Latest

ಲಂಚ ಪಡೆಯುವಾಗ ಜೆಸ್ಕಾಂ ಎಂಜಿನಿಯರ್ ಶೇಖರ್ ಅರೆಸ್ಟ್ : ಲೋಕಾಯುಕ್ತ ಪೊಲೀಸರ ದಾಳಿ

ಕಲಬುರಗಿಯಲ್ಲಿ ಮಂಗಳವಾರ ದಿನದ ಬೆಳಗ್ಗೆ ಮಹತ್ವದ ಭ್ರಷ್ಟಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿಯ (ಜೆಸ್ಕಾಂ) ಗ್ರಾಮೀಣ ವಿಭಾಗ-2ರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಯನಿರ್ವಾಹಕ ಎಂಜಿನಿಯರ್ ಶೇಖರ್ ಬಹುರೂಪಿ ಎಂಬವರು ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ವಿದ್ಯುತ್ ವಿತರಣೆಗೆ ಸಂಬಂಧಿಸಿದಂತೆ ಹೆಚ್ಚುವರಿ ಟ್ರಾನ್ಸ್‌ಫಾರ್ಮರ್‌ಗಳು, ಲೈನ್ ಮೆಂಟೆನನ್ಸ್‌, ಹೊಸ ಟಿಸಿಗಳ ಅನುಮೋದನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳ ಬಿಲ್ಲುಗಳ ಪಾಸ್ ಮಾಡಲು ಎರಡು ಲಕ್ಷ ರೂಪಾಯಿ ಲಂಚದಂತೆ ಹಣವನ್ನೇ ನಗದು ರೂಪದಲ್ಲಿ ಒಪ್ಪಿಕೊಳ್ಳುತ್ತಿದ್ದ ಸಂದರ್ಭದಲ್ಲಿ ಶೇಖರ್ ಅವರನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.

ಜೇವರ್ಗಿ ಮೂಲದ ಕಾಂಟ್ರಾಕ್ಟರ್ ಸಾಯಬಣ್ಣ ಪೂಜಾರಿ ಅವರು ಲೋಕಾಯುಕ್ತ ಇಲಾಖೆಗೆ ಈ ಸಂಬಂಧ ದೂರು ನೀಡಿದ್ದರು. ದೂರು ಆಧರಿಸಿ ಪೊಲೀಸರು ತನಿಖೆಗೆ ಮುಂದಾಗಿ ಪ್ರತ್ಯೇಕ ತಂಡ ರಚಿಸಿ ಕಾರ್ಯಾಚರಣೆ ನಡೆಸಿದ್ದರು.

ಲೋಕಾಯುಕ್ತ ಎಸ್‌ಪಿ ಬಿಕೆ. ಉಮೇಶ್ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಗೀತಾ ಬೆನಾಳ ನೇತೃತ್ವದ ತಂಡ ದಾಳಿಗೆ ನೇತೃತ್ವ ನೀಡಿದ್ದು, ಪೊಲೀಸರು ಆರೋಪಿಯನ್ನು ಸ್ಥಳದಲ್ಲಿಯೇ ಬಂಧಿಸುವಲ್ಲಿ ಯಶಸ್ವಿಯಾದರು. ಈ ಕಾರ್ಯಾಚರಣೆಯಲ್ಲಿ ಪೊಲೀಸರು ಬಸವರಾಜ್, ಎಂ.ಜಿ. ರಾಣುಜಿ, ಪ್ರದೀಪ್, ಹಣಮಂತ ಮತ್ತು ವಸಂತ್ ಸೇರಿ ಹಲವು ಸಿಬ್ಬಂದಿ ಸದಸ್ಯರು ಭಾಗವಹಿಸಿದ್ದರು.

ಈ ಘಟನೆ ರಾಜ್ಯದಲ್ಲಿ ವಿದ್ಯುತ್ ಇಲಾಖೆಯಲ್ಲಿನ ಭ್ರಷ್ಟಾಚಾರ ಮುಚ್ಚುಮರೆಯಾಗಿ ನಡೆಯುತ್ತಿರುವಿರುವುದನ್ನು ಮತ್ತೊಮ್ಮೆ ಉಲೆಯುತ್ತಿರುವ ಉದಾಹರಣೆಯಾಗಿದೆ.

nazeer ahamad

Recent Posts

ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ; ಬೇಸತ್ತು ಚರಂಡಿ ಸ್ವಚ್ಛಗೊಳಿಸಿದ ಮಹಿಳೆ.

ಕೊಟ್ಟೂರು:- ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಾಳು ಗ್ರಾಮದ ದುಮ್ಮಾಡಿ ಕೆಂಚಮ್ಮ ಎಂಬ ಮಹಿಳೆಯೋರ್ವರು ತಮ್ಮ…

21 minutes ago

ಬಸವನ ಬಾಗೇವಾಡಿಯಲ್ಲಿ ಅಕ್ರಮ LPG ರೀಫಿಲ್ಲಿಂಗ್ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…

7 hours ago

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

1 day ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

2 days ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago