ಬೆಂಗಳೂರು ಗ್ರಾಮಾಂತರ ಜಿಲ್ಲೆ, ನೆಲಮಂಗಲ ತಾಲ್ಲೂಕಿನ ಹಾರೋಕ್ಯಾತನಹಳ್ಳಿಯಲ್ಲಿ ಭೀಕರವಾದ ಘಟನೆ ನಡೆದಿದ್ದು, ಪತ್ನಿಗೆ ಅನೈತಿಕ ಸಂಬಂಧವಿದೆ ಎಂಬ ಶಂಕೆಯಿದ್ದು, ಪತಿ ಸಿದ್ಧಾಂಲಿಂಗಯ್ಯ ತನ್ನ ಪತ್ನಿ ಮಂಜುಳಾಳ ಬಾಯಿಗೆ ಫೆವಿಕ್ವೀಕ್ ಹಾಕಿ ಹತ್ಯೆಗೆ ಯತ್ನಿಸಿದ ಹಂತದಲ್ಲಿ ಘಟನೆ ಬೆಳಕಿಗೆ ಬಂದಿದೆ.
ಸಿದ್ಧಾಂಲಿಂಗಯ್ಯ ಹಿಮಾಲಯ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು, ಹಾಗೂ ಪತ್ನಿ ಮಂಜುಳಾ ಗಾರ್ಮೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದರು. ಅವಳ ಮೇಲೆ ಅನೈತಿಕ ಸಂಬಂಧದ ಶಂಕೆ ಇದ್ದು, ಆಕೆಯ ಹತ್ಯೆಗೆ ಪತಿ ಪ್ರಯತ್ನಿಸಿದನು. ಪ್ರಕರಣ ಸಂಬಂಧ ಮಾದನಾಯಕನಹಳ್ಳಿಯಲ್ಲಿ ದೂರು ದಾಖಲಾಗಿದೆ.
ಪೊಲೀಸರ ಮುಂದಿನ ತನಿಖೆಗಾಗಿ, ಟವರ್ ಲೊಕೇಶನ್ ಆಧರಿಸಿ ಸಿದ್ಧಾಂಲಿಂಗಯ್ಯನನ್ನು ಬಂಧಿಸಲಾಗಿದೆ. 10 ವರ್ಷಗಳ ಹಿಂದೆ ಮದುವೆ ಆಗಿದ್ದ ಈ ದಂಪತಿಗೆ ರಾಯಚೂರಿನಲ್ಲಿ ಇಬ್ಬರು ಮಕ್ಕಳು ಇದ್ದಾರೆ.
ಈ ಸಂಬಂಧ ಹೆಚ್ಚಿನ ತನಿಖೆ ಮುಂದುವರೆದಿದ್ದು, ಸಾಕ್ಷ್ಯಗಳನ್ನು ಪಟ್ಟಿ ಮಾಡುವುದರ ಜೊತೆಗೆ ಆರೋಪಿ ವಿರುದ್ಧ ಕ್ರಮಕೈಗೊಳ್ಳಲಾಗುವುದು.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…