Categories: CrimeLatest

ಪಾರ್ಟಿ ವಿಚಾರಕ್ಕೆ ಸ್ನೇಹಿತನ ಹತ್ಯೆ: ಬೈಲಹೊಂಗಲದಲ್ಲಿ ಬೆಚ್ಚಿಬೀಳಿಸಿದ ಘಟನೆ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಣ್ಣೂರ ಗ್ರಾಮದಲ್ಲಿ ಪಾರ್ಟಿ ವಿಚಾರವಾಗಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಬೆಳಕಿಗೆ ಬಂದಿದೆ. ಹನುಮಂತಪ್ಪ ಇಟಗಿ ಹತ್ಯೆಯಾದ ವ್ಯಕ್ತಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಸ್ನೇಹಿತ ವಿಶ್ವನಾಥ್ ವಿರುದ್ಧ ಆರೋಪ ಕೇಳಿಬಂದಿದೆ.

ಹನುಮಂತಪ್ಪ ಊರಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡು ವಯಸ್ಸಾದ ತಂದೆ-ತಾಯಿಯನ್ನು ನೋಡಿಕೊಳ್ಳುತ್ತಿದ್ದನು. ವಿಶ್ವನಾಥ್ ಹಾಗೂ ಹನುಮಂತಪ್ಪ ಇಬ್ಬರೂ ಒಂದೇ ಗ್ರಾಮದವರಾಗಿದ್ದು, ಆಪ್ತ ಸ್ನೇಹಿತರಾಗಿದ್ದರು.

ಐದು ತಿಂಗಳ ಹಿಂದೆ ವಿಶ್ವನಾಥ್‌ಗೆ ಗಂಡು ಮಗು ಹುಟ್ಟಿತ್ತು. ಇದೇ ಖುಷಿಗೆ ಪಾರ್ಟಿ ಕೊಡಿಸುವಂತೆ ಹನುಮಂತಪ್ಪ ಹಲವು ಬಾರಿ ಕೇಳುತ್ತಿದ್ದನು ಎನ್ನಲಾಗಿದೆ. ಬಳಿಕ ವಿಶ್ವನಾಥ್ ಹೊಸ ಬೈಕ್ ಖರೀದಿಸಿದ ಸಂದರ್ಭದಲ್ಲೂ ಪಾರ್ಟಿ ವಿಚಾರ ಪ್ರಸ್ತಾಪಿಸಿ ಸ್ನೇಹಿತರ ಎದುರಲ್ಲೇ ಹನುಮಂತಪ್ಪ ಗೇಲಿ ಮಾಡುತ್ತಿದ್ದನೆಂದು ತಿಳಿದುಬಂದಿದೆ.

ಎರಡು ದಿನಗಳ ಹಿಂದೆ ಗ್ರಾಮದಲ್ಲಿ ಮೋಹರಂ ಹಬ್ಬದ ಸಂಭ್ರಮ ನಡೆಯುತ್ತಿದ್ದ ವೇಳೆ ಮತ್ತೆ ಪಾರ್ಟಿ ವಿಚಾರವಾಗಿ ಮಾತುಕತೆ ಆರಂಭವಾಗಿದೆ. ಮಾತಿಗೆ ಮಾತು ಬೆಳೆದು ಇಬ್ಬರ ನಡುವೆ ಜಗಳ ನಡೆದಿದೆ. ಈ ವೇಳೆ ಹನುಮಂತಪ್ಪನ ಕೈ ವಿಶ್ವನಾಥ್ ಕಣ್ಣಿಗೆ ತಾಗಿದ್ದರಿಂದ ಆತ ಕೋಪಗೊಂಡಿದ್ದಾನೆ ಎನ್ನಲಾಗಿದೆ.

ಕೋಪದ ಭರದಲ್ಲಿ ವಿಶ್ವನಾಥ್ ಹನುಮಂತಪ್ಪನನ್ನು ನೆಲಕ್ಕುರುಳಿಸಿ ಹಲ್ಲೆ ನಡೆಸಿದ್ದಾನೆ. ಬಳಿಕ ಅಲ್ಲೇ ಇದ್ದ ಕಲ್ಲಿನಿಂದ ತಲೆಗೆ ಹೊಡೆದ ಪರಿಣಾಮ ಹನುಮಂತಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

25 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಗುಜರಾತ್‌ನಲ್ಲಿ ಬಂಧನ

ಯಲ್ಲಾಪುರ: 2001ರಲ್ಲಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು…

14 hours ago

ನೈಸ್ ಯೋಜನೆ ಮತ್ತೆ ಕಾವೇರಿದ ವಿವಾದ: ಸರ್ಕಾರದ ವಶಕ್ಕೆ ಪಡೆಯಲು ಜೆಡಿಎಸ್ ಒತ್ತಾಯ

ಬೆಂಗಳೂರು–ಮೈಸೂರು ಸಂಪರ್ಕವನ್ನು ಸುಧಾರಿಸುವುದು ಹಾಗೂ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ರೂಪುಗೊಂಡಿದ್ದ ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (BMICP)…

15 hours ago

ಲೀಲಾ ದೂರವಾದ ಕೋಪ: ಮನೆಗೆ ನುಗ್ಗಿ ತಾಯಿಯ ಮೇಲೆ ಸೈಕಲ್ ಎತ್ತಿ ಹಾಕಿದ ಮಂಜ!

ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…

2 days ago

ಮದುವೆಯ ಆಸೆ ತೋರಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ, ₹10 ಸಾವಿರ ಕಳುಹಿಸಿ ಕೈ ತೊಳೆದುಕೊಳ್ಳಲು ಮುಂದಾದ SI ವಿರುದ್ಧ ಕೇಸ್!

ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…

2 days ago

ಪ್ರೀತಿಯ ಹೆಸರಲ್ಲಿ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ: ಯುವತಿ ಆತ್ಮಹತ್ಯೆ; ಪ್ರಿಯಕರನ ವಿರುದ್ಧ ಕೇಸ್

ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…

2 days ago

ಪತಿ-ಪ್ರೇಮಿ ಇಬ್ಬರ ಜತೆಗೂ ಸಂಸಾರಕ್ಕೆ ಅನುಮತಿ ಕೊಡಿ! ಪೊಲೀಸರ ಮುಂದೆ ಮಹಿಳೆಯ ವಿಚಿತ್ರ ಬೇಡಿಕೆ

ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…

2 days ago