ಬೆಳಗಾವಿ, ಜನವರಿ 15: ರಾಯಬಾಗ ತಾಲ್ಲೂಕಿನ ಸವಸುದ್ದಿ ಗ್ರಾಮದ ಸಮೀಪದಲ್ಲಿ ಗ್ಯಾಂಗ್ ರೇಪ್ ಪ್ರಕರಣವು ನಡೆಯಿದ್ದು, ಮೂವರು ಆರೋಪಿಗಳು ಬಂಧಿತನಾಗಿದ್ದಾರೆ. ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರವೆಸಗಿದ ಆರೋಪಿಗಳು ಅಭಿಷೇಕ್, ಆದಿಲ್ ಜಮಾದಾರ್ ಮತ್ತು ಚಾಲಕ ಕೌತುಕ್ ಬಡಿಗೇರ ಎಂದು ಗುರುತಿಸಲಾಗಿದೆ.
ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ್ ಗುಳೇದ್ ಮಾಹಿತಿ ನೀಡಿದ್ದು, "ಆರೋಪಿ ಅಭಿಷೇಕ್ ಇನ್‌ಸ್ಟಾಗ್ರಾಂನಲ್ಲಿ ಓರ್ವ ಬಾಲಕಿಯನ್ನು ಪರಿಚಯಿಸಿಕೊಂಡಿದ್ದನು. ಅವನು 'ನಾನು ಸವದತ್ತಿಗೆ ಹೋಗುತ್ತಿದ್ದೇನೆ, ನೀನು ಕೂಡ ಬಾ' ಎಂದು ಅವಳನ್ನು ಪ್ರಚೋದಿಸಿದ್ದನು. ನಂಬಿದ ಬಾಲಕಿ ತನ್ನ ಸ್ನೇಹಿತೆಯನ್ನು ಕರೆದುಕೊಂಡು ಹಾರೂಗೇರಿ ಬಸ್ ನಿಲ್ದಾಣಕ್ಕೆ ಹೋಗಿದ್ದಾಳೆ" ಎಂದು ತಿಳಿಸಿದ್ದಾರೆ.
"ಅಲ್ಲಿ, ಆರೋಪಿ ಅಭಿಷೇಕ್, ಕಾರಿನಲ್ಲಿ ಇತರ ಇಬ್ಬರು ಆರೋಪಿಗಳೊಂದಿಗೆ ಸಂತ್ರಸ್ತರನ್ನು ಕರೆದೊಯ್ಯುತ್ತಾನೆ. ಅವರನ್ನು ಎರ್ಟಿಗಾ ಕಾರಿನಲ್ಲಿ ಸವಸುದ್ದಿ ಗ್ರಾಮದ ಗುಡ್ಡಗಾಡು ಪ್ರದೇಶಕ್ಕೆ ತೆಗೆದುಕೊಂಡು ಹೋಗಿ, ಮಧ್ಯಾಹ್ನ 3 ಗಂಟೆ ಸುಮಾರಿಗೆ ಅವರು ಇಬ್ಬರ ಮೇಲೆ ಅತ್ಯಾಚಾರವೆಸಗಿದ್ದಾರೆ" ಎಂದು ಡಾ. ಗುಳೇದ್ ವಿವರಿಸಿದರು.
"ಈ ವೇಳೆ, ಕಾರಿನಲ್ಲಿ ಕುಳಿತಿದ್ದ ಆರೋಪಿ ಆದಿಲ್ ಜಮಾದಾರ್ ಮತ್ತೊಂದು ಬಾಲಕಿಯನ್ನು ಗ್ಯಾಂಗ್ ರೇಪ್ ಮಾಡಿ, ನಂತರ ಅವರು ಸಂತ್ರಸ್ತರಿಗೆ ಬ್ಲ್ಯಾಕ್‌ಮೇಲ್ ಮಾಡಿದರು. 'ಗೋವಾಕ್ಕೆ ಬರಬೇಕು, ಇಲ್ಲವಾದರೆ ವಿಡಿಯೋವನ್ನು ವೈರಲ್ ಮಾಡುತ್ತೇವೆ' ಎಂದು ಬೆದರಿಕೆ ಹಾಕಿದ್ರು" ಎಂದು ಅವರು ತಿಳಿಸಿದರು.
"ಬಾಲಕಿಯರು ಈ ಕುರಿತು ಮನೆಯಲ್ಲಿ ಮಾಹಿತಿ ನೀಡಿದ್ದು, ಜನವರಿ 13 ರಂದು ಹಾರೂಗೇರಿ ಠಾಣೆಯಲ್ಲಿ ದೂರು ದಾಖಲಿಸಿದರು. 24 ಗಂಟೆಗಳೊಳಗೆ ಇಬ್ಬರು ಆರೋಪಿಗಳು ಬಂಧಿತರಾಗಿದ್ದಾರೆ. ನಂತರ ಮತ್ತೊಬ್ಬ ಆರೋಪಿ ಬಂಧಿಸಲ್ಪಟ್ಟನು" ಎಂದು ಅವರು ಹೇಳಿದರು.
"ಆರೋಪಿಗಳ ಹಿನ್ನಲೆಯನ್ನು ಪರಿಶೀಲಿಸಲಾಗುತ್ತಿದೆ. ಇನ್‌ಸ್ಟಾಗ್ರಾಂನಲ್ಲಿ ವೀಡಿಯೋಗಳನ್ನು ಅಪ್ಲೋಡ್ ಮಾಡುತ್ತಿದ್ದಳು. ಆರೋಪಿಗಳ ಮೊಬೈಲ್‌ಗಳನ್ನು ಜಪ್ತಿ ಮಾಡಿದಾಗ, ಗ್ಯಾಂಗ್ ರೇಪ್ ಸಂಬಂಧಿ ವೀಡಿಯೋಗಳು ಪತ್ತೆಯಾಗಿದೆ" ಎಂದು ಅವರು ಕೊನೆಗೆ ತಿಳಿಸಿದ್ದಾರೆ. ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…
ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…