Latest

ಸಾಮೂಹಿಕ ಅತ್ಯಾಚಾರ ಪ್ರಕರಣ: ಜಾಮೀನಿನ ಬಳಿಕ ವಿಜಯೋತ್ಸವ ಮಾಡಿದ ಆರೋಪಿಗಳು ಮತ್ತೆ ಬಂಧನ

ಹಾವೇರಿ, ಮೇ 25: ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕ ವಿಜಯೋತ್ಸವ ನಡೆಸಿದ ಏಳು ಆರೋಪಿಗಳನ್ನು ಹಾನಗಲ್ ಠಾಣೆ ಪೊಲೀಸರು ಮತ್ತೆ ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಶನಿವಾರ ನಡೆದ ವಿಚಾರಣೆಯಲ್ಲಿ ನ್ಯಾಯಾಧೀಶರು ಎಲ್ಲ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದ್ದಾರೆ.

ಗುರುವಾರ ರಾತ್ರಿ ಜೈಲಿನಿಂದ ಬಿಡುಗಡೆಗೊಂಡಿದ್ದ ಈ ಆರೋಪಿಗಳು, ಹಾವೇರಿ ನಗರದಿಂದ ಅಕ್ಕಿಆಲೂರಿನವರೆಗೆ ಕಾರು ಮತ್ತು ಬೈಕ್‌ಗಳಲ್ಲಿ ಶೋಭಾಯಾತ್ರೆ ನಡೆಸಿ ಜಯಗೋಷಗಳೊಂದಿಗೆ ವಿಜಯೋತ್ಸವ ಆಚರಿಸಿದ್ದರು. ಈ ವಿಡಿಯೋಗಳು  ವೈರಲ್ ಆದ ಹಿನ್ನೆಲೆಯಲ್ಲಿ, ಸಾರ್ವಜನಿಕ ಆಕ್ರೋಶ ಹೆಚ್ಚಾಗಿತ್ತು.

ಹಾನಗಲ್ ಠಾಣೆಯ ಉಪನಿರೀಕ್ಷಕ ದೀಪಾಲಿ ಗುಡೋಡಗಿ ಅವರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿ, ಆರೋಪಿಗಳನ್ನು ಬಂಧಿಸಲು ವಿಶೇಷ ತಂಡವನ್ನು ರಚಿಸಿದರು. ಬಂಧಿತ ಆರೋಪಿಗಳು ಹಾನಗಲ್ ತಾಲ್ಲೂಕಿನ ಅಕ್ಕಿಆಲೂರಿನ ಸಮೀವುಲ್ಲಾ ಅಬ್ದುಲ್‌ವಾಹೀದ್ ಲಾಲಾನವರ (28), ಇಮಾಮನಗರದ ಮಹ್ಮದಸಾದಿಕ್ ಬಾಬುಸಾಬ ಅಗಸಿಮನಿ (30), ಹಳ್ಳೂರದ ಶೋಹಿಬ ನಿಯಜಅಹ್ಮದ್ ಮುಲ್ಲಾ ಎಂಬ ಶೋಯಬ್ (20), ಹಾಗೂ ಇಸ್ಲಾಂಪುರದ ರಿಯಾಜ್ ಅಬ್ದುಲ್‌ರಫೀಕ್ ಸಾವಿಕೇರಿ (32) ಆಗಿದ್ದಾರೆ.

ಇನ್ನೂ ತನಿಖೆಯಿಂದ ದೂರವಿದ್ದ ಮೂವರು ಆರೋಪಿಗಳಾದ ಅಪ್ತಾಬ ಮಖಬೂಲಅಹ್ಮದ್ ಚಂದನಕಟ್ಟಿ, ಮದರಸಾಬ್ ಮಹ್ಮದಸಾದಿಕ್ ಮಂಡಕ್ಕಿ ಮತ್ತು ತೌಸೀಪ್ ಖಾಸಿಂಸಾಬ ಚೌಟಿ ಅವರನ್ನು ಶಿರಾಳಕೊಪ್ಪದಲ್ಲಿ ಶನಿವಾರ ಬಂಧಿಸಲಾಗಿದೆ.

ಪೊಲೀಸರ ಈ ಕ್ರಮಕ್ಕೆ ಸಾರ್ವಜನಿಕರಿಂದ ತೀವ್ರ ಮೆಚ್ಚುಗೆ ವ್ಯಕ್ತವಾಗಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತಿದ್ದಾರೆ

nazeer ahamad

Recent Posts

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

2 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

2 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

2 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

2 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

3 hours ago

ಗೌರಿಬಿದನೂರಿನಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ಬಳಕೆ ವಿರುದ್ಧ ದಾಳಿ – 36 ಸಿಲಿಂಡರ್‌ಗಳು ಜಪ್ತಿ

ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…

3 hours ago