ಬೆಂಗಳೂರು: ರಾಜ್ಯದ ಮಾಜಿ ಡಿಜಿಪಿ ಹಾಗೂ ಐಜಿಪಿ ಓಂ ಪ್ರಕಾಶ್ ಅವರ ಹತ್ಯೆ ಪ್ರಕರಣದಲ್ಲಿ ಹೊಸ ತಿರುವು ಸಿಕ್ಕಿದ್ದು, ಅವರ ಪತ್ನಿ ಪಲ್ಲವಿ ಓಂ ಪ್ರಕಾಶ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪತಿ ಹತ್ಯೆ ಆರೋಪದ ಮೇಲೆ ಪೊಲೀಸರು ಅವರನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.

ಮಂಗಳವಾರ ಸಂಜೆ ಓಂ ಪ್ರಕಾಶ್ ಅವರ ನಿವಾಸದಲ್ಲಿ ನಡೆದ ಈ ಹೃದಯವಿದಾರಕ ಘಟನೆ ರಾಜ್ಯದ ಪೊಲೀಸ್ ವಲಯವನ್ನೇ ಬೆಚ್ಚಿ ಬೀಳಿಸಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಪತ್ನಿ ಪಲ್ಲವಿ ಅವರು ಚಾಕುವಿನಿಂದ ಏಕಾಏಕಿ ಹಲ್ಲೆ ನಡೆಸಿದ್ದು, ಓಂ ಪ್ರಕಾಶ್ ಅವರ ಎದೆ, ಹೊಟ್ಟೆ ಹಾಗೂ ಕೈಗೆ 8 ರಿಂದ 10 ಬಾರಿ ಇರಿದಿದ್ದಾರೆ.

ಈ ಹಲ್ಲೆಯಿಂದ ಗಂಭೀರ ಗಾಯಗೊಂಡ ಓಂ ಪ್ರಕಾಶ್, ನೆಲದ ಮೇಲೆ ರಕ್ತದ ಮಡುವಿನಲ್ಲಿ ಸುಮಾರು 15 ರಿಂದ 20 ನಿಮಿಷ ಪಡಕೆಯಾಗಿದ್ದು, ಶೀಘ್ರದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆ ಬಗ್ಗೆ ಮಾಹಿತಿ ದೊರಕಿದ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಪಲ್ಲವಿ ಓಂ ಪ್ರಕಾಶ್ ಅವರನ್ನು ವಶಕ್ಕೆ ಪಡೆದಿದ್ದು, ಪತಿ ಹತ್ಯೆಯ ಹಿಂದೆ ಇರುವ ಕಾರಣಗಳತ್ತ ತನಿಖೆ ಆಳವಾಗಿ ಮುಂದುವರಿಸುತ್ತಿದ್ದಾರೆ.

ಪ್ರಸ್ತುತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿದೆ.

Related News

error: Content is protected !!