Latest

ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐದು ಜನ ಸ್ಥಳದಲ್ಲಿಯೇ ದುರ್ಮರಣ.

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕೀರೆಸೂರ ಕ್ರಾಸ್ ಬಳಿ ಇಂದು ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ಸ್ಥಳದಲ್ಲಿಯೇ ದುರ್ಮರಣ ಹೊಂದಿದ್ದಾರೆ. ಈ ದುರ್ಘಟನೆಯಲ್ಲಿ ಸಾವಿಗೀಡಾದವರು ಶಿವಮೊಗ್ಗ ಜಿಲ್ಲೆಯ ಸಾಗರದ ನಿವಾಸಿಗಳೆಂದು ತಿಳಿದುಬಂದಿದೆ.

ಪ್ರಾರಂಭಿಕ ಮಾಹಿತಿಯ ಪ್ರಕಾರ, ನವಲಗುಂದ ದಿಕ್ಕೆಯಿಂದ ಬರುತ್ತಿದ್ದ ಲಾರಿ, ಎದುರಿನಿಂದ ಬರುತ್ತಿದ್ದ ಕಾರಿಗೆ ತೀವ್ರವಾಗಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐದು ಮಂದಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೃತರಲ್ಲಿ 29 ವರ್ಷದ ಶ್ವೇತಾ, 26 ವರ್ಷದ ಅಂಜಲಿ, 55 ವರ್ಷದ ವಿಠ್ಠಲ್ ಹಾಗೂ 40 ವರ್ಷದ ಶಶಿಕಲಾ ಎಂಬವರನ್ನು ಗುರುತಿಸಲಾಗಿದೆ. ಇನ್ನು ಒಬ್ಬರ ಹೆಸರು ಈವರೆಗೆ ದೃಢಪಟ್ಟಿಲ್ಲ.

ಅಪಘಾತ ಸಂಭವಿಸಿದ ತಕ್ಷಣ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್ ಬ್ಯಾಕೋಡ್, ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸ್ಪೆಕ್ಟರ್ ಮುರುಗೇಶ್ ಚನ್ನಣ್ಣನವರ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತರ ಶವಗಳನ್ನು ಹೆಚ್ಚಿನ ತನಿಖೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಶವಗಾರಕ್ಕೆ ಕಳಿಸಲಾಗಿದೆ.

ಬೇಲೂರಿಗೆ ನೋಂದಾಯಿತವಾಗಿದ್ದ ಕಾರು ಅಪಘಾತಕ್ಕೀಡಾಗಿದೆ ಎಂದು ತಿಳಿದುಬಂದಿದ್ದು, ಲಾರಿ ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ನಂತರ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ವರದಿ: ಶಿವರಾಜ್ ಪಿ.ಆರ್.

nazeer ahamad

Recent Posts

ಮನೆ ಬಳಕೆಗೆ ಸಿಗದ ಗೃಹಬಳಕೆಯ ಸಿಲಿಂಡರ್‌ಗಳು ಹೋಟೆಲ್‌ಗಳಲ್ಲಿ , ಅಧಿಕಾರಿಗಳ ನಿರ್ಲಕ್ಷ್ಯ

ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ…

12 minutes ago

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

6 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

6 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

6 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

6 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

7 hours ago