Categories: CrimeLatest

8 ಸಾವಿರ ರೂ. ಬಾಡಿಗೆಗಾಗಿ ಪತ್ನಿ-ಮಗಳನ್ನೇ ನರಕಕ್ಕೆ ತಳ್ಳಿದ ತಂದೆ! ಗುಜರಾತ್‌ನಲ್ಲಿ ಅಮಾನವೀಯ ಕೃತ್ಯ

ಗುಜರಾತ್‌ನ ಮೋರ್ಬಿ ಜಿಲ್ಲೆಯಲ್ಲಿ ಮಾನವೀಯತೆಯನ್ನೇ ನಾಚಿಸುವಂತಹ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಕೇವಲ ನಾಲ್ಕು ತಿಂಗಳ ಮನೆ ಬಾಡಿಗೆ ಪಾವತಿಸಲು ಸಾಧ್ಯವಾಗದ ಕಾರಣ, ವ್ಯಕ್ತಿಯೋರ್ವ ತನ್ನ ಪತ್ನಿ ಮತ್ತು ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಮನೆ ಮಾಲೀಕನಿಂದಲೇ ಪದೇ ಪದೇ ಲೈಂಗಿಕ ದೌರ್ಜನ್ಯ ನಡೆಯಲು ಅವಕಾಶ ನೀಡಿದ್ದಾನೆ ಎಂಬ ಆಘಾತಕಾರಿ ಮಾಹಿತಿ ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಮೂಲತಃ ಸುರೇಂದ್ರನಗರ ಮೂಲದ ಈ ಕುಟುಂಬವು ಜೀವನೋಪಾಯದ ಹುಡುಕಾಟದಲ್ಲಿ ಸುಮಾರು ಆರು ತಿಂಗಳ ಹಿಂದೆ ಮೋರ್ಬಿಗೆ ಬಂದಿತ್ತು. ಇಲ್ಲಿ ತಿಂಗಳಿಗೆ 2 ಸಾವಿರ ರೂ. ಬಾಡಿಗೆಯ ಮನೆಯಲ್ಲಿ ವಾಸವಿದ್ದ ಅವರು, ತೀವ್ರ ಆರ್ಥಿಕ ಸಂಕಷ್ಟದಿಂದ ನಾಲ್ಕು ತಿಂಗಳ ಬಾಡಿಗೆಯನ್ನು ಪಾವತಿಸಲು ವಿಫಲರಾಗಿದ್ದರು.

ಈ ಹಿನ್ನೆಲೆ ಮನೆ ಮಾಲೀಕ ಬಾಕಿ ಬಾಡಿಗೆಗಾಗಿ ಒತ್ತಡ ಹೇರುತ್ತಿದ್ದನು ಎನ್ನಲಾಗಿದೆ. ಕೊನೆಗೆ ಅಮಾನವೀಯ ನಿರ್ಧಾರ ಕೈಗೊಂಡ ತಂದೆ, ಬಾಡಿಗೆ ಹಣದ ಬದಲಿಗೆ ತನ್ನ ಪತ್ನಿ ಮತ್ತು ಅಪ್ರಾಪ್ತ ಮಗಳನ್ನು ಲೈಂಗಿಕವಾಗಿ ಬಳಸಿಕೊಳ್ಳಲು ಮನೆ ಮಾಲೀಕನಿಗೆ ಅವಕಾಶ ನೀಡಿದ್ದಾನೆ ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ. ಮನೆ ಮಾಲೀಕ ಕೂಡ ಈ ಕ್ರೌರ್ಯಕ್ಕೆ ಕೈಜೋಡಿಸಿ, ತಾಯಿ ಮತ್ತು ಮಗಳ ಮೇಲೆ ನಿರಂತರ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಈ ದುಷ್ಕೃತ್ಯದ ವಿಚಾರ ಕುಟುಂಬದ ಮಹಿಳೆಯೊಬ್ಬರಿಗೆ ತಿಳಿದ ನಂತರ ಅವರು ಮೋರ್ಬಿ ಪೊಲೀಸ್ ಠಾಣೆಗೆ ದೂರು ನೀಡಿದರು. ದೂರು ಆಧರಿಸಿ ಪೊಲೀಸರು ತಕ್ಷಣ ಪ್ರಕರಣ ದಾಖಲಿಸಿಕೊಂಡು, ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಸಂಬಂಧ ಪೋಕ್ಸೊ ಕಾಯ್ದೆ ಸೇರಿದಂತೆ ವಿವಿಧ ಗಂಭೀರ ಆರೋಪಗಳಡಿ ತಂದೆ ಮತ್ತು ಮನೆ ಮಾಲೀಕನನ್ನು ಬಂಧಿಸಿದ್ದಾರೆ.

“ಅಪ್ರಾಪ್ತ ಬಾಲಕಿಯ ತಂದೆ ಹಾಗೂ ಮನೆ ಮಾಲೀಕರು ಸೇರಿ ಈ ಕೃತ್ಯ ನಡೆಸಿದ್ದಾರೆ. ಪ್ರಕರಣದ ಸಂಪೂರ್ಣ ತನಿಖೆ ಮುಂದುವರಿದಿದೆ,” ಎಂದು ಮೋರ್ಬಿ ಉಪ ಪೊಲೀಸ್ ವರಿಷ್ಠಾಧಿಕಾರಿ ಜೆ.ಎಂ. ಲಾಲ್ ತಿಳಿಸಿದ್ದಾರೆ. ಪ್ರಕರಣದಲ್ಲಿ ಇನ್ನೊಬ್ಬ ವ್ಯಕ್ತಿಯೂ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಆತನಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಘಟನೆ ಬಹಿರಂಗವಾದ ತಕ್ಷಣ ಸಾಮಾಜಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ತಾಯಿ ಮತ್ತು ಮಗಳ ಮೇಲೆ ನಡೆದ ಅಮಾನವೀಯ ದೌರ್ಜನ್ಯ ಖಂಡಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂಬ ಒತ್ತಾಯ ಕೇಳಿಬರುತ್ತಿದೆ. ಸದ್ಯ ಪೀಡಿತ ತಾಯಿ ಮತ್ತು ಮಗಳಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಅವರ ಸುರಕ್ಷತೆಗೆ ವಿಶೇಷ ಕ್ರಮ ಕೈಗೊಳ್ಳಲಾಗಿದೆ.

ಕೇವಲ ಕೆಲ ಸಾವಿರ ರೂಪಾಯಿ ಬಾಡಿಗೆಯ ಕಾರಣಕ್ಕೆ ತನ್ನದೇ ಕುಟುಂಬವನ್ನು ನರಕಕ್ಕೆ ತಳ್ಳಿದ ತಂದೆಯ ನಡೆ ಹಾಗೂ ಅದನ್ನು ದುರುಪಯೋಗಪಡಿಸಿಕೊಂಡ ಮನೆ ಮಾಲೀಕನ ಕ್ರೌರ್ಯ, ಸಮಾಜದ ಮೌಲ್ಯಗಳನ್ನೇ ಪ್ರಶ್ನಿಸುವಂತಾಗಿದೆ.

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್‌ಗಳ ಸಂಚಾರ, ಅಧಿಕಾರಿಗಳು ಮೌನ!?

ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…

2 days ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ

ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…

2 days ago

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

5 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

6 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

6 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

6 days ago