ರಾಜ್ಯದಲ್ಲಿ ದಿನೇ ದಿನೇ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಇದೀಗ ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಉದ್ಯಮಿಯೊಬ್ಬರನ್ನು ಭಯಭೀತಿಗೊಳಿಸಿ 15 ಕೋಟಿ 45 ಲಕ್ಷ ರೂಪಾಯಿ ದೋಚಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಸೈಬರ್ ಕಮಾಂಡ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಹೈದರಾಬಾದ್ ಮೂಲದ ವೆಂಕಟೇಶ್ ಶರತ್ ನಾಯಕ್ ಮತ್ತು ಡೆವಗತ್ ಶ್ರೀಪಾದ್ ನಾಯಕ್ ಎಂದು ಗುರುತಿಸಲಾಗಿದೆ.
ಬೆಳಗಾವಿ ಮೂಲದ ಉದ್ಯಮಿ ಅಜಿತ್ ಗೋಪಾಲಕೃಷ್ಣ ಅವರಿಗೆ ಫೆಬ್ರವರಿ 7 ರಂದು ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿತ್ತು. ಕರೆ ಮಾಡಿದ ವ್ಯಕ್ತಿ ತನ್ನನ್ನು ಸಿಬಿಐ ನಿರ್ದೇಶಕ ಎಂದು ಪರಿಚಯಿಸಿಕೊಂಡು, “ನಿಮ್ಮ ಹೆಸರಿನಲ್ಲಿರುವ ಸಿಮ್ ಕಾರ್ಡ್‌ಗಳು ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸಿಲುಕಿಕೊಂಡಿವೆ. ನಿಮ್ಮ ಖಾತೆಯಿಂದ 25 ಲಕ್ಷ ರೂ. ವರ್ಗಾವಣೆ ಆಗಿದ್ದು, ಅದರಲ್ಲಿ 5 ಲಕ್ಷ ರೂ. ಕಮಿಷನ್ ಪಡೆದಿದ್ದೀರಿ” ಎಂದು ಬೆದರಿಕೆ ಹಾಕಿದ್ದಾನೆ.
ಈ ಮೂಲಕ ಉದ್ಯಮಿಯನ್ನು ಮಾನಸಿಕವಾಗಿ ಒತ್ತಡಕ್ಕೆ ಒಳಪಡಿಸಿದ ವಂಚಕರು, ವಿಡಿಯೋ ಕಾಲ್ ಮೂಲಕ ಸುಮಾರು 30 ದಿನಗಳ ಕಾಲ ನಿರಂತರವಾಗಿ ಕಣ್ಗಾವಲಿನಲ್ಲಿ ಇಟ್ಟು ‘ಡಿಜಿಟಲ್ ಅರೆಸ್ಟ್’ ನಡೆಸಿದ್ದಾರೆ. ತನಿಖೆಗೆ ಸಹಕರಿಸದಿದ್ದರೆ ಜೈಲಿಗೆ ಹಾಕುವುದಾಗಿ ಬೆದರಿಸಿ, ಫೆಬ್ರವರಿ 9 ರಂದು ವಿವಿಧ ಬ್ಯಾಂಕ್ ಖಾತೆಗಳಿಗೆ ಒಟ್ಟು 15.45 ಕೋಟಿ ರೂಪಾಯಿಗಳನ್ನು RTGS ಮೂಲಕ ವರ್ಗಾಯಿಸಿಕೊಂಡಿದ್ದಾರೆ.
ವಂಚನೆಗೆ ಒಳಗಾದ ಬಳಿಕ ಅಜಿತ್ ಗೋಪಾಲಕೃಷ್ಣ ಅವರು ಬೆಳಗಾವಿ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ. ಸೈಬರ್ ಕಮಾಂಡ್ ಡಿಜಿಪಿ ಪ್ರಣವ್ ಮೋಹಂತಿ ಅವರ ಮಾರ್ಗದರ್ಶನದಲ್ಲಿ ತನಿಖೆ ನಡೆಸಿದ ಸಿಸಿಬಿಯ ಸೈಬರ್ ವಿಭಾಗದ ತಂಡ, ಆರೋಪಿಗಳು ಬಳಸಿದ್ದ 10ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳನ್ನು ಪತ್ತೆಹಚ್ಚಿದೆ.
ತನಿಖೆಯ ಭಾಗವಾಗಿ ಹೈದರಾಬಾದ್‌ನ ಗಚ್ಚಿಬೌಲಿ ಪ್ರದೇಶದ ಹಾಸ್ಟೆಲ್‌ನಲ್ಲಿ ಅಡಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಸುಮಾರು 2 ಕೋಟಿ ರೂಪಾಯಿ ಹಣವನ್ನು ಫ್ರೀಜ್ ಮಾಡಲಾಗಿದೆ. ಈ ಪ್ರಕರಣದ ಮುಖ್ಯ ಆರೋಪಿ ಸದ್ಯ ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಈ ಘಟನೆ, ಸೈಬರ್ ವಂಚಕರು ಹೊಸ ಹೊಸ ವಿಧಾನಗಳನ್ನು ಬಳಸಿ ಸಾಮಾನ್ಯ ಜನರಿಂದ ಹಿಡಿದು ಉದ್ಯಮಿಗಳವರೆಗೆ ಹೇಗೆ ಮೋಸ ಮಾಡುತ್ತಿದ್ದಾರೆ ಎಂಬುದಕ್ಕೆ ಮತ್ತೊಂದು ಸ್ಪಷ್ಟ ಉದಾಹರಣೆಯಾಗಿದೆ.
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…