ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನಲ್ಲಿ ಪ್ರೀತಿಸಿ ಮದುವೆಯಾದ ಬಳಿಕ ಗರ್ಭಿಣಿ ಪತ್ನಿಯನ್ನು ಕೈಬಿಟ್ಟು ಮತ್ತೊಂದು ಮದುವೆಗೆ ಸಿದ್ಧನಾಗಿರುವ ಪತಿಯ ವಿರುದ್ಧ ಯುವತಿಯೊಬ್ಬಳು ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿದೆ.
ಪಾವಗಡ ತಾಲ್ಲೂಕಿನ ವೈ.ಎನ್. ಹೊಸಕೋಟೆಯ ನಿವಾಸಿಯಾದ ಸಂತ್ರಸ್ತೆ, ಸುಮಾರು ಏಳು ವರ್ಷಗಳ ಹಿಂದೆ ಕಾಲೇಜಿನಲ್ಲಿ ಓದುತ್ತಿದ್ದಾಗ ಜೆರಾಕ್ಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಬೊಮ್ಮಾನಾಯಕ್ ಎಂಬಾತನ ಪರಿಚಯವಾಗಿತ್ತು. ಪ್ಯಾನ್ ಕಾರ್ಡ್ ಮಾಡಿಸಲು ಹೋಗಿದ್ದ ವೇಳೆ ಆರಂಭವಾದ ಈ ಪರಿಚಯ, ನಂತರ ಪ್ರೀತಿಗೆ ತಿರುಗಿತ್ತು. ಪೋಷಕರ ವಿರೋಧದ ನಡುವೆಯೂ ಇಬ್ಬರೂ ಪಾವಗಡದ ದೇವಸ್ಥಾನದಲ್ಲಿ ವಿವಾಹವಾಗಿದ್ದರು.
ಮದುವೆಯಾದ ಬಳಿಕ ಸುಮಾರು ಒಂದೂವರೆ ವರ್ಷ ಸುಖ ಜೀವನ ನಡೆಸಿದ ಜೋಡಿಗೆ, ನಂತರ ಸಮಸ್ಯೆಗಳು ಎದುರಾದವು. ಗರ್ಭಿಣಿಯಾಗಿದ್ದ ಪತ್ನಿಯನ್ನು ಬೊಮ್ಮಾನಾಯಕ್ ತನ್ನ ಪೋಷಕರ ಮಾತಿಗೆ ಮರುಳಾಗಿ ದೂರ ಮಾಡಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ. ಇದೇ ವೇಳೆ ಆತನ ಕುಟುಂಬದವರು ಮತ್ತೊಂದು ಮದುವೆಗೆ ಸಿದ್ಧತೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ವಿಷಯವನ್ನು ಪ್ರಶ್ನಿಸಿದಾಗ, ಪತಿ ಹಾಗೂ ಅವರ ಕುಟುಂಬಸ್ಥರು ಜಾತಿ ನಿಂದನೆ, ವರದಕ್ಷಿಣೆ ಕಿರುಕುಳ ಮತ್ತು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.
ಆರು ತಿಂಗಳ ಗರ್ಭಿಣಿಯಾಗಿರುವ ಯುವತಿ ತನ್ನ ಹಾಗೂ ಗರ್ಭದಲ್ಲಿರುವ ಮಗುವಿನ ಭವಿಷ್ಯಕ್ಕಾಗಿ ನ್ಯಾಯ ಕೋರುತ್ತಿದ್ದು, “ನನಗೆ ನನ್ನ ಗಂಡ ಬೇಕು” ಎಂದು ಬೇಡಿಕೆ ಇಟ್ಟಿದ್ದಾಳೆ. ಈ ಸಂಬಂಧ ಬೊಮ್ಮಾನಾಯಕ್, ಅವರ ತಾಯಿ ಕರಿಯಮ್ಮ ಸೇರಿದಂತೆ ನಾಲ್ವರ ವಿರುದ್ಧ ತುಮಕೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…