Latest

ಕೊನೆಗೂ ಆರ್.ಸಿ.ಬಿ ಗೆ ಒಲಿಯಿತು ಕಪ್

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 8 ವಿಕೆಟ್‌ಗಳ ಅಮೋಘ ಗೆಲುವು ದಾಖಲಿಸುವ ಮೂಲಕ ಆರ್‌ಸಿಬಿ ಮಹಿಳಾ ತಂಡ ತನ್ನ ಎರಡನೇ ಆವೃತ್ತಿಯಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ 16 ವರ್ಷಗಳ ಟ್ರೋಫಿ ಕನಸನ್ನು ನನಸಾಗಿಸಿದೆ. ಆರ್‌ಸಿಬಿ ಪುರುಷರ ತಂಡಕ್ಕಿಂತ ಮುನ್ನ ಮಹಿಳಾ ತಂಡ ಟ್ರೋಫಿ ಗೆದ್ದಿರುವುದು ವಿಶೇಷವಾಗಿದೆ. 2024ರ ಐಪಿಎಲ್‌ಗೆ ಮುನ್ನ ಬುಧವಾರ, ಮಾರ್ಚ್ 19ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ “ಆರ್‌ಸಿಬಿ ಅನ್‌ಬಾಕ್ಸ್’ ಈವೆಂಟ್‌ಗೆ ಚೊಚ್ಚಲ ಟ್ರೋಫಿಯೊಂದಿಗೆ ಆರ್‌ಸಿಬಿ ಮಹಿಳಾ ತಂಡ ತವರಿಗೆ ಮರಳಲಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡ ಉತ್ತಮ ಆರಂಭದ ಹೊರತಾಗಿಯೂ ಆರ್‌ಸಿಬಿ ಸ್ಪಿನ್ನರ್‌ಗಳ ಮಾರಕ ದಾಳಿಗೆ ಸಿಲುಕಿ 18.3 ಓವರ್‌ಗಳಲ್ಲಿ ಕೇವಲ 113 ರನ್‌ಗಳಿಗೆ ಸರ್ವಪತನ ಕಂಡಿತು.
ಪ್ರಶಸ್ತಿ ಗೆಲುವಿಗೆ 114 ರನ್‌ಗಳ ಗುರಿ ಪಡೆದ ಆರ್‌ಸಿಬಿ ತಂಡ ಸೋಫಿ ಡಿವೈನ್, ಸ್ಮೃತಿ ಮಂಧಾನ ಮತ್ತು ಎಲ್ಲಿಸ್ ಪೆರ್ರಿ ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ 2 ವಿಕೆಟ್ ಕಳೆದುಕೊಂಡು ಗೆಲುವಿನ ಗುರಿ ಮುಟ್ಟಿತು.
ಗೆಲುವಿಗೆ ಕೊನೆಯ ಓವರ್‌ನಲ್ಲಿ ಆರ್‌ಸಿಬಿ ತಂಡಕ್ಕೆ 5 ರನ್ ಬೇಕಾಗಿದ್ದಾಗ ಎಲ್ಲಿಸ್ ಪೆರ್ರಿ ಮತ್ತು ರಿಚಾ ಘೋಷ್ ಆಟವಾಡುತ್ತಿದ್ದು ಕೊನೆಯ ಓವರ್ ನ ಮೂರನೇ ಬಾಲಿನಲ್ಲಿ ರಿಚಾ ಘೋಷ್ ಬೌಂಡರಿ ಬಾರಿಸುವ ಮೂಲಕ ಆರ್‌ಸಿಬಿ ತಂಡಕ್ಕೆ ಗೆಲುವು ತಂದುಕೊಟ್ಟರು.
ಪ್ರತಿ ಬಾರಿಯೂ ಅಭಿಮಾನಿಗಳು ‘ಈ ಸಲ ಕಪ್ ನಮ್ದೇ’ ಎಂದು ಹೇಳಿಕೊಳ್ಳುತ್ತಿದ್ದರು ಆದರೆ ಈ ಬಾರಿ ಮಹಿಳೆಯರಿಂದ ಅಭಿಮಾನಿಗಳ ಕನಸು ನನಸಾಗಿದೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ; ಬೇಸತ್ತು ಚರಂಡಿ ಸ್ವಚ್ಛಗೊಳಿಸಿದ ಮಹಿಳೆ.

ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಾಳು ಗ್ರಾಮದ ದುಮ್ಮಾಡಿ ಕೆಂಚಮ್ಮ ಎಂಬ ಮಹಿಳೆಯೋರ್ವರು ತಮ್ಮ…

9 hours ago

ಬಸವನ ಬಾಗೇವಾಡಿಯಲ್ಲಿ ಅಕ್ರಮ LPG ರೀಫಿಲ್ಲಿಂಗ್ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…

16 hours ago

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

2 days ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

2 days ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

3 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

3 days ago