ಗದಗ: ಹೊರಗುತ್ತಿಗೆ ಆಧಾರದ ಉದ್ಯೋಗ ನೀಡುವ ನೆಪದಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಗದಗ ಜಿಲ್ಲೆಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ರಫೀಕಾ ಹಳ್ಳೂರು ಹಾಗೂ ಅವರ ಕಾರು ಚಾಲಕ ಮೌಲಾನಾ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ಮಾಹಿತಿಯ ಪ್ರಕಾರ, ಬಾಲ ಮಂದಿರದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಂಪ್ಯೂಟರ್ ಆಪರೇಟರ್ ಹುದ್ದೆಗೆ ನೇಮಕ ಮಾಡುವ ಸಂಬಂಧ ಅರ್ಜಿದಾರರಿಂದ ಆರಂಭದಲ್ಲಿ ₹30 ಸಾವಿರ ಲಂಚಕ್ಕೆ ಬೇಡಿಕೆ ಇಡಲಾಗಿತ್ತು. ಬಳಿಕ ಮಾತುಕತೆಯ ಮೂಲಕ ₹15 ಸಾವಿರಕ್ಕೆ ಒಪ್ಪಂದವಾಗಿತ್ತು ಎನ್ನಲಾಗಿದೆ.
ಬೆಟಗೇರಿಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತಾಲೂಕು ಕಚೇರಿಯಲ್ಲಿ ಕಾರು ಚಾಲಕ ಮೌಲಾನಾ ಮೂಲಕ ₹15 ಸಾವಿರ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದರು. ದಾಳಿಯ ಬಳಿಕ ಗದಗ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಸಂಬಂಧಿತ ಕಚೇರಿಗಳಲ್ಲಿ ದಾಖಲೆಗಳ ಪರಿಶೀಲನೆಯನ್ನೂ ಅಧಿಕಾರಿಗಳು ನಡೆಸಿದರು.
ಲೋಕಾಯುಕ್ತ ಎಸ್‌ಪಿ ಟಿ. ಸಿದ್ಧಲಿಂಗಪ್ಪ ಅವರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಲೋಕೇಶ್, ಇನ್ಸ್‌ಪೆಕ್ಟರ್ ಪರಮೇಶ್ವರ ಕವಟಗಿ, ಎಸ್.ಎಸ್. ತೇಲಿ ಹಾಗೂ ತಂಡ ಈ ಕಾರ್ಯಾಚರಣೆ ನಡೆಸಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ರಫೀಕಾ ಹಳ್ಳೂರು ಮತ್ತು ಕಾರು ಚಾಲಕ ಮೌಲಾನಾ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಗದಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಂಚ ಪ್ರಕರಣದ ತನಿಖೆ ಮುಂದುವರಿದಿದ್ದು, ವಶಪಡಿಸಿಕೊಂಡ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.
ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…
ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…
ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…
ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…
ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…
ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…