Categories: CrimeLatest

ಶಾಲೆಯಲ್ಲೇ ಶಿಕ್ಷಕಿಯ ಭೀಕರ ಹತ್ಯೆ: ಪ್ರೇಮ ನಿರಾಕರಿಸಿದ್ದಕ್ಕೆ 30ಕ್ಕೂ ಹೆಚ್ಚು ಬಾರಿ ಚಾಕು ಇರಿದ ಯುವಕ!

ಹರಿಯಾಣದ ಫರಿದಾಬಾದ್‌ನಲ್ಲಿ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರ ಹತ್ಯೆ ಪ್ರಕರಣ ಬೆಚ್ಚಿಬೀಳಿಸಿದೆ. ಶಾಲೆಯ ಆವರಣದಲ್ಲೇ ಮುಸುಕುಧಾರಿ ಯುವಕನೊಬ್ಬ ಶಿಕ್ಷಕಿಯ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಮೃತರನ್ನು 29 ವರ್ಷದ ಸಂಧ್ಯಾ ಎಂದು ಗುರುತಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 21 ವರ್ಷದ ಅಮಿತ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಆರೋಪಿ ಬೆಳಗ್ಗೆ ಶಾಲೆಯ ಗೇಟ್ ಬಳಿ ಶಿಕ್ಷಕಿಯೊಂದಿಗೆ ಮಾತನಾಡಲು ಕಾಯುತ್ತಿದ್ದ. ಶಿಕ್ಷಕಿ ಹೊರಬಂದ ತಕ್ಷಣ ಅವರನ್ನು ಎಳೆದುಕೊಂಡು ಹೋಗಿ ಚಾಕುವಿನಿಂದ ಹಲವು ಬಾರಿ ಇರಿದು ದಾಳಿ ನಡೆಸಿದ್ದಾನೆ. ಮಧ್ಯಪ್ರವೇಶಿಸಲು ಬಂದ ಶಾಲಾ ಸಿಬ್ಬಂದಿಯನ್ನು ಸಹ ಚಾಕು ತೋರಿಸಿ ಬೆದರಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ.

ನಂತರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಶಿಕ್ಷಕಿಯ ಹಿಂದೆ ಪ್ರೀತಿಯ ಹೆಸರಿನಲ್ಲಿ ಕಿರುಕುಳ ನೀಡುತ್ತಿದ್ದ ಆರೋಪಿಯು, ತನ್ನ ಪ್ರಸ್ತಾವವನ್ನು ನಿರಾಕರಿಸಿದ್ದರಿಂದ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಈ ಘಟನೆ ಸಮಾಜದಲ್ಲಿ ಮಹಿಳೆಯರ ಸುರಕ್ಷತೆ ಕುರಿತು ಮತ್ತೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ.

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್‌ಗಳ ಸಂಚಾರ, ಅಧಿಕಾರಿಗಳು ಮೌನ!?

ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…

11 hours ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ

ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…

11 hours ago

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

4 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

4 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

4 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

4 days ago