ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರಬೆಟ್ಟ-ಕೌದಳ್ಳಿ ಬಳಿ ಕಾಡಾನೆಯ ದಂತವನ್ನು ಸಾಗಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ತಮಿಳುನಾಡಿನ ಶಕ್ತಿವೇಲು (45) ಮತ್ತು ಹನೂರಿನ ನಾಗೇಂದ್ರಬಾಬು (63) ಎಂದು ಗುರುತಿಸಲಾಗಿದೆ.ಖಚಿತ ಮಾಹಿತಿಯ ಮೇರೆಗೆ, ಆರೋಪಿಗಳು ಬೈಕ್‌ನಲ್ಲಿ ಆನೆ ದಂತವನ್ನು ಮಾರಾಟಕ್ಕಾಗಿ ಸಾಗಾಣಿಕೆ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ ರಾಮಾಪುರ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಎಸ್‌ಐ ಲೋಕೇಶ್ ಮತ್ತು ಸಿಬ್ಬಂದಿ ಗಿರೀಶ್, ಮಹೇಂದ್ರ, ಲಿಯಾಖತ್ ಖಾನ್, ಪರಶುರಾಮ್ ಮತ್ತು ಮಕಂದರ್ ತಂಡ, ಕೌದಳ್ಳಿ-ಮಹದೇಶ್ವರಬೆಟ್ಟ ಮುಖ್ಯರಸ್ತೆಯಲ್ಲಿ ವಾಹನವನ್ನು ತಡೆದು ಪರಿಶೀಲನೆ ನಡೆಸಿದರು. ತಪಾಸಣೆಯ ವೇಳೆ ಚೀಲದಲ್ಲಿ ಆನೆ ದಂತ ಪತ್ತೆಯಾಗಿದೆ.ಈ ಘಟನೆಗೆ ಸಂಬಂಧಿಸಿದಂತೆ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…