ಚಿಕ್ಕಬಳ್ಳಾಪುರ, ಮೇ 30: ತಿಪ್ಪೇನಹಳ್ಳಿಯ ಸಮೀಪದಲ್ಲಿರುವ ಮಕ್ಕಳ ಆಸರೆ ಬಾಲಮಂದಿರದಿಂದ ನಾಪತ್ತೆಯಾಗಿದ್ದ ಐದು ಬಾಲಕಿಯರು ಇದೀಗ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ. ವಾರ್ಡನ್ ಕಿರುಕುಳದಿಂದ ತೊಂದರೆಗೆ ಒಳಗಾದ ಕಾರಣವಾಗಿ ಅವರು ವಸತಿ ನಿಲಯದಿಂದ ಹೊರಡಿದ್ದಾಗಿ ಬಾಲಕಿಯರು ತಿಳಿಸಿದ್ದಾರೆ.
ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ಅವರು, “ವಾರ್ಡನ್ ಶ್ವೇತಾ ನಮಗೆ ನಿರಂತರವಾಗಿ ಬುದ್ಧಿವಾದ ಹೇಳುತ್ತಿದ್ದರು, ಕೆಲವೊಮ್ಮೆ ಹೊಡೆದು, ರೂಮಿನಲ್ಲಿ ಕೂಡಿ ಹಾಕಿ ಬೆದರಿಸುತ್ತಿದ್ದರು. ನಾವು ಹೆಚ್ಚಿನ ಒತ್ತಡ ಅನುಭವಿಸುತ್ತಿದ್ದೆವು. ಹಾಸ್ಟೆಲ್‌ನಲ್ಲಿ ಇಳಿದುಕೊಳ್ಳಲು ಇಚ್ಛೆಯಾಗದೆ ಸಂಬಂಧಿಕರ ಮನೆಗೆ ಹೋಗಲು ನಿರ್ಧರಿಸಿದ್ದೆವು,” ಎಂದು ಹೇಳಿದ್ದಾರೆ.
ಪತ್ತೆಯಾಗಿದ್ಮೇಲೆ ಬಾಲಕಿಯರು ತಮ್ಮ ಪೋಷಕರು ಅಥವಾ ಸಂಬಂಧಿಕರ ಬಳಿ ಕಳುಹಿಸಬೇಕೆಂದು ಪೊಲೀಸ್ ಇಲಾಖೆಗೆ ಮನವಿ ಮಾಡಿಕೊಂಡಿದ್ದಾರೆ.
ಮದರ್ ತೆರೇಸಾ ಚಾರಿಟೇಬಲ್ ಟ್ರಸ್ಟ್ ನಡೆಸುವ ಈ ವಸತಿ ನಿಲಯದಲ್ಲಿ ಅನಾಥರು ಮತ್ತು ಏಕಪೋಷಕ ಮಕ್ಕಳಿಗೆ ಆಶ್ರಯ ನೀಡಲಾಗುತ್ತದೆ. ಬಾಲಕಿಯರು ನಾಪತ್ತೆಯಾಗುತ್ತಿದ್ದಂತೆ, ವಸತಿ ನಿಲಯದ ಆಡಳಿತದವರು ತಕ್ಷಣವೇ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಳಿಕ ಪೊಲೀಸರು ಶೋಧ ಕಾರ್ಯ ಕೈಗೊಂಡು, ಬಾಲಕಿಯರನ್ನು ಪತ್ತೆ ಹಚ್ಚಿದ್ದಾರೆ.
ಈ ಘಟನೆಯಿಂದಾಗಿ ಬಾಲಮಂದಿರದ ನಿರ್ವಹಣಾ ರೀತಿಯ ಬಗ್ಗೆ ಗಂಭೀರ ಪ್ರಶ್ನೆಗಳು ಮೂಡಿದ್ದು, ಸಂಬಂಧಪಟ್ಟ ಅಧಿಕಾರಿಗಳು ಮುಂದಿನ ಕ್ರಮಕ್ಕಾಗಿ ವಿಚಾರಣೆ ಆರಂಭಿಸಿದ್ದಾರೆ.
ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…