Categories: CinemaCrimeLatest

ಟ್ರೋಲ್‌ಗಳಿಂದ ಬೇಸತ್ತ ಬಿಗ್ ಬಾಸ್ ಖ್ಯಾತಿಯ ಧ್ರುವಂತ್; ಪೊಲೀಸರ ಮೊರೆ ಹೋದ ನಟ

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ನಿರಂತರವಾಗಿ ಬರುತ್ತಿರುವ ನೆಗೆಟಿವ್ ಕಾಮೆಂಟ್‌ಗಳು ಹಾಗೂ ಅವಹೇಳನಕಾರಿ ಟ್ರೋಲ್‌ಗಳಿಂದ ಬೇಸತ್ತಿರುವ ಬಿಗ್ ಬಾಸ್ ಕನ್ನಡ ಖ್ಯಾತಿಯ ಧ್ರುವಂತ್ ಅವರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ತಮ್ಮ ವಿರುದ್ಧ ಮಾನಹಾನಿಕರ ಪೋಸ್ಟ್‌ಗಳು ಹಾಗೂ ನಿಂದನಾತ್ಮಕ ಕಾಮೆಂಟ್‌ಗಳನ್ನು ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅವರು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನೆಗೆಟಿವ್ ಕಾಮೆಂಟ್‌ಗಳ ಬಗ್ಗೆ ಧ್ರುವಂತ್ ಸಾರ್ವಜನಿಕವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ಇದರ ಬಳಿಕ ಅವರ ವಿರುದ್ಧ ಟ್ರೋಲ್‌ಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ ಎಂದು ತಿಳಿದುಬಂದಿದೆ.

ನಿರಂತರ ಟ್ರೋಲ್ ಹಾಗೂ ನಿಂದನಾತ್ಮಕ ಪೋಸ್ಟ್‌ಗಳಿಂದ ಮಾನಸಿಕ ಕಿರುಕುಳ ಅನುಭವಿಸುತ್ತಿರುವುದಾಗಿ ದೂರಿನಲ್ಲಿ ಉಲ್ಲೇಖಿಸಿರುವ ಧ್ರುವಂತ್, ಈ ರೀತಿಯ ಕೃತ್ಯಗಳಲ್ಲಿ ತೊಡಗಿರುವವರನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರನ್ನು ಮನವಿ ಮಾಡಿದ್ದಾರೆ.

ಈ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸರು ದೂರು ಸ್ವೀಕರಿಸಿದ್ದು, ಪ್ರಕರಣದ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್‌ಗಳ ಸಂಚಾರ, ಅಧಿಕಾರಿಗಳು ಮೌನ!?

ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…

8 hours ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ

ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…

8 hours ago

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

4 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

4 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

4 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

4 days ago