Latest

ಆಸ್ತಿ ವೈಷಮ್ಯ; ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ- ಗುಪ್ತಾಂಗಕ್ಕೆ ರಾಡ್‌!

ಐವರು ಸೇರಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.
‘ಘಟನೆ ನಡೆಯುವುದಕ್ಕೂ ಒಂದು ದಿನ ಮೊದಲು ನಾನು ನನ್ನ ಸಹೋದರನ ಹುಟ್ಟುಹಬ್ಬದ ಆಚರಣೆಗಾಗಿ ಗುರುಗ್ರಾಮಕ್ಕೆ ಹೋಗಿದ್ದೆ.  ಆಚರಣೆ ಮುಗಿದ ಮೇಲೆ, ಬಸ್‌ ನಿಲ್ದಾಣದ ವರೆಗೂ ನನ್ನ ಸಹೋದರ ಬಿಟ್ಟು ಹೋದ. ಅಲ್ಲಿಂದ ನನಗೆ ಗೊತ್ತಿರುವವರೇ ಎಲ್ಲಿಗೋ ಕರೆದುಕೊಂಡು ಹೋದರು’ ಎಂದು ಸಂತ್ರಸ್ತ ಮಹಿಳೆಯು ಹೇಳಿಕೆ ನೀಡಿದ್ದಾರೆ ಎಂದು ನಿಪುನ್‌ ಅಗರ್ವಾಲ್‌ ತಿಳಿಸಿದರು.

‘ಮಹಿಳೆಯೊಬ್ಬರು ಆಶ್ರಮ್‌ ರಸ್ತೆಯಲ್ಲಿ ಅನಾಥವಾಗಿ ಬಿದ್ದಿದ್ದಾರೆ ಎಂದು ನಂದ್‌ಗ್ರಾಮ್‌ ಠಾಣೆಯ ತುರ್ತು ಸಂಖ್ಯೆಗೆ ಮಂಗಳವಾರ (ಅ.18) ಬೆಳಿಗ್ಗೆ 3.30ರ ಸುಮಾರಿಗೆ ಕರೆ ಬಂತು. ನಂತರ ಮಹಿಳೆಯನ್ನು ಗುರು ತೇಜ್‌ ಬಹದ್ದೂರ್ ಆಸ್ಪತ್ರೆಗೆ ದಾಖಲಿಸಿದ್ದೇವೆ’ ಎಂದು ಗಾಜಿಯಬಾದ್‌ನ ಪೊಲೀಸ್‌ ವರಿಷ್ಠಾಧಿಕಾರಿ ನಿಪುನ್‌ ಅಗರ್ವಾಲ್‌ ಮಾಹಿತಿ ನೀಡಿದರು.

‘ಈ ವೇಳೆ ಸರ್ಕಾರಿ ಆಸ್ಪತ್ರೆಗೆ ಬೇಡ, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಎಂದು ಸಂತ್ರಸ್ತ ಮಹಿಳೆಯು ಹೇಳಿದ್ದರಿಂದ ಗುರು ತೇಜ್‌ ಆಸ್ಪತ್ರೆಗೆ ದಾಖಲಿಸಲಾಯಿತು’ ಎಂದರು.
ಐವರಲ್ಲಿ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಬುಧವಾರ ಹೇಳಿದರು.

‘ಮಹಿಳೆಯ ಕೈ-ಕಾಲುಗಳನ್ನು ಕಟ್ಟಿ, ಆಕೆಯ ಗುಪ್ತಾಂಗಕ್ಕೆ ಕಬ್ಬಿಣದ ರಾಡನ್ನು ತುರುಕಿ, ಆಕೆಯನ್ನು ಗೋಣಿಚೀಲದಲ್ಲಿ ಸುತ್ತಿದ ಸ್ಥಿತಿಯಲ್ಲಿ ಮಹಿಳೆ ಪತ್ತೆಯಾಗಿದ್ದಾರೆ’ ಎಂದು ದೆಹಲಿ ಮಹಿಳಾ ಆಯೋಗ ಆರೋಪಿಸಿದೆ. ಘಟನೆಯನ್ನು ಆಯೋಗ ಖಂಡಿಸಿದೆ. ಈ ಸಂಬಂಧ ಗಾಜಿಯಬಾದ್‌ ಪೊಲೀಸರಿಗೆ ಆಯೋಗದ ಮುಖ್ಯಸ್ಥೆ ಸ್ವಾತಿ ಮಾಲೀವಾಲ್‌ ನೋಟಿಸ್‌ ನೀಡಿದ್ದಾರೆ.

‘ಅ.16 (ಭಾನುವಾರ) ತನ್ನ ಸಹೋದರನ ಹುಟ್ಟುಹಬ್ಬದ ಆಚರಣೆಗೆ ತೆರಳಲು ಗಾಜಿಯಬಾದ್‌ನಲ್ಲಿ ಆಟೊರಿಕ್ಷಾಗಾಗಿ ಮಹಿಳೆ ಕಾಯುತ್ತಿದ್ದರು. ಈ ವೇಳೆ ಎಸ್‌ಯವಿಯಲ್ಲಿ ಬಂದ ನಾಲ್ವರು ಆರೋಪಿಗಳು, ಆಕೆಯನ್ನು ಅಪಹರಿಸಿದ್ದಾರೆ. ಈ ನಾಲ್ವರು ಮತ್ತೊಬ್ಬ ವ್ಯಕ್ತಿಯೊಂದಿಗೆ ಸೇರಿ ಎರಡು ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ’ ಎಂದು ಮಹಿಳಾ ಆಯೋಗವು ಗಂಭೀರ ಆರೋಪ ಮಾಡಿದೆ.

‘ಮಹಿಳೆಯನ್ನು ದೆಹಲಿಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಕೆಯ ಸ್ಥಿತಿ ಗಂಭೀರವಾಗಿದೆ’ ಎಂದು ದೆಹಲಿ ಮಹಿಳಾ ಆಯೋಗ ಹೇಳಿದೆ. ಆದರೆ, ‘ಮಂಗಳವಾರ ಬೆಳಿಗ್ಗೆ ಮಹಿಳೆಯನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಮಹಿಳೆ ಸ್ಥಿತಿ ಸ್ಥಿರವಾಗಿದೆ. ಆಕೆಗೆ ಯಾವುದೇ ರೀತಿ ಆಂತರಿಕ ಗಾಯಗಳಾಗಿರುವುದು ಕಂಡುಬಂದಿಲ್ಲ’ ಎಂದು ಗುರು ತೇಜ್‌ ಬಹದ್ದೂರ್‌ ಆಸ್ಪತ್ರೆಯಮಾಧ್ಯಮ ವಕ್ತಾರ ಡಾ. ರಜತ್‌ ಜಾಂಬಾ ತಿಳಿಸಿದ್ದಾರೆ.

ಆದರೆ, ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಆಗಿರುವ ಕುರುಹುಗಳಿವೆ. ಜೊತೆಗೆ ಆಕೆಯ ದೇಹದೊಳಗೆ ವಸ್ತುವೊಂದು ಪತ್ತೆಯಾಗಿದೆ ಎಂದು ಆಸ್ಪತ್ರೆಯ ಮೂಲಗಳು ಹೇಳಿವೆ.

ಭ್ರಷ್ಟರ ಬೇಟೆ

Recent Posts

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

3 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

7 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

1 day ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

1 day ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

1 day ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

1 day ago