ಮೈಸೂರು: ಎಫ್ ಡಿ ಎ ಕೆಲಸ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ್ದ ಲೇಡಿ ಪಿ ಎಸ್ ಐ ಅಶ್ವಿನಿಯನ್ನು ಅಮಾನತುಗೊಳಿಸಿ ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.
ಮೈಸೂರಿನ ನರಸಿಂಹರಾಜ ಸಂಚಾರಿ ಪೊಲೀಸ್ ಠಾಣೆ ಪಿಎಸ್‌ಐ ಆಗಿರುವ ಅಶ್ವಿನಿ ಅನಂತಪುರ 2020ರಲ್ಲಿ ನಡೆದ ಎಫ್ ಡಿ ಎ ಪರೀಕ್ಷೆಯಲ್ಲಿ ಆಯ್ಕೆ ಮಾಡಿಸುವುದಾಗಿ ಹೇಳಿ ಬಾಗಲಕೋಟೆ ಜಿಲ್ಲೆಯ ಚಿಕ್ಕಲಗಿ ಗ್ರಾಮದ ಬಸವರಾಜ್ ಝಳಕಿ ಎಂಬುವರಿಂದ ಹಣ ಪಡೆದು ವಂಚಿಸಿದ್ದರು.
ಬಸವರಾಜ್ ಸಹೋದರ ಸಂಗಮೇಶ್ ಜೊತೆ ಅಶ್ವಿನಿ ಡೀಲ್ ಮಾಡಿದ್ದು ಹಾಗೂ ಹಣದ ವ್ಯವಹಾರದ ಬಗ್ಗೆ ಅವರೊಂದಿಗೆ ಮಾತನಾಡಿದ್ದ ಆಡಿಯೋ ವೈರಲ್ ಆಗಿತ್ತು. ಎಫ್ ಡಿ ಎ ಕೆಲಸ ಕೊಡಿಸುವುದಾಗಿ ಹೇಳಿ ಅಶ್ವಿನಿ 15 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 2 ಲಕ್ಷ ಪಡೆದಿದ್ದರು. ಕೆಲಸ ಸಿಗದಿದ್ದಾಗ ಹಣ ವಾಪಸ್ ಕೇಳಿದ್ದಕ್ಕೆ ಅಶ್ವಿನಿ ಆವಾಜ್ ಹಾಕಿದ್ದರು. ಇತ್ತೀಚೆಗೆ ಅಶ್ವಿನಿ ಹಾಗೂ ಸಂಗಮೇಶ್ ನಡುವಿನ ಆಡಿಯೋ ಸಂಭಾಷಣೆ ವೈರಲ್ ಆಗಿತ್ತು. ಇದೀಗ ಪ್ರಕರಣ ಸಂಬಂಧ ಪಿಎಸ್‌ಐ ಅಶ್ವಿನಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಾಳು ಗ್ರಾಮದ ದುಮ್ಮಾಡಿ ಕೆಂಚಮ್ಮ ಎಂಬ ಮಹಿಳೆಯೋರ್ವರು ತಮ್ಮ…
ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…