Categories: CrimeLatest

ಭಟ್ಕಳದಲ್ಲಿ ಭೀಕರ ರಸ್ತೆ ಅಪಘಾತ: ಮರಕ್ಕೆ ಬೈಕ್ ಡಿಕ್ಕಿ – ಯುವಕ ಸಾವು, ಸವಾರನ ಸ್ಥಿತಿ ಗಂಭೀರ

ಭಟ್ಕಳ: ಅತಿವೇಗದಲ್ಲಿ ಚಲಿಸುತ್ತಿದ್ದ ಬೈಕ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಭಟ್ಕಳದ ಬಂದರ ರಸ್ತೆ ಭಾಗದಲ್ಲಿ ನಡೆದಿದೆ.
ಮೃತರನ್ನು ಸಬ್ಬತ್ತಿ ನಿವಾಸಿ ಮಧುರ ಮಂಜುನಾಥ ನಾಯ್ಕ (24) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಬೈಕ್ ಸವಾರ ಸುಮೇದ ನಾರಾಯಣ ನಾಯ್ಕ (ಗರಡಿಹಿತ್ಲು–ಬೆಳಕೆ ನಿವಾಸಿ) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಜೂನ್ 26ರಂದು ರಾತ್ರಿ ಸುಮಾರಿಗೆ ಸುಮೇದ ನಾಯ್ಕ ಅವರು ಟಿವಿಎಸ್ ಅಪಾಚೆ ಬೈಕ್‌ನಲ್ಲಿ ಮಧುರ ನಾಯ್ಕರನ್ನು ಹಿಂಬದಿಯಲ್ಲಿ ಕೂರಿಸಿಕೊಂಡು ಸಂಶುದ್ದೀನ್ ಸರ್ಕಲ್‌ನಿಂದ ಬಂದರ ರಸ್ತೆಯತ್ತ ತೆರಳುತ್ತಿದ್ದರು. ಈ ವೇಳೆ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ತೀವ್ರತೆಗೆ ಇಬ್ಬರೂ ರಸ್ತೆಗೆ ಬಿದ್ದಿದ್ದು, ಮಧುರ ನಾಯ್ಕ ಅವರಿಗೆ ಎದೆ, ಸೊಂಟ ಹಾಗೂ ಕೈ ಭಾಗಗಳಲ್ಲಿ ಗಂಭೀರ ಗಾಯಗಳಾಗಿವೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಸವಾರ ಸುಮೇದ ನಾಯ್ಕ ಅವರಿಗೂ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆ ಮುಂದುವರಿದಿದೆ.
ಘಟನೆ ತಿಳಿಯುತ್ತಿದ್ದಂತೆ ಕುಟುಂಬಸ್ಥರು, ಬಂಧುಗಳು ಹಾಗೂ ಸ್ಥಳೀಯರು ಆಸ್ಪತ್ರೆಗೆ ಆಗಮಿಸಿ ಸಂತಾಪ ಸೂಚಿಸಿದರು.
ಈ ಕುರಿತು ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.

ಭ್ರಷ್ಟರ ಬೇಟೆ

Recent Posts

ಬಸವನ ಬಾಗೇವಾಡಿಯಲ್ಲಿ ಅಕ್ರಮ LPG ರೀಫಿಲ್ಲಿಂಗ್ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…

2 hours ago

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

1 day ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

2 days ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago