ಉತ್ತರ ಕನ್ನಡ:-ಅಂಕೋಲಾದ ರಾಮನಗುಳಿ ಬಳಿ ಅನಾಥವಾಗಿದ್ದ ಕಾರಿನಲ್ಲಿ ಕೋಟಿ ರೂ ಹಣ ಸಿಕ್ಕಿದ ಪ್ರಕರಣದ ಆರೋಪಿಗಳಿಗೆ ಪೊಲೀಸರು ಗುಂಡೇಟು ಹೊಡೆದಿದ್ದಾರೆ.
ಜನವರಿ 28ರಂದು ಹುಬ್ಬಳ್ಳಿ ಅಂಕೋಲಾ ಹೆದ್ದಾರಿ ಅಂಚಿನ ರಾಮನಗುಳಿ ಬಳಿ ಐಷಾರಾಮಿ ಕಾರೊಂದು ಅನಾಥವಾಗಿ ಬಿದ್ದಿತ್ತು. ಕಾರಿನ ಗ್ಲಾಸುಗಳು ಒಡೆದಿದ್ದರಿಂದ ಅನೇಕರು ಕಾರು ಅಪಘಾತವಾಗಿದೆ ಎಂದು ಭಾವಿಸಿದ್ದರು. ಪೊಲೀಸರು ಬಂದು ಪರಿಶೀಲಿಸಿದ್ದರು. ಆಗ, ಕಾರಿನ ಒಳಗೆ 1.14 ಲಕ್ಷ ರೂ ಹಣ ಪತ್ತೆಯಾಗಿದ್ದು, ಆ ಹಣದ ಜೊತೆ ಕಾರನ್ನು ಪೊಲೀಸ್ ಸಿಬ್ಬಂದಿ ವಶಕ್ಕೆ ಪಡೆದಿದ್ದರು.
ಪ್ರಕರಣದ ವಿಚಾರಣೆ ನಡೆಸಿದಾಗ ಮಂಗಳೂರು ಮೂಲದ ತಲ್ಲತ್ತ ಮತ್ತು ನವಫಾಲ ಆರೋಪಿತರು ಸಿಕ್ಕಿ ಬಿದ್ದಿದ್ದರು. ಮುಂಬೈಯಲ್ಲಿ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದರು. ತನಿಖೆ ನಡೆಸಿದಾಗ ಕೋಟಿ ಹಣವಿರುವ ಕಾರನ್ನು ಕಳ್ಳರು ದರೋಡೆ ಮಾಡಿರುವುದು ಬೆಳಕಿಗೆ ಬಂದಿತ್ತು. ಈ ಆರೋಪಿತರನ್ನು ಗುರುವಾರ ಅಂಕೋಲಾ ಕಡೆ ಕರೆದೊಯ್ಯುತ್ತಿರುವಾಗ ಪೊಲೀಸರ ಮೇಲೆ ದಾಳಿಗೆ ಯತ್ನಿಸಿದರು. ಆತ್ಮರಕ್ಷಣೆಗಾಗಿ ಪೊಲೀಸರು ಪ್ರತಿ ದಾಳಿ ಮಾಡಿದರು.
ಈ ಗುಂಡಿನ ಜಟಾಪಟಿಯಲ್ಲಿ ಮುಂಡಗೋಡದ ಪಿಎಸ್ಐ ಪರಶುರಾಮ್ ಮಿರ್ಜಗಿ ಅಂಕೋಲಾ ಪಿಎಸ್‌ಆಯ್ ಉದ್ದಪ್ಪ ಭೈರಪ್ಪನವರ, ಸಿಬ್ಬಂದಿಗಳಾದ ಯಲ್ಲಾಪುರದ ಬಸವರಾಜ ಹಗರಿ ಹಾಗು ಮುಂಡಗೋಡ ಠಾಣೆಯ ಕೋಟೇಶ ನಾಗರವಳ್ಳಿ ಕಾರ್ಯಾಚರಣೆಯಲ್ಲಿ ಗಾಯಗೊಂಡು ಅಂಕೋಲಾ ತಾಲೂಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸ್ ಅಧೀಕ್ಷಕ ಎಂ ನಾರಾಯಣ ಅಸ್ಪತ್ರೆಗೆ ತೆರಳಿ ವಿಚಾರಣೆ ನಡೆಸಿದ್ದಾರೆ.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…