ದಾವಣಗೆರೆ: ವಾಹನ ಸಂಚಾರ ನಿಯಮ ಉಲ್ಲಂಘನೆ ಮಾಡಿದ ಪೋಷಕರಿಗೆ ಪಾಠ ಕಲಿಸುವ ಉದ್ದೇಶದಿಂದ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಅಪ್ರಾಪ್ತ ಮಗನಿಗೆ ಬೈಕ್ ಒಪ್ಪಿಸಿದ್ದ ತಂದೆಗೆ ಸಂಚಾರಿ ಪೊಲೀಸರು 25 ಸಾವಿರ ರೂಪಾಯಿ ದಂಡ ವಿಧಿಸಿ ಎಚ್ಚರಿಕೆ ನೀಡಿದ್ದಾರೆ.
ಉತ್ತಮ್‌ಚಂದ್ ಬಡಾವಣೆಯ ನಿವಾಸಿಯಾದ ವ್ಯಕ್ತಿಯೊಬ್ಬರು ತಮ್ಮ ವಯಸ್ಸು ತಲುಪಿಲ್ಲದ ಮಗನಿಗೆ ಬೈಕ್ ನೀಡಿದ್ದರು. ಬಾಲಕ ಎಆರ್‌ಜೆ ಕಾಲೇಜು ಬಳಿ ಬೈಕ್ ಚಾಲನೆ ಮಾಡುತ್ತಿದ್ದಾಗ ಸಂಚಾರಿ ಪೊಲೀಸ್ ಪೆಟ್ರೋಲ್ ಪರಿಶೀಲನೆ ವೇಳೆ ತಗುಲಿದ. ವಿಚಾರಣೆ ನಡೆಸಿದ ಪೊಲೀಸರು ಬೈಕ್ ಮಾಲೀಕರನ್ನು ಕರೆಸಿ ಮಾಹಿತಿ ಪಡೆದುಕೊಂಡರು.
ಮಗನಿಗೆ ಪರವಾನಗಿ ಇಲ್ಲದೆ ಬೈಕ್ ನೀಡಿರುವ ತಂದೆಯ ತಪ್ಪಿಗೆ, ಸಂಚಾರಿ ಇಲಾಖೆ 25 ಸಾವಿರ ರೂಪಾಯಿ ದಂಡ ವಿಧಿಸಿ ಕಠಿಣ ಎಚ್ಚರಿಕೆ ನೀಡಿದೆ. ಇದೇ ರೀತಿಯ ತಪ್ಪು ಮತ್ತೆ ಮರುಕಳಿಸಿದರೆ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಪೊಲೀಸರು ವಾರ್ನಿಂಗ್ ನೀಡಿದ್ದಾರೆ.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…