ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಕವಿತಾಳ ಪಟ್ಟಣ ಪಂಚಾಯಿತಿಯಲ್ಲಿ ಅಚ್ಚರಿ ಮೂಡಿಸುವ ಘಟನೆ ನಡೆದಿದ್ದು, ಕಚೇರಿ ಆವರಣದಲ್ಲಿ ನಿಲ್ಲಿಸಿದ್ದ ಕಸದ ಲಾರಿಯನ್ನು ಕಳ್ಳರು ಎತ್ತಿಕೊಂಡು ಪರಾರಿಯಾದ ಘಟನೆ ಬೆಳಕಿಗೆ ಬಂದಿದೆ.
ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ, ಕಳ್ಳರು ರಾತ್ರಿ ವೇಳೆ ಕಚೇರಿ ಗೇಟ್‌ನ ಬೀಗ ಮುರಿದು ಒಳನುಗ್ಗಿದ್ದಾರೆ. ಆವರಣದಲ್ಲಿ ನಿಲ್ಲಿಸಿದ್ದ ನಾಲ್ಕು ಕಸದ ವಾಹನಗಳಲ್ಲಿ ಒಂದಾದ ಲಾರಿಯನ್ನು ಎತ್ತಿಕೊಂಡು ಪರಾರಿಯಾದಾಗ, ಗಾಬರಿಯಲ್ಲಿ ಲಾರಿ ಕಚೇರಿಯ ಕಾಂಪೌಂಡ್ ಗೋಡೆಗೆ ಡಿಕ್ಕಿಯಾದರೂ ಕೂಡ ಕಳ್ಳರು ಲಾರಿಯೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾರೆ.
ಕಳೆದ ಕೆಲ ದಿನಗಳಿಂದ ಡೀಸೆಲ್ ಲಭ್ಯತೆಯಲ್ಲಿ ಸಮಸ್ಯೆ ಎದುರಾಗಿದ್ದ ಹಿನ್ನೆಲೆಯಲ್ಲಿ ಎಲ್ಲಾ ಕಸದ ವಾಹನಗಳನ್ನು ಕಚೇರಿ ಆವರಣದಲ್ಲಿ ನಿಲ್ಲಿಸಲಾಗಿತ್ತು. ಅಲ್ಲದೆ, ಇತ್ತೀಚೆಗೆ ಸರ್ಕಾರದಿಂದ ಹಣ ಬಿಡುಗಡೆ ಆಗುತ್ತಿದ್ದಂತೆ ಈ ಲಾರಿಗಳಿಗೆ ಇನ್ಶೂರೆನ್ಸ್ ಮಾಡಲಾಗಿತ್ತು.
ಕಳವಾದ ಲಾರಿಯ ಮೌಲ್ಯ ಸುಮಾರು ₹8 ಲಕ್ಷದಷ್ಟಾಗಿದ್ದು, ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ. CCTV ಫೂಟೇಜ್‌ಗಳ ಪರಿಶೀಲನೆ ಹಾಗೂ ಸ್ಥಳೀಯ ಮಾಹಿತಿ ಆಧಾರಿತ ತನಿಖೆ ಮುಂದುವರೆದಿದೆ.
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…