ಬಳ್ಳಾರಿ, ಆಗಸ್ಟ್ 7 – ದಾವಣಗೆರೆ-ಬಳ್ಳಾರಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಚಾಲಕನಿಗೆ, ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹಲ್ಲೆ ಮಾಡಿದ ಘಟನೆ ಇದೀಗ ಸದ್ದು ಮಾಡುತ್ತಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಈ ಪ್ರಕರಣಕ್ಕೆ ತೀವ್ರತೆ ಸಿಕ್ಕಿದ್ದು, ಸಂಬಂಧಿಸಿದ ಪೊಲೀಸ್ ಅಧಿಕಾರಿ ವಿರುದ್ಧ FIR ದಾಖಲಾಗಿದೆ.
ಮಾಹಿತಿಯ ಪ್ರಕಾರ, ಇಂದು ಮಧ್ಯಾಹ್ನ ಸುಮಾರು 2 ಗಂಟೆ ಸುಮಾರಿಗೆ ದಾವಣಗೆರೆ ಮೂಲದಿಂದ ಬಳ್ಳಾರಿಗೆ ತೆರಳುತ್ತಿದ್ದ KSRTC ಬಸ್ (ನಂ. KA17 F 1483) ಗಜಾಪುರ ಗ್ರಾಮ ಬಳಿ ಎದುರಿನಿಂದ ಬರುತ್ತಿದ್ದ ಕಾರನ್ನು ತಪ್ಪಿಸಲು ಎಡಬದಿಗೆ ಹರಿದು ಸಾಗಿದ ವೇಳೆ, ಅದೆ ದಿಕ್ಕಿನಲ್ಲಿ ಚಲಿಸುತ್ತಿದ್ದ ಬೈಕ್‌ಗೆ ತಾಗಿದೆ. ಆಯಾ ಬೈಕ್ ಸವಾರರು ಕೂಡ್ಲಿಗಿ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಮಂಜುನಾಥ ಎನ್ನಲಾಗಿದ್ದು, ಅವರು ತಕ್ಷಣವೇ ಬಸ್ಸು ಅಡ್ಡಗಟ್ಟು ಚಾಲಕ ರಾಮಲಿಂಗಪ್ಪ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ.
ಈ ಕುರಿತು KSRTC ಸಂಸ್ಥೆ ಪ್ರತ್ಯೇಕ ಪತ್ರಿಕಾ ಪ್ರಕಟಣೆ ನೀಡಿದ್ದು, ಘಟನೆ ನಂತರವೊಂದೆ ತನ್ನ ಚಾಲಕನಿಗೆ ಬೆಂಬಲ ನೀಡಿದ ಸಂಸ್ಥೆ, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮಾಹಿತಿ ನೀಡಿದೆ. ಇದರ ಬೆನ್ನಲ್ಲೇ ಸಚಿವರು KSRTC ವ್ಯವಸ್ಥಾಪಕ ನಿರ್ದೇಶಕರಿಗೆ ಆರೋಪಿಗೆ ವಿರುದ್ದ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ವ್ಯವಸ್ಥಾಪಕ ನಿರ್ದೇಶಕರ ಸೂಚನೆಯಂತೆ ಸಂಸ್ಥೆ ತಕ್ಷಣವೇ ವಿಜಯನಗರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಂಪರ್ಕಿಸಿ ಸೂಕ್ತ ಕ್ರಮಕ್ಕೆ ಒತ್ತಾಯಿಸಿದೆ. ಪರಿಣಾಮವಾಗಿ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿಯೇ ಮಂಜುನಾಥ್ ವಿರುದ್ಧ ಏರ್ಪಡಿಸಿದ ಹಲ್ಲೆ ಪ್ರಕರಣದಡಿ FIR ದಾಖಲಾಗಿದೆ.
ಈ ಘಟನೆ ಸಾರಿಗೆ ಸಿಬ್ಬಂದಿಯಲ್ಲಿ ಆಕ್ರೋಶ ಹುಟ್ಟುಹಾಕಿದ್ದು, ಕರ್ತವ್ಯದಲ್ಲಿರುವ ಸಿಬ್ಬಂದಿಯ ಮೇಲಿನ ದೌರ್ಜನ್ಯವನ್ನು ಸಹಿಸಲಾಗದು ಎಂಬ ಮಾತುಗಳು ಕೇಳಿಬರುತ್ತಿವೆ.
***
ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 80 88070392
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…