ಪಟ್ಟಣದ ಗಾಂಧಿ ವೃತ್ತದಲ್ಲಿರುವ ಮೆಡಿಕಲ್ ಅಂಗಡಿಯಲ್ಲಿ ಶುಕ್ರವಾರ (ಏಪ್ರಿಲ್ 12) ತಡರಾತ್ರಿ ಸಂಭವಿಸಿದ ಶಾರ್ಟ್ ಸರ್ಕಿಟ್‌ನಿಂದ ಭಾರಿ ಅಗ್ನಿ ಅವಘಡ ನಡೆದಿದೆ. ಈ ವೇಳೆ ಅಂಗಡಿಯಲ್ಲಿ ಸಂಗ್ರಹಿಸಿದ್ದ ಔಷಧಿಗಳು, ನಗದು ಹಾಗೂ ಇತರ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ರಾತ್ರಿ ಸುಮಾರು 1 ಗಂಟೆಗೆ ಅಂಗಡಿಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಸುತ್ತಮುತ್ತಲಿನ ನಿವಾಸಿಗಳು ದಟ್ಟ ಹೊಗೆಯನ್ನು ಗಮನಿಸಿ ತಕ್ಷಣ ಅಂಗಡಿ ಮಾಲೀಕರಿಗೆ ಮಾಹಿತಿ ನೀಡಿದರು. ಆದರೆ, ಇತರರು ಬಕೆಟ್ ನೀರಿನಿಂದ ಬೆಂಕಿಯನ್ನು ನಂದಿಸಲು ಯತ್ನಿಸಿದರೂ ಆಗಲೇ ಬೆಂಕಿ ವ್ಯಾಪಕವಾಗಿ ಹರಡಿತ್ತು.
ಘಟನೆ ಸಂಭವಿಸಿದ ಸಂದರ್ಭದಲ್ಲಿ ಬೆಂಕಿಯ ತೀವ್ರತೆ ಹೆಚ್ಚಾಗಿದ್ದ ಕಾರಣ ಅಂಗಡಿಯೊಳಗಿನ ಎಲ್ಲಾ ವಸ್ತುಗಳು ಕೆಲವೇ ನಿಮಿಷಗಳಲ್ಲಿ ಸುಟ್ಟು ಹೋಗಿ ನಾಶವಾದವು. ಆದರೆ, ನೆರೆಯ ಅಂಗಡಿ ಮಾಲಿಕರು ಸಹಕಾರ ನೀಡಿದ್ದು, ತಮ್ಮ ಅಂಗಡಿಗಳಲ್ಲಿದ್ದ ವಸ್ತುಗಳನ್ನು ತಕ್ಷಣವೇ ಹೊರತೆಗೆದ ಕಾರಣ ಹೆಚ್ಚಿನ ಅನಾಹುತ ತಪ್ಪಿದಂತಾಯಿತು.
ಸುದ್ದೆ ತಿಳಿದ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಿಯಂತ್ರಣಕ್ಕೆ ತಂದರು. ಆದರೆ ಆಗಾಗಲೇ ಮೆಡಿಕಲ್ ಅಂಗಡಿಯೊಳಗಿನ ಔಷಧಿ, ನಗದು ಹಣ, ಫ್ರೀಜ್‌ಗಳು, ಮೆಜ್, ಕೂರಿ ಸೇರಿದಂತೆ ಎಲ್ಲವೂ ಭಸ್ಮವಾಗಿತ್ತು.
ಪ್ರಾಥಮಿಕ ಮಾಹಿತಿಯಂತೆ, ಸುಮಾರು ಐದುರಿಂದ ಆರು ಲಕ್ಷ ರೂಪಾಯಿಗಳಷ್ಟು ನಷ್ಟ ಸಂಭವಿಸಿರುವ ಸಾಧ್ಯತೆ ಇದೆ. ಘಟನೆ ಸಂಬಂಧ ತನಿಖೆ ಮುಂದುವರಿದಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…