Categories: CrimeLatest

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಜೈಸನ್ ಡಿಸೋಜಾ ಮತ್ತು ಲವೀನಾ ಎಂದು ಗುರುತಿಸಲಾಗಿದೆ. ಇವರು ನಿರುದ್ಯೋಗಿಗಳು ಹಾಗೂ ಖಾಸಗಿ ಕಂಪನಿಗಳಲ್ಲಿ ಕಡಿಮೆ ಸಂಬಳಕ್ಕೆ ಕೆಲಸ ಮಾಡುತ್ತಿದ್ದ ಯುವಕರನ್ನು ಟಾರ್ಗೆಟ್ ಮಾಡಿ, ಕೋರ್ಟ್‌ನಲ್ಲಿ ಡಿ-ಗ್ರೂಪ್ ಹುದ್ದೆ ಕೊಡಿಸುತ್ತೇವೆ ಎಂದು ನಂಬಿಸುತ್ತಿದ್ದರು.

ಈ ಮೂಲಕ ಒಬ್ಬೊಬ್ಬರಿಂದ 10 ಲಕ್ಷದಿಂದ 25 ಲಕ್ಷ ರೂಪಾಯಿವರೆಗೆ ಹಣ ವಸೂಲಿ ಮಾಡುತ್ತಿದ್ದರು. ಹಲವು ಮಂದಿಯಿಂದ ಹಣ ಪಡೆದು ಉದ್ಯೋಗ ನೀಡದೆ ಮೋಸ ಮಾಡಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ.

ಬಸವೇಶ್ವರನಗರ ಸೇರಿದಂತೆ ವಿವಿಧ ಠಾಣೆಗಳಲ್ಲಿ ಆರೋಪಿಗಳ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಪ್ರಾಥಮಿಕ ತನಿಖೆಯ ಪ್ರಕಾರ, 500ಕ್ಕೂ ಹೆಚ್ಚು ಜನರಿಂದ 25 ಕೋಟಿ ರೂಪಾಯಿಗೂ ಅಧಿಕ ಹಣ ದೋಚಿರುವ ಶಂಕೆ ವ್ಯಕ್ತವಾಗಿದೆ.

ಇದೇ ದಂಪತಿ 2024ರಲ್ಲೂ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಹೇಳಿ ವಂಚನೆ ನಡೆಸಿ ಜೈಲು ಸೇರಿದ್ದರು. ಆದರೆ ಜೈಲಿನಿಂದ ಬಿಡುಗಡೆಯಾದ ಬಳಿಕವೂ ತಮ್ಮ ಕೃತ್ಯಗಳನ್ನು ಮುಂದುವರೆಸಿರುವುದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಪ್ರಸ್ತುತ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆ ಮುಂದುವರೆಸಿದ್ದು, ಇನ್ನಷ್ಟು ಮಾಹಿತಿ ಹೊರಬರುವ ಸಾಧ್ಯತೆ ಇದೆ.

ಭ್ರಷ್ಟರ ಬೇಟೆ

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

1 day ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

2 days ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

3 days ago