಗಳವಾರ ಮಧ್ಯಾಹ್ನ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದು, ಇನ್ನು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಭಟ್ಕಳದಿಂದ ಶಿರಸಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಮುರುಡೇಶ್ವರ ಕಡೆಗೆ ಸಾಗುತ್ತಿದ್ದ ಸ್ಕಾರ್ಪಿಯೋ ಕಾರು ನಡುವೆ ಈ ದುರಂತ ಸಂಭವಿಸಿದೆ.
ಅಪಘಾತದಲ್ಲಿ ಬೆಂಗಳೂರಿನ ರಕ್ಷಿತ್ ಮತ್ತು ಶ್ರೀನಿವಾಸ ಎಂಬವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಈದುರು ಮುರುಡೇಶ್ವರದಲ್ಲಿ ಬುಧವಾರ ನಡೆಯಬೇಕಿದ್ದ ನಿಶ್ಚಿತಾರ್ಥದಲ್ಲಿ ಪಾಲ್ಗೊಳ್ಳಲು ಬೆಂಗಳೂರಿನಿಂದ ಹೊರಟಿದ್ದರು ಎನ್ನಲಾಗಿದೆ.
ಘಟನೆ ಸ್ಥಳದಲ್ಲಿ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅಪಘಾತದ ತೀವ್ರತೆಯನ್ನು ಸ್ಪಷ್ಟಪಡಿಸಿದೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕೆಲವರಿಗೊ ಸಹ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಮೂವರು ಕಾರಿನ ಪ್ರಯಾಣಿಕರನ್ನು ತಕ್ಷಣ ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿಯೂ ಚಿಂತಾಜನಕವಾಗಿದೆ.
ಘಟನೆಯ ಬಳಿಕ ಹೊನ್ನಾವರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೆ, ಕೆಎಸ್‌ಆರ್‌ಟಿಸಿ ಭಟ್ಕಳ ಘಟಕದ ವ್ಯವಸ್ಥಾಪಕರೂ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…