ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ಗಾಂಜಾ ಸೇವಿಸುತ್ತಿದ್ದ ನಾಲ್ವರು ಯುವಕರು ಪೊಲೀಸರು ನಡೆಸಿದ ದಾಳಿಯಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ಈ ಘಟನೆ ನಗರದ ಕೆಜಿಎನ್ ಬಡಾವಣೆಯಲ್ಲಿ ನಡೆದಿದೆ.

ಮಾಹಿತಿ ಪ್ರಕಾರ, ಕೆಲವರು ಗಾಂಜಾ ಸೇವಿಸಿ ರಸ್ತೆಮಧ್ಯೆ ಅನುಚಿತವಾಗಿ ತೂರಾಡುತ್ತಿದ್ದ ದೃಶ್ಯವನ್ನು ನೋಡಿ ಸಾರ್ವಜನಿಕರಲ್ಲಿ ಅನುಮಾನ ಮೂಡಿದೆ. ತಕ್ಷಣವೇ ಅವರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಖಚಿತ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿದ್ದಾರೆ.

ಈ ದಾಳಿಯಲ್ಲಿ ಚಿಂತಾಮಣಿಯ ಸೈಯದ್ ಮುಜುಯಿಲ್, ಬೆಂಗಳೂರಿನ ಸೈಯದ್ ಅಬ್ದುಲ್ಲಾ, ಸೈಯದ್ ಫಹದ್ ಹಾಗೂ ಇಮ್ರಾನ್ ಪಾಷ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪೊಲೀಸರು ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

error: Content is protected !!