Latest

ಮನೆಯೊಳಗೆ ನುಗ್ಗಿ ಬಂಗಾರ ಆಭರಣ ಕಳ್ಳತನ ಮಾಡಿದ್ದ ನಾಲ್ವರು ಪೊಲೀಸರ ಬಲೆಗೆ.

ಶಿರಸಿ;  ಮನೆಯೊಳಗಿದ್ದ ಲಕ್ಷಾಂತರ ರೂಪಾಯಿ ನಗದು ಹಾಗೂ ಬಂಗಾರದ ಆಭರಣ ಗಳನ್ನು ಕಳ್ಳತನ ಮಾಡಿದ್ದ ನಾಲ್ವರು ಆರೋಪಿಗಳನ್ನು ಬನವಾಸಿ ಪೋಲಿಸರು ಬಂಧಿಸಿದ್ದಾರೆ.

ಶಿರಗೋಡದ ಮಹಮ್ಮದ್ ಕೈಫ್ ಮಹಮ್ಮದ್ ಗೌಸ್ (೧೯ ), ಬನವಾಸಿ ಯ ವಿಶ್ವ ಮಹೇಶ ಪಾವಸ್ಕರ, (೨೧), ಬನವಾಸಿ ಕಡಗೋಡದ,  ಯಾಸೀನ್ ಬಾಷಾಸಾಬ್ (೧೮) ಹಾಗೂ ಹೊಸಪೇಟೆ ರಸ್ತೆ ಬನವಾಸಿಯ, ರಿಯಾಜ್ ತಂದೆ ಇಕ್ಬಾಲ್ ಚೌಧರಿತ (೧೯) ಆರೋಪಿಗಳಾಗಿದ್ದಾರೆ. ಆರೋಪಿಗಳು ಸ.೭ರಂದು ಬನವಾಸಿ ಯ ಖಲೀಲ ಅಬ್ದುಲ್ ಅಜೀಂ ಶೇಖ್ ಎಂಬಾತರ ಮನೆಯ ಒಳಗಡೆ ನುಗ್ಗಿ ಸುಮಾರು ೨,೫೫,೦೦೦ ರೂ, ನಗದು ಹಣ ಹಾಗೂ ಸುಮಾರು ೪ ಗ್ರಾಂ ತೂಕದ ಬಂಗಾರದ ನಮೂನೆಯ ಸಣ್ಣ ಉಂಗುರುಗಳು ೪.೦೦೦=೦೦ ರೂ, ಬೆಲೆಯವುಗಳನ್ನು ಕಳ್ಳತನ ಮಾಡಿಕೊಂಡು ಹೋಗಿದ್ದರು.ಈ ಕುರಿತು ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿಗಳ ಬಂಧನಕ್ಕಾಗಿ ವಿಶೇಷ ತಂಡ ರಚಿಸಿ ಕಾರ್ಯಾಚರಣೆ ಗಿಳಿದ ಪೋಲಿಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರಕರಣದ ಮೊದಲನೇ ಆರೋಪಿಯಾದ ಮಹಮ್ಮದ್ ಕೈಫ್ ಮಹಮ್ಮದ್ ಗೌಸ್ ಈತನು ಪೆ.೧೬ರಂದು ಬನವಾಸಿ ಯ ಸುಮರ್ಣಾ ಮಾಲತೇಶ ಎಂಬಾತರ ಮನೆಯನ್ನು ಕಳ್ಳತನ ಮಾಡಿದ್ದನ್ನೂ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ.

ಪೋಲಿಸ್ ತನಿಖೆ ಯಿಂದ ಎರಡು ಪ್ರಕರಣಕ್ಕೆ ಸಂಬಂಧಿಸಿ ಒಟ್ಟು-೨,೭೫,೦೦೦ ನಗದು ಹಾಗೂ ೧೦ ಗ್ರಾಂ ಬಂಗಾರದ  ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕಾರ್ಯಾಚರಣೆ ಯಲ್ಲಿ ಡಿವೈಎಸ್ಪಿ ರವಿನಾಯ್ಕ ಸಿಪಿಐ ರಾಮಚಂದ್ರ ನಾಯಕ್ ಮಾರ್ಗದರ್ಶನ ದಲ್ಲಿ ಬನವಾಸಿ ಠಾಣೆ ಪಿಎಸ್ಐ ಗಳಾದ ಹನುಮಂತ ಬೀರಾದಾರ, ಚಂದ್ರಕಲಾ ಪತ್ತಾರ್ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು

ಭ್ರಷ್ಟರ ಬೇಟೆ

Recent Posts

ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ; ಬೇಸತ್ತು ಚರಂಡಿ ಸ್ವಚ್ಛಗೊಳಿಸಿದ ಮಹಿಳೆ.

ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಾಳು ಗ್ರಾಮದ ದುಮ್ಮಾಡಿ ಕೆಂಚಮ್ಮ ಎಂಬ ಮಹಿಳೆಯೋರ್ವರು ತಮ್ಮ…

9 hours ago

ಬಸವನ ಬಾಗೇವಾಡಿಯಲ್ಲಿ ಅಕ್ರಮ LPG ರೀಫಿಲ್ಲಿಂಗ್ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…

15 hours ago

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

2 days ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

2 days ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

3 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

3 days ago