ಬೆಳಗಾವಿ, ಜನವರಿ 15: ರಾಯಬಾಗ ತಾಲ್ಲೂಕಿನ ಸವಸುದ್ದಿ ಗ್ರಾಮದ ಸಮೀಪದಲ್ಲಿ ಗ್ಯಾಂಗ್ ರೇಪ್ ಪ್ರಕರಣವು ನಡೆಯಿದ್ದು, ಮೂವರು ಆರೋಪಿಗಳು ಬಂಧಿತನಾಗಿದ್ದಾರೆ. ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರವೆಸಗಿದ ಆರೋಪಿಗಳು ಅಭಿಷೇಕ್, ಆದಿಲ್ ಜಮಾದಾರ್ ಮತ್ತು ಚಾಲಕ ಕೌತುಕ್ ಬಡಿಗೇರ ಎಂದು ಗುರುತಿಸಲಾಗಿದೆ.
ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ್ ಗುಳೇದ್ ಮಾಹಿತಿ ನೀಡಿದ್ದು, "ಆರೋಪಿ ಅಭಿಷೇಕ್ ಇನ್‌ಸ್ಟಾಗ್ರಾಂನಲ್ಲಿ ಓರ್ವ ಬಾಲಕಿಯನ್ನು ಪರಿಚಯಿಸಿಕೊಂಡಿದ್ದನು. ಅವನು 'ನಾನು ಸವದತ್ತಿಗೆ ಹೋಗುತ್ತಿದ್ದೇನೆ, ನೀನು ಕೂಡ ಬಾ' ಎಂದು ಅವಳನ್ನು ಪ್ರಚೋದಿಸಿದ್ದನು. ನಂಬಿದ ಬಾಲಕಿ ತನ್ನ ಸ್ನೇಹಿತೆಯನ್ನು ಕರೆದುಕೊಂಡು ಹಾರೂಗೇರಿ ಬಸ್ ನಿಲ್ದಾಣಕ್ಕೆ ಹೋಗಿದ್ದಾಳೆ" ಎಂದು ತಿಳಿಸಿದ್ದಾರೆ.
"ಅಲ್ಲಿ, ಆರೋಪಿ ಅಭಿಷೇಕ್, ಕಾರಿನಲ್ಲಿ ಇತರ ಇಬ್ಬರು ಆರೋಪಿಗಳೊಂದಿಗೆ ಸಂತ್ರಸ್ತರನ್ನು ಕರೆದೊಯ್ಯುತ್ತಾನೆ. ಅವರನ್ನು ಎರ್ಟಿಗಾ ಕಾರಿನಲ್ಲಿ ಸವಸುದ್ದಿ ಗ್ರಾಮದ ಗುಡ್ಡಗಾಡು ಪ್ರದೇಶಕ್ಕೆ ತೆಗೆದುಕೊಂಡು ಹೋಗಿ, ಮಧ್ಯಾಹ್ನ 3 ಗಂಟೆ ಸುಮಾರಿಗೆ ಅವರು ಇಬ್ಬರ ಮೇಲೆ ಅತ್ಯಾಚಾರವೆಸಗಿದ್ದಾರೆ" ಎಂದು ಡಾ. ಗುಳೇದ್ ವಿವರಿಸಿದರು.
"ಈ ವೇಳೆ, ಕಾರಿನಲ್ಲಿ ಕುಳಿತಿದ್ದ ಆರೋಪಿ ಆದಿಲ್ ಜಮಾದಾರ್ ಮತ್ತೊಂದು ಬಾಲಕಿಯನ್ನು ಗ್ಯಾಂಗ್ ರೇಪ್ ಮಾಡಿ, ನಂತರ ಅವರು ಸಂತ್ರಸ್ತರಿಗೆ ಬ್ಲ್ಯಾಕ್‌ಮೇಲ್ ಮಾಡಿದರು. 'ಗೋವಾಕ್ಕೆ ಬರಬೇಕು, ಇಲ್ಲವಾದರೆ ವಿಡಿಯೋವನ್ನು ವೈರಲ್ ಮಾಡುತ್ತೇವೆ' ಎಂದು ಬೆದರಿಕೆ ಹಾಕಿದ್ರು" ಎಂದು ಅವರು ತಿಳಿಸಿದರು.
"ಬಾಲಕಿಯರು ಈ ಕುರಿತು ಮನೆಯಲ್ಲಿ ಮಾಹಿತಿ ನೀಡಿದ್ದು, ಜನವರಿ 13 ರಂದು ಹಾರೂಗೇರಿ ಠಾಣೆಯಲ್ಲಿ ದೂರು ದಾಖಲಿಸಿದರು. 24 ಗಂಟೆಗಳೊಳಗೆ ಇಬ್ಬರು ಆರೋಪಿಗಳು ಬಂಧಿತರಾಗಿದ್ದಾರೆ. ನಂತರ ಮತ್ತೊಬ್ಬ ಆರೋಪಿ ಬಂಧಿಸಲ್ಪಟ್ಟನು" ಎಂದು ಅವರು ಹೇಳಿದರು.
"ಆರೋಪಿಗಳ ಹಿನ್ನಲೆಯನ್ನು ಪರಿಶೀಲಿಸಲಾಗುತ್ತಿದೆ. ಇನ್‌ಸ್ಟಾಗ್ರಾಂನಲ್ಲಿ ವೀಡಿಯೋಗಳನ್ನು ಅಪ್ಲೋಡ್ ಮಾಡುತ್ತಿದ್ದಳು. ಆರೋಪಿಗಳ ಮೊಬೈಲ್‌ಗಳನ್ನು ಜಪ್ತಿ ಮಾಡಿದಾಗ, ಗ್ಯಾಂಗ್ ರೇಪ್ ಸಂಬಂಧಿ ವೀಡಿಯೋಗಳು ಪತ್ತೆಯಾಗಿದೆ" ಎಂದು ಅವರು ಕೊನೆಗೆ ತಿಳಿಸಿದ್ದಾರೆ. ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…