Crime

ಫ್ರೀ ಫೈರ್ ಗೇಮ್ ವ್ಯಸನ: ಮಾವನಿಂದ 14 ವರ್ಷದ ಬಾಲಕನ ಕತ್ತು ಸೀಳಿ ಹತ್ಯೆ

ಬೆಂಗಳೂರು: ನಗರದ ಕುಂಬಾರಹಳ್ಳಿಯ ವಿನಾಯಕ ಲೇಔಟ್‌ನಲ್ಲಿ ಆನ್‌ಲೈನ್ ಗೇಮ್‌ ಚಟೆಯಿಂದ ಪ್ರೇರಿತವಾಗಿ ನಡೆದ ಭೀಕರ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. 14 ವರ್ಷದ ಅಮೋಘ ಕೀರ್ತಿಯನ್ನು ಅವನ ಸ್ವಂತ ತಾಯಿಯ ಸೋದರ, 50 ವರ್ಷದ ನಾಗಪ್ರಸಾದ್‌ ಕತ್ತು ಸೀಳಿ ಕೊಲೆ ಮಾಡಿದ ಆರೋಪದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಶಿಲ್ಪಾ ಎಂಬ ಮಹಿಳೆಯ ಮಗನಾದ ಅಮೋಘ ಕೀರ್ತಿ ಕಳೆದ ಎಂಟು ತಿಂಗಳಿಂದ ತನ್ನ ಸೋದರ ಮಾವ ನಾಗಪ್ರಸಾದ್ ಜೊತೆಯಲ್ಲೇ ವಾಸಿಸುತ್ತಿದ್ದ. ಈ ಅವಧಿಯಲ್ಲಿ ಬಾಲಕ ‘ಫ್ರೀ ಫೈರ್’ ಆನ್‌ಲೈನ್ ಗೇಮ್‌ಗೆ ಅತಿಯಾಗಿ ಆಕರ್ಷಿತನಾಗಿದ್ದು, ಹಣಕ್ಕಾಗಿ ನಿರಂತರವಾಗಿ ಮಾವನನ್ನು ಒತ್ತಾಯಿಸುತ್ತಿದ್ದ. ಸದಾ ಗೇಮ್‌ ಆಡುವುದು ಮತ್ತು ಹಣ ವ್ಯಯಿಸುವುದರಿಂದ ಬೇಸತ್ತ ನಾಗಪ್ರಸಾದ್ ಕೊನೆಗೂ ಹೀನ ಕೃತ್ಯಕ್ಕೆ ಮುಂದಾಗಿದ್ದಾನೆ.

ಆಗಸ್ಟ್ 4ರ ಬೆಳಗಿನ ಜಾವ ಸುಮಾರು 4.30ಕ್ಕೆ, ನಾಗಪ್ರಸಾದ್ ಬಾಲಕನ ಕತ್ತು ಸೀಳಿ ಹತ್ಯೆಗೈದಿದ್ದಾನೆ. ಬಳಿಕ ಆತ್ಮಹತ್ಯೆ ಮಾಡಲು ಕೆರೆಗೆ ಹಾರಿ ಜೀವ ಕೊನೆಗಾಣಿಸಲು ಯತ್ನಿಸಿದರೂ, ಧೈರ್ಯ ಕಳೆದು ಪರಾರಿಯಾಗಿದ್ದಾನೆ. ಅಮೋಘನ ಶವ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗುತ್ತಿದ್ದಂತೆಯೇ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.

ಹಣವಿಲ್ಲದೆ ಯಾವುದೇ ಕಡೆ ಹೋಗಲಾಗದೇ, ನಾಗಪ್ರಸಾದ್ ಮೆಜೆಸ್ಟಿಕ್ ಬಸ್ ನಿಲ್ದಾಣದ ಸುತ್ತಮುತ್ತ ಮೂರು ದಿನ ತಂಗಿದ್ದ. ನಂತರ, ಆಗಸ್ಟ್ 7ರಂದು ಸ್ವಯಂ ಪೊಲೀಸ್ ಠಾಣೆಗೆ ಹಾಜರಾಗಿ, ತಾನೇ ಸೋದರಳಿಯನನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ.

ಪೊಲೀಸರು ನಾಗಪ್ರಸಾದ್ ವಿರುದ್ಧ ಎಫ್‌ಐಆರ್ ದಾಖಲಿಸಿ, ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಪ್ರಕರಣದಿಂದ ಆನ್‌ಲೈನ್ ಗೇಮ್‌ಗಳ ಮೇಲೆ ಕೌಮಾರ ವಯಸ್ಸಿನ ಮಕ್ಕಳಲ್ಲಿ ಉಂಟಾಗುತ್ತಿರುವ ನಕಾರಾತ್ಮಕ ಪರಿಣಾಮಗಳ ಬಗ್ಗೆ ಮತ್ತೆ ಚರ್ಚೆ ಶುರುವಾಗಿದೆ.

nazeer ahamad

Recent Posts

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

1 month ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

1 month ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

3 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

3 months ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

3 months ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

3 months ago