Latest

ಉದ್ಯಾನ ಪ್ರವೇಶ ಶುಲ್ಕದ ಹಣ ದುರ್ಬಳಕೆ ಆರೋಪ – ಪ್ರಥಮ ದರ್ಜೆ ಸಹಾಯಕ ಅಮಾನತು

ಧಾರವಾಡದ ನೃಪತುಂಗ ಬೆಟ್ಟ ಉದ್ಯಾನ ಪ್ರವೇಶ ಶುಲ್ಕದ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ, ಪ್ರಥಮ ದರ್ಜೆ ಸಹಾಯಕರೊಬ್ಬರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಹುಬ್ಬಳ್ಳಿ ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವಿಶ್ವನಾಥ ಮಹಾಜನ ಎಂಬವರ ವಿರುದ್ಧ ಈ ಕ್ರಮ ಜರುಗಿದೆ.

2024ರ ಮಾರ್ಚ್ 1ರಿಂದ 2025ರ ಜನವರಿ 31ರವರೆಗೆ ಉದ್ಯಾನ ಪ್ರವೇಶ ಶುಲ್ಕವಾಗಿ ಒಟ್ಟು ₹15.57 ಲಕ್ಷ ಸಂಗ್ರಹವಾಗಿದ್ದು, ಅದರಲ್ಲಿಯೂ ಕೇವಲ ₹8.95 ಲಕ್ಷವನ್ನು ಮಾತ್ರ ಸರ್ಕಾರದ ಖಾತೆಗೆ ಜಮಾ ಮಾಡಲಾಗಿತ್ತು. ಉಳಿದ ₹6.62 ಲಕ್ಷ ಹಣದ ಬಗ್ಗೆ ಲೆಕ್ಕಪತ್ರ ಸ್ಪಷ್ಟವಾಗದ ಹಿನ್ನೆಲೆ, ತನಿಖೆ ಆರಂಭಿಸಲಾಯಿತು.

ವಿಶ್ವನಾಥ ಮಹಾಜನ ಅವರು ಧಾರವಾಡ ವಲಯ ಅರಣ್ಯಾಧಿಕಾರಿ ಕಚೇರಿಯ ನಿರ್ವಹಣಾ ಹೊಣೆ ಹೊತ್ತಿದ್ದರು. ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಿದ ಬಗ್ಗೆ ಅವರು ನೋಂದಣಿ ಪುಸ್ತಕದಲ್ಲಿ ಸಹಿ ಹಾಕಿದ್ದರೂ, ದಾಖಲೆ ಪರಿಶೀಲನೆ ವೇಳೆ ಹಣ ದುರ್ಬಳಕೆಯಾದ ಬಗ್ಗೆ ಸ್ಪಷ್ಟತೆ ಲಭಿಸಿದೆ. ಈ ಕುರಿತು ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲೆಯಾಗಿದೆ.

ಪ್ರಕರಣದ ಸಂಬಂಧ ಇಲಾಖಾ ತನಿಖೆ ನಡೆಸಿದ ಅಧಿಕಾರಿಗಳು, ವಿವಿಧ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಹಣ ದುರ್ಬಳಕೆ ಪ್ರಕರಣ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ, ಕರ್ನಾಟಕ ನಾಗರಿಕ ಸೇವಾ ನಿಯಮಗಳ ಉಲ್ಲಂಘನೆಯಡಿ ಧಾರವಾಡ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಯತೀಶಕುಮಾರ್ ಅವರು ಏಪ್ರಿಲ್ 21 ರಂದು ವಿಶ್ವನಾಥ ಮಹಾಜನ ಅವರನ್ನು ಅಮಾನತುಗೊಳಿಸುವ ಆದೇಶ ಹೊರಡಿಸಿದ್ದಾರೆ.

ಸದ್ಯ ಪ್ರಕರಣ ಸಂಬಂಧ ಆಂತರಿಕ ತನಿಖೆಯೂ ಮುಂದುವರೆದಿದ್ದು, ಹಣದ ಲೆಕ್ಕಾಚಾರ ಹಾಗೂ ಇನ್ನಿತರ ನಿಖರ ಮಾಹಿತಿಗಾಗಿ ಹೆಚ್ಚಿನ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.

nazeer ahamad

Recent Posts

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

39 minutes ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

16 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

20 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago