Latest

ತೋಟದ ಮನೆಯಲ್ಲಿ ಗಾಂಜಾ ಸಂಗ್ರಹ: ಅಬಕಾರಿ ಇಲಾಖೆಯ ದಾಳಿ, 4 ಕೆಜಿ ಗಾಂಜಾ ಜಪ್ತಿ

ಚಾಮರಾಜನಗರ: ನಗರ ಪ್ರದೇಶಗಳಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ತೋಟದ ಮನೆಯಲ್ಲಿ ಒಣ ಗಾಂಜಾ ಸಂಗ್ರಹಿಸಿದ್ದ ವ್ಯಕ್ತಿಯನ್ನು ಅಬಕಾರಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪಟಸ್: ಹನೂರು ತಾಲ್ಲೂಕಿನ ಪುಷ್ಪಾಪುರ ಗ್ರಾಮದ ನಿವಾಸಿ ದೇವೇಂದ್ರ (48) ಎಂಬಾತನೇ ಬಂಧಿತ ಆರೋಪಿ.

ಘಟನೆ ವಿವರ:
ಮರಿಯಮಂಗಲ-ಪುಷ್ಪಾಪುರ ಗ್ರಾಮ ಮಧ್ಯದಲ್ಲಿರುವ ತೋಟದ ಮನೆಯಲ್ಲಿ ಗಾಂಜಾ ಸಂಗ್ರಹಣೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಅಬಕಾರಿ ಇಲಾಖೆಗೆ ಲಭ್ಯವಾಯಿತು. ಈ ಮಾಹಿತಿಯ ಮೇರೆಗೆ, ಮೈಸೂರು ವಿಭಾಗದ ಅಬಕಾರಿ ಜಂಟಿ ಆಯುಕ್ತ ಬಸವರಾಜ್ ಹಡಪದ ಹಾಗೂ ಉಪ ಆಯುಕ್ತ ಚಂದ್ರ ಅವರ ಮಾರ್ಗದರ್ಶನದಲ್ಲಿ ದಾಳಿ ನಡೆಸಲು ತೀರ್ಮಾನಿಸಲಾಯಿತು.

ಕೊಳ್ಳೇಗಾಲ ಅಬಕಾರಿ ನಿರೀಕ್ಷಕ ದಯಾನಂದ್ ಅವರ ನೇತೃತ್ವದಲ್ಲಿ ಉಪ ಅಧೀಕ್ಷಕ ವಿಜಯಕುಮಾರ್ ಅವರ ನಿರ್ದೇಶನದಂತೆ ಸಬ್ ಇನ್ಸ್‌ಪೆಕ್ಟರ್ ಸಿದ್ದಯ್ಯ ಹಾಗೂ ಅವರ ತಂಡ ಕಾರ್ಯಾಚರಣೆ ನಡೆಸಿದರು. ಈ ದಾಳಿಯಲ್ಲಿ ನಾಲ್ಕು ಕೆಜಿ ಒಣ ಗಾಂಜಾ ವಶಪಡಿಸಿಕೊಂಡು ಆರೋಪಿ ದೇವೇಂದ್ರನನ್ನು ಬಂಧಿಸಲಾಯಿತು.

ಪೋಲೀಸ್ ತಂಡದ ಪಾತ್ರ:
ಕಾರ್ಯಾಚರಣೆಯಲ್ಲಿ ಮುಖ್ಯಪೇದೆಗಳಾದ ರಮೇಶ್ ಮತ್ತು ಪ್ರದೀಪ್ ಸೇರಿ ಹಲವು ಸಿಬ್ಬಂದಿಗಳು ಭಾಗವಹಿಸಿದ್ದರು.

ಬಂಧಿತನ ವಿರುದ್ಧ ಪ್ರಕರಣ ದಾಖಲಿಸಿರುವ ಅಬಕಾರಿ ಇಲಾಖೆ, ಹೆಚ್ಚಿನ ತನಿಖೆ ಮುಂದುವರಿಸಿದೆ.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago