Latest

ಅರಣ್ಯಾಧಿಕಾರಿ ಕೆ.ಎನ್. ರವಿಕೀರ್ತಿ ಅಮಾನತು: ಕರ್ತವ್ಯ ಲೋಪದ ಆರೋಪ,

ಕರ್ತವ್ಯ ಲೋಪದಡಿ ಶ್ರೀನಿವಾಸಪುರ ವಲಯ ಅರಣ್ಯಾಧಿಕಾರಿ ಕೆ.ಎನ್‌.ರವಿಕೀರ್ತಿ ಅವರನ್ನು ಅಮಾನತುಪಡಿಸಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಅರಣ್ಯ ಪಡೆ) ಮೀನಾಕ್ಷಿ ನೇಗಿ ಆದೇಶಿಸಿದ್ದಾರೆ.

ವಲಯ ವ್ಯಾಪ್ತಿಯಲ್ಲಿ ನಡೆದಿರುವ ಬೆಳವಣಿಗೆಗಳ ಬಗ್ಗೆ ರವಿಕೀರ್ತಿ ಇಲಾಖೆಯ ಮೇಲಧಿಕಾರಿಗಳಿಗೆ ಮಾಹಿತಿ ನೀಡದೆ, ನ್ಯಾಯಾಲಯದಲ್ಲಿಯೂ ಯಾವುದೇ ಕ್ರಮವಹಿಸದೆ ಕರ್ತವ್ಯ ಲೋಪ ಎಸಗಿ ಒತ್ತುವರಿದಾರರಿಗೆ ಸಹಾಯ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿರುತ್ತದೆ ಎಂದು ಅಮಾನತು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ ಬೆಂಗಳೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿಯು (ಸಿಎಫ್‌) ಮೀನಾ ನೇಗಿ ಅವರಿಗೆ ವರದಿ ನೀಡಿದ್ದರು.

ಕೋಲಾರ ಪ್ರಾದೇಶಿಕ ವಿಭಾಗದ ಶ್ರೀನಿವಾಸಪುರ ವಲಯದ ವ್ಯಾಪ್ತಿಯಲ್ಲಿ 4,060 ಎಕರೆ ಅರಣ್ಯ ಪ್ರದೇಶವನ್ನು 1910 ಜುಲೈ 26ರ ಪ್ರಕಾರ ರಾಜ್ಯ ಅರಣ್ಯ ಪ್ರದೇಶವೆಂದು ಘೋಷಿಸಲಾಗಿದೆ. ಕರ್ನಾಟಕ ಅರಣ್ಯ ಪ್ರದೇಶ ಕಾಯ್ದೆ 1963ರ ಸೆಕ್ಷನ್‌ 23ರ ಪ್ರಕಾರ ಅರಣ್ಯ ಪ್ರದೇಶವು ಮೀಸಲು ಅರಣ್ಯ ಪ್ರದೇಶವಾಗಿದೆ. ಈ ಪ್ರದೇಶದಲ್ಲಿ ಒತ್ತುವರಿಯಾಗಿದ್ದ ಅರಣ್ಯ ಜಮೀನನ್ನು 2023ನೇ ಸಾಲಿನಲ್ಲಿ ತೆರವುಗೊಳಿಸಲಾಗಿದೆ. ತೆರವು ಕಾರ್ಯಾಚರಣೆ ವಿರುದ್ಧ ಅಂದಾಜು 12 ರಿಟ್ ಅರ್ಜಿಗಳು ಹೈಕೋರ್ಟ್‌ನಲ್ಲಿ ದಾಖಲಾಗಿದ್ದು, ವಿಚಾರಣೆ ಹಂತದಲ್ಲಿವೆ ಎಂದು ವರದಿಯಲ್ಲಿ ತಿಳಿಸಿದ್ದರು.

ರಿಟ್‌ ಅರ್ಜಿ (20247/2023) ಸಂಬಂಧಿಸಿದಂತೆ ಒತ್ತುವರಿದಾರ ಕೆ.ಎಂ.ನಾಗರಾಜು ಅವರ ಸುಮಾರು 6 ಎಕರೆ ಜಮೀನನ್ನು ‌ಕಾರ್ಯಾಚರಣೆ ನಡೆಸಿ ತೆರವುಗೊಳಿಸಲಾಗಿರುತ್ತದೆ. ಆ ಜಾಗದಲ್ಲಿ ಕೆಎಫ್‌ಡಿಎ ಯೋಜನೆಯಡಿ ನೆಡುತೋಪು ಬೆಳೆಸಿದ್ದು, 1ನೇ ವರ್ಷದ ನಿರ್ವಹಣೆಯಲ್ಲಿ ಇರುತ್ತವೆ. ಇದಲ್ಲದೆ; ತೆರವುಗೊಳಿಸಿದ ಪ್ರದೇಶದ ಗಡಿಯನ್ನು ಒತ್ತುವರಿಯನ್ನು ಸಂರಕ್ಷಿಸುವ ಸಲುವಾಗಿ ಜಾನುವಾರು ನಿರೋಧ ಕಂದಕ ನಿರ್ಮಿಸಲಾಗಿದೆ. ಅದಕ್ಕೆ ₹ 3.25 ಕೋಟಿ ಖರ್ಚಾಗಿದೆ ಎಂದಿದ್ದಾರೆ.

ಆದರೆ, ಒತ್ತುವರಿದಾರ ನಾಗರಾಜು ಹಾಗೂ ಇನ್ನಿತರರು ರಿಟ್‌ ಅರ್ಜಿ ಸಂಬಂಧದ ಜಮೀನು ತಮ್ಮ ಪರ ಮಧ್ಯಂತರ ಆದೇಶ ಇದೆ ಎಂದು ಹೇಳಿ ಏಪ್ರಿಲ್‌ 5ರಂದು ಆರೇಳು ಟ್ರ್ಯಾಕ್ಟರ್‌ಗಳನ್ನು ತೆಗೆದುಕೊಂಡು ಅರಣ್ಯ ಪ್ರದೇಶಕ್ಕೆ ಅನಧಿಕೃತವಾಗಿ ಪ್ರವೇಶ ಮಾಡಿ ಸುಮಾರು 100 ಎಕರೆಯಷ್ಟು ನೆಡುತೋಪು ನಿರ್ಮಾಣ ಮಾಡಿರುವುದನ್ನು ಹಾಳು ಮಾಡಿದ್ದಾರೆ. ಈ ವಿಚಾರವನ್ನು ಕೋಲಾರ ಡಿಸಿಎಫ್‌ ದೂರವಾಣಿ ಮೂಲಕ ತಿಳಿಸಿರುವುದಾಗಿ ವರದಿಯಲ್ಲಿ ಸಿಎಫ್‌ ಉಲ್ಲೇಖಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದ ದಾಖಲಾತಿಗಳನ್ನು ಕೂಲಂಕಷವಾಗಿ ಪರಿಶೀಲಿಸಿದ್ದು, ಶ್ರೀನಿವಾಸಪುರ ವಲಯ ಅರಣ್ಯಾಧಿಕಾರಿ ರವಿಕೀರ್ತಿ ಕರ್ತವ್ಯ ಪಾಲನೆಯಲ್ಲಿ ನಿರ್ಲಕ್ಷ್ಯ ತೋರಿದ್ದಾರೆ. ಅಲ್ಲದೆ; ಅಧಿಕಾರಿ ವಿರುದ್ಧ ಕೇಳಿ ಬಂದಿರುವ ಆರೋಪಗಳಿಗೆ ಸಾಕ್ಷ್ಯಾಧಾರಗಳಿದ್ದು, ಅಧಿಕಾರಿ ವಿರುದ್ಧ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಶಿಸ್ತು ಪ್ರಾಧಿಕಾರಕ್ಕೆ ಮನವರಿಕೆಯಾಗಿದೆ. ಕನಾಟಕ ಅರಣ್ಯ ಸಂಹಿತೆ 1976ರಡಿ ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ವಿಫಲರಾಗಿರುವುದು ಹಾಗೂ ಕರ್ನಾಟಕ ನಾಗರಿಕ ಸೇವಾ ನಿಯಮಗಳು 2021 ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿರುತ್ತದೆ. ಆಡಳಿತಾತ್ಮ ಹಿತದೃಷ್ಟಿಯಿಂದ, ಶಿಸ್ತು ಪರಿಪಾಲನೆಗಾಗಿ ಗಂಭೀರವಾಗಿ ಪರಿಗಣಿಸಲಾಗಿದೆ, ಅದ್ದರಿಂದ ಇಲಾಖೆಯ ವಿಚಾರಣೆ ಮತ್ತು ತನಿಖೆಯನ್ನು ಬಾಕಿ ಇರಿಸಿ ಅಮಾನತ್ತಿನಲ್ಲಿಡಲಾಗಿದೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

20 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago