Latest

ಬೆಂಗಳೂರಲ್ಲಿ ಪ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ಹಾಕಿದರೆ ದಂಡ ಮತ್ತು ಜೈಲು ಶಿಕ್ಷೆ

ಬಿಬಿಎಂಪಿ ವ್ಯಾಪ್ತಿಯ ಅನಧಿಕೃತ ವಾಣಿಜ್ಯ ಜಾಹೀರಾತುಗಳು ಮತ್ತು ಪ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ಮತ್ತಿತರೇ ಮುದ್ರಿತ ಜಾಹೀರಾತುಗಳನ್ನು ನಿಷೇಧಿಸಲಾಗಿದೆ. ಜಾಹೀರಾತು ಫಲಕ ಮತ್ತು ಸಾರ್ವಜನಿಕ ಸಂದೇಶದ ಉಪವಿಧಿಗಳು-2018′ ರಲ್ಲಿ ಅಂಗಡಿ ಮುಂಗಟ್ಟು ಜಾಹೀರಾತುಗಳು, ವಾಹನ ಸ್ವ-ಜಾಹೀರಾತು ಇನ್ನಿತರೆ ಸಣ್ಣಪುಟ್ಟ ಜಾಹೀರಾತುಗಳನ್ನು ಸೀಮಿತ ಅವಧಿಗೆ ಮತ್ತು ಸೀಮಿತ ಅಳತೆಗೆ ಅನುಮತಿಸಲು ಮಾತ್ರ ಅವಕಾಶವಿದೆ. ಇವುಗಳನ್ನು ಹೊರತುಪಡಿಸಿ ಇತರೆ ಯಾವುದೇ ಖಾಸಗಿ ಸ್ವತ್ತುಗಳಲ್ಲಿ ಜಾಹೀರಾತು ಫಲಕಗಳನ್ನು ಅಳವಡಿಸಿ ವಾಣಿಜ್ಯ ಜಾಹೀರಾತುಗಳನ್ನು ಪ್ರದರ್ಶಿಸುವುದು, ಎಲ್.ಇ.ಡಿ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಹಾಗೂ ಸಾರ್ವಜನಿಕ ಮತ್ತು ವೈಯಕ್ತಿಕ ಜಾಹೀರಾತುಗಳು, ಶುಭಾಶಯಗಳು, ಸಭೆ ಸಮಾರಂಭಗಳು ಕುರಿತ ಜಾಹೀರಾತು ಪ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಭಿತ್ತಿಪತ್ರ, ಬಾವುಟಗಳು ಇತ್ಯಾದಿ ಅಳವಡಿಸುವುದನ್ನು ನಿಷೇಧಿಸಲಾಗಿದೆ.
ಆದ್ರೂ ಕೂಡ ಮತ್ತೆ ಮತ್ತೆ ಜಾಹೀರಾತು ಅಳವಡಿಸುತ್ತಿರುವುದರಿಂದ ಸಾರ್ವಜನಿಕ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿರುವುದು ಅಲ್ಲದೇ ನಗರದ ಸೌಂದರ್ಯ ಹಾಳಾಗುತ್ತಿದೆ ಎಂದು ಕಂದಾಯ/ಜಾಹೀರಾತು ವಿಭಾಗದ ವಿಶೇಷ ಆಯುಕ್ತರಾದ ಡಾ. ಆರ್.ಎಲ್ ದೀಪಕ್ ರವರು ಸಾರ್ವಜನಿಕ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ. ಬಿಬಿಎಂಪಿ ಕಾಯ್ದೆ 2020 ಮತ್ತು ಕರ್ನಾಟಕ ಮುಕ್ತ ಸ್ಥಳಗಳ ಕಾಯ್ದೆ 1981ರ ಕಲಂ(3)ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಈ ನಿಟ್ಟಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಣಿಜ್ಯ ಉತ್ಪನ್ನ ಮತ್ತು ಸೇವೆಗಳನ್ನು ಒದಗಿಸುವ ಕಂಪನಿ ಅಥವಾ ಉತ್ಪಾದಕರು ತಮ್ಮ ಉತ್ಪನ್ನಗಳ ಬಗ್ಗೆ ವಾಣಿಜ್ಯ ಜಾಹೀರಾತುಗಳ ಮೂಲಕ ಸಾರ್ವಜನಿಕ ಪ್ರದರ್ಶನ ಮಾಡುವಲ್ಲಿ ಖಾಸಗಿ ಏಜೆನ್ಸಿಗಳು ಅಧಿಕೃತವಾಗಿ ಬಿಬಿಎಂಪಿಯಿಂದ ಪರವಾನಿಗೆ ಪಡೆದಿರುವ ಏಜೆನ್ಸಿಗಳ ಮೂಲಕ ವಾಣಿಜ್ಯ ಜಾಹೀರಾತು ಪ್ರದರ್ಶನ ಮಾಡುವುದು. ಅದರ ಹೊರತಾಗಿ ಜಾಹೀರಾತು ಪ್ರಕಟಸುವಂತಹ ಕಂಪನಿ ಅಥವಾ ಉತ್ಪಾದಕರು ಹಾಗೂ ಪ್ರಕಟಣಾಗಾರರ ಮತ್ತು ಮುದ್ರಣಗಾರರು ಮತ್ತು ಸಂಬಂಧಪಟ್ಟ ಅನಧಿಕೃತ ಏಜೆನ್ಸಿಗಳ ಹಾಗೂ ಪ್ಲೆಕ್ಸ್ ಬ್ಯಾನರ್‌ಗಳಲ್ಲಿ ಭಾವಚಿತ್ರವಿರುವ ವ್ಯಕ್ತಿಗಳ ವಿರುದ್ಧ ಕರ್ನಾಟಕ ಮುಕ್ತ ಸ್ಥಳಗಳ ವಿರೂಪಗೊಳಿಸುವಿಕೆ ತಡೆ ಕಾಯ್ದೆ 1981ರ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಜೊತಗೆ ,6 ತಿಂಗಳವರೆಗಿನ ಕಾರಾವಾಸ ಅಥವಾ 1,000 ರೂಪಾಯಿ ವರೆಗೆ ದಂಡ ವಿಧಿಸಲಾಗುವುದು ಎಂದು ಕಂದಾಯ ಹಾಗೂ ಜಾಹೀರಾತು ವಿಭಾಗದ ವಿಶೇಷ ಆಯುಕ್ತರಾದ ಡಾ. ಆರ್.ಎಲ್ ದೀಪಕ್ ತಿಳಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಯುವತಿ ಅತ್ಯಾಚಾರ, ಕೊಲೆ ಪ್ರಕರಣ: ಕರ್ತವ್ಯಲೋಪ ಆರೋಪದಲ್ಲಿ 4 ಪೊಲೀಸ್ ಪೇದೆಗಳು ಅಮಾನತು

ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…

1 day ago

KSRTC ಬಸ್‌ನಲ್ಲಿ ಯುವತಿಗೆ ಕಿರುಕುಳ ಆರೋಪ: ಚಪ್ಪಲಿಯಿಂದ ಯುವಕನಿಗೆ ಧರ್ಮದೇಟು, ಕ್ಷಮೆಯಾಚನೆ

ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್‌ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್‌ನಲ್ಲಿ…

1 day ago

MBBS ಓದಲು ರಷ್ಯಾಗೆ ಹೋದ ಯುವಕನಿಗೆ ಪ್ರೊಫೆಸರ್ ಜೊತೆ ಪ್ರೀತಿ; ಮದುವೆ ಬಳಿಕ ಕ್ಲಿನಿಕ್ ಆರಂಭಿಸಿ ಲಕ್ಷಾಂತರ ಸಂಪಾದನೆ!

ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…

1 day ago

ಶಾಲಾ ಬಾಲಕಿಯರನ್ನು ಪ್ರೇಮದ ಬಲೆಗೆ ಬೀಳಿಸಿ ಹಣ ಸಂಪಾದನೆ ಆರೋಪ: ದೆಹಲಿಯಲ್ಲಿ 24 ವರ್ಷದ ಯುವಕ ಬಂಧನ

ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್‌ನಲ್ಲಿ ಪತ್ತೆಯಾದ…

1 day ago

ಕಿತ್ತೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಆಭರಣ ಕಳ್ಳತನ ಪ್ರಕರಣ ಭೇದಿಸಿ 5 ಅಂತರರಾಜ್ಯ ಕಳ್ಳರ ಬಂಧನ

ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…

1 day ago

ಬೆಳಗಾವಿಯಲ್ಲಿ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯಿದೆ ಅನುಷ್ಠಾನದ ಮೌಲ್ಯಮಾಪನ: ಸಂತ್ರಸ್ತರೊಂದಿಗೆ ಗುಂಪು ಚರ್ಚೆ

ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…

1 day ago