ಹುಕ್ಕೇರಿ ತಾಲ್ಲೂಕಿನಲ್ಲಿ ಪತ್ರಕರ್ತರು ಹಾಗೂ ಪೊಲೀಸರ ಸೋಗಿನಲ್ಲಿ ವ್ಯಕ್ತಿಯೊಬ್ಬರನ್ನು ಬೆದರಿಸಿ ಹಣ ಸುಲಿಗೆ ಮಾಡಿದ ಆರೋಪದಡಿ ನಾಲ್ವರು ಯೂಟ್ಯೂಬರ್‌ಗಳನ್ನು ಹುಕ್ಕೇರಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಭಾರತೀಯ ನ್ಯಾಯ ಸಂಹಿತೆ (BNS) ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಜುಲೈ 18ರಂದು ಕೋಟಭಾಗಿ ಗ್ರಾಮದ ಮಹಿಬೂಬ್ ಬಾಬುಸಾಬ್ ಜಮಾದಾರ್ ಅವರಿಗೆ ಕಾಕತಿ ಮೂಲದ ವ್ಯಕ್ತಿಯೊಬ್ಬ ಗಾಂಜಾ ಚೀಟಗಳನ್ನು ಖರೀದಿಸುವಂತೆ ಒತ್ತಾಯಿಸಿ ಎರಡು ಚೀಟಗಳಿಗೆ ₹1,000 ನೀಡಿದ್ದ. ಸ್ವಲ್ಪ ಸಮಯದ ಬಳಿಕ ಕಾರಿನಲ್ಲಿ ಬಂದ ನಾಲ್ವರು ಆರೋಪಿಗಳು ತಮ್ಮನ್ನು ಪೊಲೀಸ್ ಅಧಿಕಾರಿಗಳೆಂದು ಪರಿಚಯಿಸಿಕೊಂಡು ದೂರುದಾರರನ್ನು ಸಮೀಪದ ಕಬ್ಬಿನ ಗದ್ದೆಗೆ ಕರೆದೊಯ್ದಿದ್ದಾರೆ. ಅಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಆರೋಪ ಹೊರಿಸಿ ಬೆದರಿಕೆ ಹಾಕಿದ್ದು, ಅವರ ಬಳಿಯಿದ್ದ ಗಾಂಜಾ ಪೊಟ್ಟಣಗಳನ್ನು ಪ್ರದರ್ಶಿಸಿ ಫೋಟೋ ಹಾಗೂ ವಿಡಿಯೊ ಚಿತ್ರೀಕರಿಸಿದ್ದಾರೆ. ನಂತರ ದೂರುದಾರರನ್ನು ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಂಡು ಹುಕ್ಕೇರಿ ಪೊಲೀಸ್ ಠಾಣೆ ಸಮೀಪಕ್ಕೆ ಕರೆತಂದು, ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸುವುದಾಗಿ ಬೆದರಿಸಿ ₹2 ಲಕ್ಷದಿಂದ ₹3 ಲಕ್ಷದವರೆಗೆ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಕೊನೆಗೆ ₹60 ಸಾವಿರ ಪಡೆದು, ಚಿತ್ರೀಕರಿಸಿದ ವಿಡಿಯೊವನ್ನು ‘ಜಿ.ಡಿ. ಟಿವಿ’ ಹೆಸರಿನ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಈ ಸಂಬಂಧ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 164/2026 ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು, ಜುಲೈ 24ರಂದು ಬೆಳಗಾವಿಯಲ್ಲಿ ಕಲ್ಲಪ್ಪ ಬಸವಣ್ಣಿ ಮಾಳಾಜ, ಮಲ್ಲಿಕಾರ್ಜುನ ಸಿದ್ದಪ್ಪ ಜುಲಫಿ, ಪೃಥ್ವಿರಾಜ್ ನಾರಾಯಣ ಚೌಹಾಣ್ ಹಾಗೂ ಡೇವಿಡ್ ಜಾಕೋಬ್ ತಂಗೇರಾಳ ಅವರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಮಹಾರಾಷ್ಟ್ರ ನೋಂದಣಿಯ ಮಾರುತಿ ಎರ್ಟಿಗಾ ಕಾರು, ಹೀರೋ ಎಚ್‌ಎಫ್ ಡಿಲಕ್ಸ್ ಬೈಕ್, ಎರಡು ಮೊಬೈಲ್ ಫೋನ್‌ಗಳು ಹಾಗೂ ಸುಲಿಗೆ ಮಾಡಿದ್ದ ₹34 ಸಾವಿರ ನಗದು ವಶಪಡಿಸಿಕೊಳ್ಳಲಾಗಿದೆ. ಬಳಿಕ ಆರೋಪಿಗಳನ್ನು ಹುಕ್ಕೇರಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…
ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…
ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…
ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…
ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…
ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…