Latest

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಮುಖಾಮುಖಿ ಡಿಕ್ಕಿ: ಕುಟುಂಬದ ನಾಲ್ವರು ದುರ್ಮರಣ.

ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ರ ಬಿದನಗೆರೆ ಬೈಪಾಸ್ ಬಳಿ ಭಾನುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕುಟುಂಬದ ನಾಲ್ವರು ಸಾವಿಗೀಡಾದ ದುರ್ಘಟನೆ ನಡೆದಿದೆ.

ಅಪಘಾತದಲ್ಲಿ ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದ ನಟರಾಜ ಬಡಾವಣೆಯ ನಿವಾಸಿ ಹಾಗೂ ಭಾರತ್ ಕೋಪರೇಟಿವ್ ಬ್ಯಾಂಕ್ ನಿರ್ದೇಶಕ ಸೀಬೆಗೌಡ (45), ಅವರ ಪತ್ನಿ ಶೋಭಾ (36), ಹಾಗೂ ಮಕ್ಕಳಾದ ದುಂಬಿಶ್ರೀ ಮತ್ತು ಭಾನುಕಿರಣ್ ಗೌಡ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.

ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಸೀಬೆಗೌಡ ತಮ್ಮ ಮಗ ಭಾನುಕಿರಣ್‌ಗೌಡನನ್ನು ಕುಣಿಗಲ್‌ನ ವಾಲಿ ಇಂಟರ್ ನ್ಯಾಷನಲ್ ಶಾಲೆಗೆ ಸೇರಿಸಲು ತಮ್ಮ ಕುಟುಂಬದೊಂದಿಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಹಾಸನದಿಂದ ಬರುತ್ತಿದ್ದ ವೇಗದ ಕ್ಯಾಂಟರ್ ವಾಹನವೊಂದು ನಿಯಂತ್ರಣ ತಪ್ಪಿ ಅವರ ಕಾರಿಗೆ ಎದುರಿನಿಂದ ಡಿಕ್ಕಿ ಹೊಡೆದು ಭೀಕರ ಅವಘಡ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಸವಾರರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆಯ ನಂತರ ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹಗಳನ್ನು ಕಾರಿನಿಂದ ಹೊರತೆಗೆದು ಕುಣಿಗಲ್ ಸರಕಾರಿ ಆಸ್ಪತ್ರೆಗೆ ಸಾಗಿಸಿದರು.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು, ಅಪಘಾತಕ್ಕೆ ಕಾರಣವಾಗಿರುವ ಕ್ಯಾಂಟರ್ ಚಾಲಕನ ಅಜಾಗರೂಕ ಚಾಲನೆ ಮತ್ತು ಸಾರಿಗೆ ನಿಯಮಗಳ ಉಲ್ಲಂಘನೆ ಪ್ರಮುಖ ಕಾರಣವೆನ್ನಲಾಗಿದೆ. ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಅವನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಈ ಅಪಘಾತದಿಂದ ಮಾಗಡಿಯ ಸೀಬೆಗೌಡ ಅವರ ಮನೆಮಾತಾದ ಕುಟುಂಬವೊಂದೇ ನಾಶವಾಗಿದ್ದು, ಸ್ಥಳೀಯರಲ್ಲಿ ಶೋಕದ ಛಾಯೆ ಮನೆಮಾಡಿದೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

21 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

3 days ago