Categories: CorruptionLatest

ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿಗೆ ನೆರವು ನೀಡಲು ಲಂಚದ ಆಫರ್: ತಂದೆ-ಮಗ ಲೋಕಾಯುಕ್ತ ಬಲೆಗೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ ಸರ್ಕಾರಿ ಅಭಿಯೋಜಕರಿಗೆ ಲಂಚ ನೀಡಲು ಯತ್ನಿಸಿದ ತಂದೆ-ಮಗನನ್ನು ಕರ್ನಾಟಕ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.

ಕರ್ನಾಟಕ ಲೋಕಾಯುಕ್ತ ಕಲಬುರಗಿ ಪೊಲೀಸ್ ಅಧೀಕ್ಷಕ ಸಿದ್ದರಾಜು ಸಿ. ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ, ಹಿರಿಯ ಕಾನೂನು ಅಧಿಕಾರಿ ಹಾಗೂ ಸರ್ಕಾರಿ ಅಭಿಯೋಜಕರಾದ ಪ್ರಾಣೇಶ ಸಿದ್ದಪ್ಪ ಭರತನೂರ ಅವರು ನೀಡಿದ ದೂರಿನ ಮೇರೆಗೆ ಕ್ರಮ ಕೈಗೊಳ್ಳಲಾಗಿದೆ.

ಆಳಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಎಸ್‌ಸಿ/ಎಸ್‌ಟಿ ಪ್ರಕರಣವೊಂದು ಕಲಬುರಗಿಯ 2ನೇ ಅಪರ ಜಿಲ್ಲಾ ಮತ್ತು ಸತ್ರ (ಎಸ್‌ಸಿ/ಎಸ್‌ಟಿ) ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿದೆ. ಈ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಪ್ರಕರಣವನ್ನು ಮುಂದೂಡಿಕೆ ಮಾಡಿಸಲು ಹಾಗೂ ಸಹಕಾರ ನೀಡುವಂತೆ ಒತ್ತಡ ಹೇರಲು ಆರೋಪಿತನ ಪರವಾಗಿ ಆತನ ಅಣ್ಣ ಸಂಜೀವನ್ ದತ್ತಾಜಿ ಪಾಟೀಲ್ (80) ಮತ್ತು ಪುತ್ರ ಸುರೇಶ್ ಸಂಜೀವನ್ ಪಾಟೀಲ್ (44) ಅವರು ಸರ್ಕಾರಿ ಅಭಿಯೋಜಕರಿಗೆ 5,000 ರೂಪಾಯಿ ನಗದು ಹಣವನ್ನು ಕವರಿನಲ್ಲಿ ಇಟ್ಟು ನೀಡಲು ಯತ್ನಿಸಿದ್ದಾರೆ ಎನ್ನಲಾಗಿದೆ.

ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಲಂಚದ ಹಣ ಹಸ್ತಾಂತರಿಸುವ ವೇಳೆ ಇಬ್ಬರನ್ನೂ ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು ಮತ್ತು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುವ ಕಾರ್ಯ ಮುಂದುವರಿದಿದೆ.

ಈ ಕಾರ್ಯಾಚರಣೆಯ ನೇತೃತ್ವವನ್ನು ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ರಾಜಶೇಖರ ಬಡದೇಸಾರ ವಹಿಸಿಕೊಂಡಿದ್ದು, ಪೊಲೀಸ್ ಇನ್ಸ್‌ಪೆಕ್ಟರ್‌ಗಳಾದ ಅರುಣ್ ಕುಮಾರ್ ಹಾಗೂ ರವಿ ಪವಾರ್ ಸೇರಿದಂತೆ ಸಿಬ್ಬಂದಿ ಭಾಗವಹಿಸಿದ್ದರು.

ಪ್ರಕರಣದ ತನಿಖೆ ಮುಂದುವರಿದಿದ್ದು, ತನಿಖೆ ಪೂರ್ಣಗೊಂಡ ಬಳಿಕ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

39 minutes ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

6 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

21 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago