Categories: CorruptionLatest

₹1 ಲಕ್ಷ ಲಂಚ ಪ್ರಕರಣಕ್ಕೆ ಅಂತಿಮ ತೀರ್ಪು: ಮಾಜಿ ತಹಶೀಲ್ದಾರ್ ಸೇರಿ ಇಬ್ಬರಿಗೆ 4 ವರ್ಷ ಜೈಲು, ತಲಾ ₹20 ಸಾವಿರ ದಂಡ

ಕಲಬುರಗಿ: ಏಳು ವರ್ಷಗಳ ಹಿಂದೆ ನಡೆದಿದ್ದ ₹1 ಲಕ್ಷ ಲಂಚ ಪ್ರಕರಣದಲ್ಲಿ ಅಫಜಲಪುರದ ಮಾಜಿ ತಹಶೀಲ್ದಾರ್ ಶಶಿಕಲಾ ಪಾದಗಟ್ಟಿ ಹಾಗೂ ಮಧ್ಯವರ್ತಿ ಶಿವಾನಂದ ಜಮಖಂಡಿ ಅವರಿಗೆ ಕಲಬುರಗಿಯ ಪ್ರಧಾನ ಜಿಲ್ಲಾ ಮತ್ತು ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಇಬ್ಬರೂ ಆರೋಪಿಗಳು ಭ್ರಷ್ಟಾಚಾರದ ಆರೋಪದಲ್ಲಿ ತಪ್ಪಿತಸ್ಥರು ಎಂದು ನ್ಯಾಯಾಲಯ ತೀರ್ಮಾನಿಸಿ, ತಲಾ ನಾಲ್ಕು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ ₹20 ಸಾವಿರ ದಂಡ ವಿಧಿಸಿದೆ. ದಂಡ ಪಾವತಿಸಲು ವಿಫಲರಾದರೆ ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಪ್ರಕರಣವು 2017ರಲ್ಲಿ ಅಫಜಲಪುರ ತಾಲ್ಲೂಕಿನ ಕರಜಗಿ ನಾಡ ಕಚೇರಿಯಲ್ಲಿ ನಡೆದಿತ್ತು. ಗುತ್ತಿಗೆ ಆಧಾರದಲ್ಲಿ ಡೇಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಶಿವಲಿಂಗಯ್ಯ ಬಸಯ್ಯ ಮಠ ಅವರ ವಿರುದ್ಧ ಸಾರ್ವಜನಿಕರಿಂದ ಹಣ ಪಡೆಯುತ್ತಿರುವ ಆರೋಪ ಕೇಳಿಬಂದಿತ್ತು. ಈ ಕುರಿತು ವಿಚಾರಣೆ ನಡೆಸಿದ್ದ ಅಂದಿನ ತಹಶೀಲ್ದಾರ್ ಶಶಿಕಲಾ ಪಾದಗಟ್ಟಿ, ಪ್ರಕರಣದಿಂದ ಪಾರು ಮಾಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರೆಂದು ಆರೋಪಿಸಲಾಗಿತ್ತು. ಹಣವನ್ನು ಮಧ್ಯವರ್ತಿ ಶಿವಾನಂದ ಜಮಖಂಡಿಗೆ ನೀಡುವಂತೆ ಸೂಚಿಸಿದ್ದಲ್ಲದೆ, ಲಂಚ ನೀಡದಿದ್ದರೆ ಕೆಲಸದಿಂದ ವಜಾಗೊಳಿಸುವ ಬೆದರಿಕೆಯನ್ನೂ ಹಾಕಿದ್ದರು ಎನ್ನಲಾಗಿದೆ.

ಲಂಚ ನೀಡಲು ನಿರಾಕರಿಸಿದ ಶಿವಲಿಂಗಯ್ಯ ಅವರು ಲೋಕಾಯುಕ್ತ ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿದ್ದರು. ಲೋಕಾಯುಕ್ತ ಅಧಿಕಾರಿಗಳ ಮಾರ್ಗದರ್ಶನದಂತೆ 2017ರ ಆಗಸ್ಟ್ 31ರಂದು ಶಿವಾನಂದ ಜಮಖಂಡಿಗೆ ಲಂಚದ ಹಣ ನೀಡಲಾಯಿತು. ಈ ವೇಳೆ ಪೂರ್ವಸಿದ್ಧತೆಯೊಂದಿಗೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಹಣದ ಸಮೇತ ಶಿವಾನಂದನನ್ನು ಬಂಧಿಸಿ, ಬಳಿಕ ಶಶಿಕಲಾ ಪಾದಗಟ್ಟಿಯನ್ನೂ ವಶಕ್ಕೆ ಪಡೆದಿದ್ದರು. ಅಂದಿನ ಲೋಕಾಯುಕ್ತ ಡಿವೈಎಸ್‌ಪಿ ಸಂತೋಷ ಬನ್ನಟ್ಟಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು.

ಪ್ರಕರಣದ ತನಿಖೆಯನ್ನು ಲೋಕಾಯುಕ್ತ ತನಿಖಾಧಿಕಾರಿ ಕೃಷ್ಣಪ್ಪ ಕಲ್ಲದೇವರ ಪೂರ್ಣಗೊಳಿಸಿ, ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ವೇಳೆ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ ಎಸ್. ಚಾಂದಕವಠ ಅವರು ಸಾಕ್ಷ್ಯಾಧಾರಗಳೊಂದಿಗೆ ವಾದ ಮಂಡಿಸಿದ್ದರು. ಎಲ್ಲಾ ದಾಖಲೆಗಳು ಮತ್ತು ಸಾಕ್ಷ್ಯಗಳನ್ನು ಪರಿಶೀಲಿಸಿದ ನ್ಯಾಯಾಧೀಶ ಜಿ.ಎಲ್. ಲಕ್ಷ್ಮೀನಾರಾಯಣ ಅವರು ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿ ಇಬ್ಬರಿಗೂ ನಾಲ್ಕು ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ಹೊರಡಿಸಿದರು.

ಇದೇ ಪ್ರಕರಣದ ಹಿನ್ನೆಲೆಯಲ್ಲಿ ಶಶಿಕಲಾ ಪಾದಗಟ್ಟಿ ಅವರು ಸೇವೆಯಲ್ಲಿದ್ದರೂ, ಇತ್ತೀಚೆಗೆ ರಾಜ್ಯ ಸರ್ಕಾರ ಅವರನ್ನು ಕಡ್ಡಾಯ ನಿವೃತ್ತಿಗೊಳಿಸಿತ್ತು. ಇದೀಗ ನ್ಯಾಯಾಲಯದ ಶಿಕ್ಷೆಯೊಂದಿಗೆ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದ್ದು, ಸರ್ಕಾರಿ ಅಧಿಕಾರಿಗಳಲ್ಲಿ ಈ ತೀರ್ಪು ಚರ್ಚೆಗೆ ಗ್ರಾಸವಾಗಿದೆ.

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್‌ಗಳ ಸಂಚಾರ, ಅಧಿಕಾರಿಗಳು ಮೌನ!?

ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…

1 day ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ

ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…

1 day ago

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

5 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

5 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

5 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

5 days ago