Latest

ಬಾಲಮಂದಿರದಿಂದ ನಾಪತ್ತೆಯಾಗಿದ್ದ ಐದು ಬಾಲಕಿಯರು ಪತ್ತೆ: ವಾರ್ಡನ್ ಕಿರುಕುಳಕ್ಕೆ ತೀವ್ರ ಆರೋಪ”

ಚಿಕ್ಕಬಳ್ಳಾಪುರ, ಮೇ 30: ತಿಪ್ಪೇನಹಳ್ಳಿಯ ಸಮೀಪದಲ್ಲಿರುವ ಮಕ್ಕಳ ಆಸರೆ ಬಾಲಮಂದಿರದಿಂದ ನಾಪತ್ತೆಯಾಗಿದ್ದ ಐದು ಬಾಲಕಿಯರು ಇದೀಗ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ. ವಾರ್ಡನ್ ಕಿರುಕುಳದಿಂದ ತೊಂದರೆಗೆ ಒಳಗಾದ ಕಾರಣವಾಗಿ ಅವರು ವಸತಿ ನಿಲಯದಿಂದ ಹೊರಡಿದ್ದಾಗಿ ಬಾಲಕಿಯರು ತಿಳಿಸಿದ್ದಾರೆ.

ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ಅವರು, “ವಾರ್ಡನ್ ಶ್ವೇತಾ ನಮಗೆ ನಿರಂತರವಾಗಿ ಬುದ್ಧಿವಾದ ಹೇಳುತ್ತಿದ್ದರು, ಕೆಲವೊಮ್ಮೆ ಹೊಡೆದು, ರೂಮಿನಲ್ಲಿ ಕೂಡಿ ಹಾಕಿ ಬೆದರಿಸುತ್ತಿದ್ದರು. ನಾವು ಹೆಚ್ಚಿನ ಒತ್ತಡ ಅನುಭವಿಸುತ್ತಿದ್ದೆವು. ಹಾಸ್ಟೆಲ್‌ನಲ್ಲಿ ಇಳಿದುಕೊಳ್ಳಲು ಇಚ್ಛೆಯಾಗದೆ ಸಂಬಂಧಿಕರ ಮನೆಗೆ ಹೋಗಲು ನಿರ್ಧರಿಸಿದ್ದೆವು,” ಎಂದು ಹೇಳಿದ್ದಾರೆ.

ಪತ್ತೆಯಾಗಿದ್ಮೇಲೆ ಬಾಲಕಿಯರು ತಮ್ಮ ಪೋಷಕರು ಅಥವಾ ಸಂಬಂಧಿಕರ ಬಳಿ ಕಳುಹಿಸಬೇಕೆಂದು ಪೊಲೀಸ್ ಇಲಾಖೆಗೆ ಮನವಿ ಮಾಡಿಕೊಂಡಿದ್ದಾರೆ.

ಮದರ್ ತೆರೇಸಾ ಚಾರಿಟೇಬಲ್ ಟ್ರಸ್ಟ್ ನಡೆಸುವ ಈ ವಸತಿ ನಿಲಯದಲ್ಲಿ ಅನಾಥರು ಮತ್ತು ಏಕಪೋಷಕ ಮಕ್ಕಳಿಗೆ ಆಶ್ರಯ ನೀಡಲಾಗುತ್ತದೆ. ಬಾಲಕಿಯರು ನಾಪತ್ತೆಯಾಗುತ್ತಿದ್ದಂತೆ, ವಸತಿ ನಿಲಯದ ಆಡಳಿತದವರು ತಕ್ಷಣವೇ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಳಿಕ ಪೊಲೀಸರು ಶೋಧ ಕಾರ್ಯ ಕೈಗೊಂಡು, ಬಾಲಕಿಯರನ್ನು ಪತ್ತೆ ಹಚ್ಚಿದ್ದಾರೆ.

ಈ ಘಟನೆಯಿಂದಾಗಿ ಬಾಲಮಂದಿರದ ನಿರ್ವಹಣಾ ರೀತಿಯ ಬಗ್ಗೆ ಗಂಭೀರ ಪ್ರಶ್ನೆಗಳು ಮೂಡಿದ್ದು, ಸಂಬಂಧಪಟ್ಟ ಅಧಿಕಾರಿಗಳು ಮುಂದಿನ ಕ್ರಮಕ್ಕಾಗಿ ವಿಚಾರಣೆ ಆರಂಭಿಸಿದ್ದಾರೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

12 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

1 day ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago