ರಾಣೆಬೆನ್ನೂರು ತಾಲೂಕು ಮಾಕನೂರು ಗ್ರಾಮದ ಸಮೀಪದ ಲಾಟೇರ್‌ ಜಮೀನಿನ ಬಳಿ ನಿರ್ಮಾಣದಲ್ಲಿರುವ ಮನೆಯೊಂದರಲ್ಲಿ ನಡೆಯುತ್ತಿದ್ದ ಜೂಜಾಟಕ್ಕೆ ಪೊಲೀಸರು ಸೋಮವಾರ ರಾತ್ರಿ ದಾಳಿ ನಡೆಸಿದ್ದಾರೆ. ಈ ವೇಳೆ ₹1.74 ಲಕ್ಷ ನಗದುವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಅಲ್ಲದೆ, ಜೂಜಾಟದಲ್ಲಿ ತೊಡಗಿದ್ದ 18 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಕುಮಾರಪಟ್ಟಣ ಪೊಲೀಸರು, ಅಕ್ರಮ ಚಟುವಟಿಕೆಗೆ ತೊಡಗಿದ್ದವರನ್ನು ಸ್ಥಳದಲ್ಲೇ ವಶಕ್ಕೆ ಪಡೆದುಕೊಂಡರು. ಈ ದಾಳಿಯನ್ನು ಡಿಎಸ್‌ಪಿ ಲೋಕೇಶ್ ಜೆ ಮತ್ತು ಸಿಪಿಐ ಪ್ರವೀಣ್ ಕುಮಾರ್ ಅವರ ಮಾರ್ಗದರ್ಶನದಲ್ಲಿ, ಪಿಎಸ್‌ಐ ಪ್ರವೀಣ್‌ಕುಮಾರ್ ವಾಲೀಕಾರ ನೇತೃತ್ವದ ತಂಡ ಯಶಸ್ವಿಯಾಗಿ ನಡೆಸಿತು.

ಈ ಸಂಬಂಧ ಕುಮಾರಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ. ಗ್ರಾಮೀಣ ಪ್ರದೇಶದಲ್ಲಿ ಇಂತಹ ಅಕ್ರಮ ಜೂಜಾಟಗಳನ್ನು ನಿಯಂತ್ರಿಸಲು ಪೊಲೀಸರು ಕ್ರಮ ಕೈಗೊಂಡಿದ್ದು, ಸಾರ್ವಜನಿಕರ ಸಹಕಾರವೂ ಅಗತ್ಯವಿದೆ ಎಂಬುದು ಅಧಿಕಾರಿಗಳ ಅಭಿಪ್ರಾಯ.

***

“ಭ್ರಷ್ಟರ ಬೇಟೆ” ಪತ್ರಿಕೆಗೆ ರಾಜ್ಯದ್ಯಂತ ವರದಿಗಾರರು ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 8088070392

Leave a Reply

Your email address will not be published. Required fields are marked *

Related News

error: Content is protected !!