Categories: CrimeLatest

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 15.45 ಕೋಟಿ ದೋಚಿದ ವಂಚಕರು: ಉದ್ಯಮಿಗೆ ಸಿಬಿಐ ಹೆಸರಿನಲ್ಲಿ ಬಲೆ

ರಾಜ್ಯದಲ್ಲಿ ದಿನೇ ದಿನೇ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಇದೀಗ ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಉದ್ಯಮಿಯೊಬ್ಬರನ್ನು ಭಯಭೀತಿಗೊಳಿಸಿ 15 ಕೋಟಿ 45 ಲಕ್ಷ ರೂಪಾಯಿ ದೋಚಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಸೈಬರ್ ಕಮಾಂಡ್ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಹೈದರಾಬಾದ್ ಮೂಲದ ವೆಂಕಟೇಶ್ ಶರತ್ ನಾಯಕ್ ಮತ್ತು ಡೆವಗತ್ ಶ್ರೀಪಾದ್ ನಾಯಕ್ ಎಂದು ಗುರುತಿಸಲಾಗಿದೆ.

ಬೆಳಗಾವಿ ಮೂಲದ ಉದ್ಯಮಿ ಅಜಿತ್ ಗೋಪಾಲಕೃಷ್ಣ ಅವರಿಗೆ ಫೆಬ್ರವರಿ 7 ರಂದು ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿತ್ತು. ಕರೆ ಮಾಡಿದ ವ್ಯಕ್ತಿ ತನ್ನನ್ನು ಸಿಬಿಐ ನಿರ್ದೇಶಕ ಎಂದು ಪರಿಚಯಿಸಿಕೊಂಡು, “ನಿಮ್ಮ ಹೆಸರಿನಲ್ಲಿರುವ ಸಿಮ್ ಕಾರ್ಡ್‌ಗಳು ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸಿಲುಕಿಕೊಂಡಿವೆ. ನಿಮ್ಮ ಖಾತೆಯಿಂದ 25 ಲಕ್ಷ ರೂ. ವರ್ಗಾವಣೆ ಆಗಿದ್ದು, ಅದರಲ್ಲಿ 5 ಲಕ್ಷ ರೂ. ಕಮಿಷನ್ ಪಡೆದಿದ್ದೀರಿ” ಎಂದು ಬೆದರಿಕೆ ಹಾಕಿದ್ದಾನೆ.

ಈ ಮೂಲಕ ಉದ್ಯಮಿಯನ್ನು ಮಾನಸಿಕವಾಗಿ ಒತ್ತಡಕ್ಕೆ ಒಳಪಡಿಸಿದ ವಂಚಕರು, ವಿಡಿಯೋ ಕಾಲ್ ಮೂಲಕ ಸುಮಾರು 30 ದಿನಗಳ ಕಾಲ ನಿರಂತರವಾಗಿ ಕಣ್ಗಾವಲಿನಲ್ಲಿ ಇಟ್ಟು ‘ಡಿಜಿಟಲ್ ಅರೆಸ್ಟ್’ ನಡೆಸಿದ್ದಾರೆ. ತನಿಖೆಗೆ ಸಹಕರಿಸದಿದ್ದರೆ ಜೈಲಿಗೆ ಹಾಕುವುದಾಗಿ ಬೆದರಿಸಿ, ಫೆಬ್ರವರಿ 9 ರಂದು ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು 15.45 ಕೋಟಿ ರೂಪಾಯಿಗಳನ್ನು RTGS ಮೂಲಕ ವರ್ಗಾಯಿಸಿಕೊಂಡಿದ್ದಾರೆ.

ವಂಚನೆಗೆ ಒಳಗಾದ ಬಳಿಕ ಅಜಿತ್ ಗೋಪಾಲಕೃಷ್ಣ ಅವರು ಬೆಳಗಾವಿ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ. ಸೈಬರ್ ಕಮಾಂಡ್ ಡಿಜಿಪಿ ಪ್ರಣವ್ ಮೋಹಂತಿ ಅವರ ಮಾರ್ಗದರ್ಶನದಲ್ಲಿ ತನಿಖೆ ನಡೆಸಿದ ಸಿಸಿಬಿಯ ಸೈಬರ್ ವಿಭಾಗದ ತಂಡ, ಆರೋಪಿಗಳು ಬಳಸಿದ್ದ 10ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳನ್ನು ಪತ್ತೆಹಚ್ಚಿದೆ.

ತನಿಖೆಯ ಭಾಗವಾಗಿ ಹೈದರಾಬಾದ್‌ನ ಗಚ್ಚಿಬೌಲಿ ಪ್ರದೇಶದ ಹಾಸ್ಟೆಲ್‌ನಲ್ಲಿ ಅಡಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಸುಮಾರು 2 ಕೋಟಿ ರೂಪಾಯಿ ಹಣವನ್ನು ಫ್ರೀಜ್ ಮಾಡಲಾಗಿದೆ. ಈ ಪ್ರಕರಣದ ಮುಖ್ಯ ಆರೋಪಿ ಸದ್ಯ ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

ಈ ಘಟನೆ, ಸೈಬರ್ ವಂಚಕರು ಹೊಸ ಹೊಸ ವಿಧಾನಗಳನ್ನು ಬಳಸಿ ಸಾಮಾನ್ಯ ಜನರಿಂದ ಹಿಡಿದು ಉದ್ಯಮಿಗಳವರೆಗೆ ಹೇಗೆ ಮೋಸ ಮಾಡುತ್ತಿದ್ದಾರೆ ಎಂಬುದಕ್ಕೆ ಮತ್ತೊಂದು ಸ್ಪಷ್ಟ ಉದಾಹರಣೆಯಾಗಿದೆ.

ಭ್ರಷ್ಟರ ಬೇಟೆ

Recent Posts

ಭೀಕರ ರಸ್ತೆ ಅಪಘಾತ: BMW ಕಾರಿನ ಮೇಲೆ ಲಾರಿ ಪಲ್ಟಿ, ಹೈಕೋರ್ಟ್ ವಕೀಲರ ದುರ್ಮರಣ

ಆಂಧ್ರಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹಿರಿಯ ಹೈಕೋರ್ಟ್ ವಕೀಲರು ದಾರುಣವಾಗಿ ಮೃತಪಟ್ಟಿದ್ದಾರೆ. ಸಿಮೆಂಟ್ ತುಂಬಿದ ಟ್ಯಾಂಕರ್…

1 hour ago

ಕೆಲವೇ ದಿನಗಳಲ್ಲಿ ಸಾಯುತ್ತಿದ್ದೇನೆ, ನಿನ್ನ ಬೆತ್ತಲೆ ನೋಡಬೇಕು ಎಂದು ನಂಬಿಸಿ ವಿಡಿಯೋ ಪಡೆದು ಶಿಕ್ಷಕಿಗೆ ಟಾರ್ಚರ್..!

ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿಯಲ್ಲಿ ಶಿಕ್ಷಕಿಯೊಬ್ಬರನ್ನು ಸಾಮಾಜಿಕ ಜಾಲತಾಣದ ಮೂಲಕ ಮೋಸಗೊಳಿಸಿ ಬ್ಲ್ಯಾಕ್‌ಮೇಲ್ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಆರೋಪಿಯೊಬ್ಬನು ಇನ್‌ಸ್ಟಾಗ್ರಾಂ…

2 hours ago

2 ಲಕ್ಷ ಲಂಚ ಬೇಡಿಕೆ: ಸಿರವಾರ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ

ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸುರೇಶ್ ಶೆಟ್ಟಿ, ಖಾತಾ ಮ್ಯೂಟೇಶನ್‌ಗೆ ಲಂಚ ಬೇಡಿಕೆ ಇಟ್ಟ ಆರೋಪದಡಿ ಲೋಕಾಯುಕ್ತರ…

2 hours ago

15 ನಿಮಿಷದಲ್ಲಿ ಕಾಣೆಯಾದವಳು,1500 ಅಡಿ ಆಳದಲ್ಲಿ ಪತ್ತೆ: ಶ್ರೀನಂದಾ ಸಾವು ಹೇಗಾಯ್ತು?

ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸಕ್ಕೆ ಬಂದಿದ್ದ ಕೇರಳ ಮೂಲದ 15 ವರ್ಷದ ಬಾಲಕಿ ಶ್ರೀನಂದಾ ನಿಗೂಢವಾಗಿ ನಾಪತ್ತೆಯಾಗಿದ್ದ ಘಟನೆ…

4 hours ago

ತಡರಾತ್ರಿ ಭೀಕರ ಅಪಘಾತ: ಸಹ ಕಲಾವಿದ ಹರೀಶ್ ಸ್ಥಳದಲ್ಲೇ ಸಾವು

ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಆನೆಕಾಡು ಅರಣ್ಯ ಪ್ರದೇಶದ ಬಳಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ…

5 hours ago

ವಿಡಿಯೋ ಕಾಲ್ ಮಧ್ಯೆ ಆತ್ಮಹತ್ಯೆ: ಪ್ರೇಮ ವೈಫಲ್ಯದಿಂದ ಯಲಹಂಕದಲ್ಲಿ ಯುವಕನ ದುರ್ಮರಣ

ಪ್ರೀತಿ ಹೆಸರಿನಲ್ಲಿ ವಂಚನೆ ಆರೋಪದ ಹಿನ್ನೆಲೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಯಲಹಂಕ ನ್ಯೂ ಟೌನ್ ಅಟ್ಟೂರು…

5 hours ago