ಅಪ್ರಾಪ್ತ ಬಾಲಕಿಯೊಬ್ಬಳಿಗೆ ಬಲವಂತವಾಗಿ ಕಿಸ್ ಮಾಡಿ ರ‍್ಯಾಗಿಂಗ್ ಮಾಡಿದ ಘಟನೆ ಒಡಿಶಾದಲ್ಲಿ ನಡೆದಿದೆ. ಘಟನೆಯ ವಿಡಿಯೋ ವೈರಲ್ ಆದ ನಂತರ ಇಬ್ಬರು ಅಪ್ರಾಪ್ತರು ಸೇರಿದಂತೆ ಐವರು ವಿದ್ಯಾರ್ಥಿಗಳನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡೊದ್ದಾರೆ. ಗುಂಜನ್ ಜಿಲ್ಲೆಯ ಕಾಲೇಜಿನಲ್ಲಿ ಈ ಘಟನೆ ಸಂಬಂಧಿಸಿದಂತೆ 12 ಮಂದಿ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ.
ಕಳೆದ ತಿಂಗಳು ಸರ್ಕಾರಿ ಕಾಲೇಜಿಗೆ ಸೇರಿದ್ದ ಪ್ರಥಮ ವರ್ಷದ ವಿದ್ಯಾರ್ಥಿನಿಗೆ ಅಪ್ರಾಪ್ತ ಬಾಲಕನೋರ್ವ ಹಿರಿಯ ವಿದ್ಯಾರ್ಥಿಗಳ ಪ್ರಚೋದನೆಯ ಮೇರೆಗೆ ಮೈದಾನದಲ್ಲಿ ಬಲವಂತವಾಗಿ ಮುತ್ತಿಟ್ಟಿದ್ದಾನೆ. ಅವಳು ಹೊರಡಲು ಎದ್ದು ನಿಂತಾಗ, ಸೀನಿಯರ್ ವಿದ್ಯಾರ್ಥಿಯೊಬ್ಬ ಅವಳ ಕೈ ಹಿಡಿದು ತಡೆದಿದ್ದಾನೆ. ಆತ ಕೈಯಲ್ಲಿ ದೊಣ್ಣೆ ಹಿಡಿದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ಆಶ್ಚರ್ಯವೆಂಬಂತೆ ಈ ಘಟನೆಯು ಕಾಲೇಜಿನ ಇತರ ಹುಡುಗಿಯರ ಸಮ್ಮುಖದಲ್ಲೇ ನಡೆದಿದೆ. ಆದರೆ ದೈಹಿಕ ಕಿರುಕುಳದ ವಿರುದ್ಧ ಪ್ರತಿಭಟಿಸುವ ಬದಲು ಅವರು ಪ್ರೋತ್ಸಾಹ ನೀಡುತ್ತಿರುವುದು ವಿಡಿಯೋದಲ್ಲಿ ಕಾಣಬಹುದು.
ಘಟನೆಯಲ್ಲಿ ಭಾಗಿಯಾದವರನ್ನು ನಾವು ಗುರುತಿಸಿದ್ದೇವೆ. ಅಲ್ಲದೆ ಅವರನ್ನು ಕಾಲೇಜಿನಿಂದ ಹೊರ ಹಾಕಿದ್ದೇವೆ. ಮುಂದೆ ಅವರಿಗೆ ಪರೀಕ್ಷೆ ಬರೆಯಲೂ ಅವಕಾಶ ನೀಡುವುದಿಲ್ಲ ಎಂದು ಕಾಲೇಜಿನ ಪ್ರಿನ್ಸಿಪಾಲ್ ಹೇಳಿದ್ದಾರೆ. ಇದು ಕೇವಲ ರ‍್ಯಾಗಿಂಗ್ ಪ್ರಕರಣವಲ್ಲ, ಆದರೆ ದೈಹಿಕ ಕಿರುಕುಳಕ್ಕೆ ಸಮಾನವಾಗಿದೆ ಎಂದು ಬರ್ಹಾಂಪುರದ ಪೊಲೀಸ್ ಅಧೀಕ್ಷಕ ಸರಬನ್ ವಿವೇಕ್ ಹೇಳಿದ್ದಾರೆ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್‌ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್‌ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್‌ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…